For Quick Alerts
ALLOW NOTIFICATIONS  
For Daily Alerts
 

DC vs SRH: ಈ ಮೈಲಿಗಲ್ಲುಗಳ ಮೇಲೆ ಅಮಿತ್ ಮಿಶ್ರಾ ಮತ್ತು ಅಜಿಂಕ್ಯಾ ರಹಾನೆ ಕಣ್ಣು

IPL 2021, SRH vs DC : Player Records and Approaching Milestones

ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಪುನರ್ ಆರಂಭಿಸಲಾಗಿದೆ. ಹೌದು, ಸೆಪ್ಟೆಂಬರ್ 19ರ ಭಾನುವಾರದಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತದ ನಾಲ್ಕನೇ ಪಂದ್ಯ ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪ್ರಸ್ತುತ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಕುಸಿದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಲಿದೆ. ಟೂರ್ನಿಯಲ್ಲಿ ಇದುವರೆಗೂ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಜಯ ಗಳಿಸಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಸೋಲುಂಡು 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 7 ಪಂದ್ಯಗಳನ್ನಾಡಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯಗಳಿಸಿದ್ದು, ಬರೋಬ್ಬರಿ 6 ಪಂದ್ಯಗಳಲ್ಲಿ ಸೋಲುಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಹೀಗೆ ಟೂರ್ನಿಯಲ್ಲಿ ಅತಿ ಹೆಚ್ಚು ಜಯ ಸಾಧಿಸಿರುವ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಡಿಮೆ ಜಯ ಸಾಧಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಎರಡೂ ತಂಡಗಳ ವಿವಿಧ ಆಟಗಾರರು ತಮ್ಮ ತಮ್ಮ ವೈಯಕ್ತಿಕ ದಾಖಲೆಗಳನ್ನು ನಿರ್ಮಿಸುವ ಹಂತದಲ್ಲಿದ್ದಾರೆ. ಹೌದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಕೆಲ ಆಟಗಾರರು ತಮ್ಮದೇ ಆದ ವೈಯಕ್ತಿಕ ಮೈಲಿಗಲ್ಲುಗಳನ್ನು ಈ ಪಂದ್ಯದ ಮೂಲಕ ನಿರ್ಮಿಸಲಿದ್ದು ಅವುಗಳ ಮಾಹಿತಿ ಮುಂದೆ ಇದೆ ಓದಿ..

ಅಮಿತ್ ಮಿಶ್ರಾ ಮುಟ್ಟಲಿರುವ ಮೈಲಿಗಲ್ಲುಗಳು

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಅಮಿತ್ ಮಿಶ್ರಾ ಇಂದು ( ಸೆಪ್ಟೆಂಬರ್ 22 ) ನಡೆಯಲಿರುವ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ವಿರುದ್ಧದ ಪಂದ್ಯದ ಮೂಲಕ ಈ ಕೆಳಕಂಡ ಮೈಲಿಗಲ್ಲುಗಳನ್ನು ನಿರ್ಮಿಸಲಿದ್ದಾರೆ.

* ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯದಲ್ಲಿ ಅಮಿತ್ ಮಿಶ್ರಾ ಕಣಕ್ಕಿಳಿದರೆ ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅಮಿತ್ ಮಿಶ್ರಾ ಆಡಲಿರುವ 100ನೇ ಐಪಿಎಲ್ ಪಂದ್ಯವಾಗಲಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ 100 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಮೈಲಿಗಲ್ಲನ್ನು ಅಮಿತ್ ಮಿಶ್ರಾ ಮುಟ್ಟಲಿದ್ದಾರೆ.

* ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲು ಅಮಿತ್ ಮಿಶ್ರಾಗೆ 5 ವಿಕೆಟ್‍ಗಳ ಅಗತ್ಯತೆಯಿದೆ. ಲಸಿತ್ ಮಾಲಿಂಗ 170 ಟಿಕೆಟ್ ಪಡೆದುಕೊಳ್ಳುವುದರ ಮೂಲಕ ಅತಿಹೆಚ್ಚು ಐಪಿಎಲ್ ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಸದ್ಯ ಇಲ್ಲಿಯವರೆಗೂ 166 ಐಪಿಎಲ್ ವಿಕೆಟ್ ಪಡೆದಿರುವ ಅಮಿತ್ ಮಿಶ್ರಾ ಈ ಪಂದ್ಯದಲ್ಲಿ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ನೂತನ ದಾಖಲೆಯನ್ನು ನಿರ್ಮಿಸಲಿದ್ದಾರೆ.

ವೃದ್ಧಿಮಾನ್ ಸಹಾ ಮೈಲಿಗಲ್ಲು

ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಹಾ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ 1987 ರನ್ ಕಲೆಹಾಕಿದ್ದು 2000 ಐಪಿಎಲ್ ರನ್ ಪೂರೈಸಲು 13 ರನ್‌ಗಳ ಅಗತ್ಯವಿದೆ. ಹೀಗಾಗಿ ಇಂದು ( ಸೆಪ್ಟೆಂಬರ್ 22 ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ವೃದ್ಧಿಮಾನ್ ಸಹಾ 13 ರನ್ ಕಲೆಹಾಕಿದರೆ 2000 ಐಪಿಎಲ್ ರನ್ ಪೂರೈಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಅಜಿಂಕ್ಯಾ ರಹಾನೆ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಅಜಿಂಕ್ಯ ರಹಾನೆ 4000 ಐಪಿಎಲ್ ರನ್ ಪೂರೈಸುವ ಹೊಸ್ತಿಲಲ್ಲಿದ್ದಾರೆ. ಹೀಗೆ 4000 ಐಪಿಎಲ್ ರನ್‌ಗಳನ್ನು ಪೂರೈಸಲು ಅಜಿಂಕ್ಯ ರಹಾನೆಗೆ ಇನ್ನೂ 56 ರನ್‌ಗಳ ಅಗತ್ಯವಿದ್ದು, ಇಂದು ( ಸೆಪ್ಟೆಂಬರ್ 22 ) ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅಜಿಂಕ್ಯ ರಹಾನೆ 56 ರನ್ ಬಾರಿಸಿದರೆ 4000 ಐಪಿಎಲ್ ರನ್ ಪೂರೈಸಿದ ಆಟಗಾರ ಎಂಬ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಸಿದ್ಧಾರ್ಥ್ ಕೌಲ್

ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಸಿದ್ಧಾರ್ಥ್ ಕೌಲ್ ತನ್ನ ತಂಡದ ಪರ 50 ವಿಕೆಟ್ ಪೂರೈಸಲು 2 ವಿಕೆಟ್‍ಗಳ ಅಗತ್ಯತೆಯಿದ್ದು ಇಂದು ( ಸೆಪ್ಟೆಂಬರ್ 22 ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಈ ಮೈಲಿಗಲ್ಲನ್ನು ಮುಟ್ಟುವ ಸಾಧ್ಯತೆಗಳಿವೆ.

Story first published: Wednesday, September 22, 2021, 14:32 [IST]
Other articles published on Sep 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+