ಈ ಬಾರಿ ಐಪಿಎಲ್ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ಬೈರ್‌ಸ್ಟೋವ್

ಭಾರತ - ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಜಾನಿ ಬೈರ್‌ಸ್ಟೋವ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಸೇರಿಕೊಳ್ಳಲಿರುವ ಜಾನಿ ಬೈರ್‌ಸ್ಟೋವ್ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬುದನ್ನು ಹೆಸರಿಸಿದ್ದಾರೆ. ಏಪ್ರಿಲ್ 9ರಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನ 14ನೇ ಆವೃತ್ತಿ ಆರಂಭಗೊಳ್ಳುತ್ತಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾಧಾರಣ ಪ್ರದರ್ಶನ ತೋರಿದ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ತಲುಪಲಷ್ಟೇ ಶಕ್ತವಾಯಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಹೈದರಾಬಾದ್ ಫೈನಲ್ ತಲುಪುವ ಅವಕಾಶ ವಂಚಿತವಾಗಿ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಕಪ್ ಗೆಲ್ಲುವ ಒಳ್ಳೆಯ ಅವಕಾಶವನ್ನು ಹೊಂದಿದೆ ಎಂದು ಜಾನಿ ಬೈರ್‌ಸ್ಟೋವ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಬೈರ್‌ಸ್ಟೋವ್ ಐಪಿಎಲ್ ಒಂದು ಅದ್ಭುತ ಟೂರ್ನಿ, ಪ್ರತಿಯೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಬೇಕು ಎಂಬ ಕನಸನ್ನು ಹೊಂದಿರುತ್ತಾನೆ ಎಂದು ಹೇಳಿದರು. ಇನ್ನೊಂದು ವಾರದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಳ್ಳಲಿರುವ ಬಗ್ಗೆ ಉತ್ಸುಕನಾಗಿರುವ ಜಾನಿ ಬೈರ್‌ಸ್ಟೋವ್ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕಪ್ ಗೆಲ್ಲುವ ಒಳ್ಳೆಯ ಅವಕಾಶವಿದೆ ಎಂದಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಉತ್ತಮ ಪ್ರದರ್ಶನವನ್ನು ತೋರುತ್ತಿದ್ದು ಎಲ್ಲರೂ ಒಟ್ಟಿಗೆ ಸೇರಿದಾಗ ತಂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಹೀಗಾಗಿ ಈ ಬಾರಿ ಕಪ್ ಗೆಲ್ಲುವ ಅವಕಾಶ ನಮಗೆ ಹೆಚ್ಚಿದೆ ಎಂದು ಬೈರ್‌ಸ್ಟೋವ್ ವಿಶ್ವಾಸ ವ್ಯಕ್ತಪಡಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications