2021ರ ಐಪಿಎಲ್ ಪ್ರಶಸ್ತಿ ಗೆಲ್ಲೋದೇ ಅಂತಿಮ ಗುರಿ: ಸ್ಟೀವ್ ಸ್ಮಿತ್

ಮುಂಬೈ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆಲ್ಲೋದೇ ನಮ್ಮ ಅಂತಿಮ ಗುರಿ ಎಂದು ಡೆಲ್ಲಿ ಕ್ಯಾಪಿಟಲ್ಸ್‌ನ ಆಟಗಾರ ಸ್ಟೀವ್ ಸ್ಮಿತ್ ಹೇಳಿದ್ದಾರೆ. 2020ರ ಆವೃತ್ತಿಯಲ್ಲಿ ಡೆಲ್ಲಿ ತಂಡ ಚೊಚ್ಚಲ ಬಾರಿಗೆ ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಗೆದ್ದಿತ್ತು.
ಆಸ್ಟ್ರೇಲಿಯಾ ಟೆಸ್ಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಕಳೆದ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡಿದ್ದರು. ಆದರೆ ಈ ಬಾರಿ ಹರಾಜಿನ ವೇಳೆ ರಾಜಸ್ಥಾನ್ ತಂಡ ಸ್ಮಿತ್ ಅವರನ್ನು ತಂಡದಿಂದ ಹೊರಗಿಟ್ಟಿತ್ತು. ಹೀಗಾಗಿ ಸ್ಮಿತ್ 2.2 ಕೋಟಿ ರೂ.ಗೆ ಡೆಲ್ಲಿ ಪಾಲಾಗಿದ್ದರು.
ಡೆಲ್ಲಿ ತಂಡದಲ್ಲಿದ್ದು ಅನುಭವ ಹಂಚಿಕೊಂಡ ಸ್ಮಿತ್, 'ತಂಡದ ಗೆಲುವಿಗಾಗಿ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ. ಎಲ್ಲರೂ ತಂಡದಲ್ಲಿದ್ದು ಸಮಯವನ್ನು ಎಂಜಾಯ್ ಮಾಡುತ್ತಿದ್ದೇವೆ. ಆದರೆ ಸಹಜವಾಗೇ ಅಂತಿಮವಾಗಿ ಪ್ರಶಸ್ತಿ ಗೆಲ್ಲೋದೇ ಮುಖ್ಯ,' ಎಂದಿದ್ದಾರೆ.
ಐಪಿಎಲ್‌ನಲ್ಲಿ ಟ್ರೋಫಿ ಗೆಲ್ಲದ ತಂಡಗಳ ಸಾಲಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿವೆ. ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ 3 ಪಂದ್ಯ ಗೆದ್ದು ಡೆಲ್ಲಿ 3ನೇ ಸ್ಥಾನದಲ್ಲಿದೆ. ಡೆಲ್ಲಿಯ ಎಂದಿನ ನಾಯಕ ಶ್ರೇಯಸ್ ಐಯ್ಯರ್ ಗಾಯಗೊಂಡು ತಂಡದಿಂದ ಹೊರ ಬಿದ್ದಿರುವುದರಿಂದ ನಾಯಕತ್ವ ರಿಷಭ್ ಪಂತ್ ವಹಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications