For Quick Alerts
ALLOW NOTIFICATIONS  
For Daily Alerts
 

CSK vs SRH: ಚೆನ್ನೈ ತಂಡಕ್ಕೆ ಸಾಧಾರಣ ರನ್‌ಗಳ ಗುರಿ ನೀಡಿದ ಹೈದರಾಬಾದ್

IPL 2021: Sunrisers Hyderabad have given the target of 135 runs to Chennai Super Kings

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 44ನೇ ಪಂದ್ಯ ಇಂದು ( ಸೆಪ್ಟೆಂಬರ್ 30 ) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡುವುದರ ಮೂಲಕ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 135 ರನ್‌ಗಳ ಸಾಧಾರಣ ಗುರಿಯನ್ನು ನೀಡಿದೆ.

ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿ ವಿಶ್ವಾಸವನ್ನು ಮೂಡಿಸಿದ್ದ ಜೇಸನ್ ರಾಯ್ ಈ ಪಂದ್ಯದಲ್ಲಿ ಕೇವಲ 2 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ಮತ್ತೊಂದೆಡೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ವೃದ್ಧಿಮಾನ್ ಸಹಾ 44 ರನ್ ಗಳಿಸಿದರು, ನಾಯಕ ಕೇನ್ ವಿಲಿಯಮ್ಸನ್ 11 ರನ್ ಗಳಿಸಿ ಮತ್ತೊಮ್ಮೆ ವಿಫಲರಾದರು, ಇನ್ನುಳಿದಂತೆ ಪ್ರಿಯಮ್ ಗಾರ್ಗ್ 7, ಅಭಿಷೇಕ್ ಶರ್ಮಾ 18, ಅಬ್ದುಲ್ ಸಮದ್ 18, ಜೇಸನ್ ಹೋಲ್ಡರ್ 5, ಭುವನೇಶ್ವರ್ ಕುಮಾರ್ ಅಜೇಯ 2 ಮತ್ತು ರಶೀದ್ ಖಾನ್ ಅಜೇಯ 17 ರನ್ ಗಳಿಸುವುದರ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 135 ರನ್‌ಗಳ ಸಾಧಾರಣ ಗುರಿಯನ್ನು ನೀಡಿದೆ.

ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್‌ಗಳು ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್‌ಗಳ ಮೇಲೆ ಆರಂಭದಿಂದಲೂ ಒತ್ತಡವನ್ನು ಹೇರುತ್ತಾ ಬಂದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೋಶ್ ಹೇಜಲ್ ವುಡ್ 3 ವಿಕೆಟ್, ಡ್ವೇನ್ ಬ್ರಾವೊ 2 ವಿಕೆಟ್ ಮತ್ತು ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಅಲ್ಪ ಮೊತ್ತಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

{cricket_4-2021_50849}

ಆಡುವ ಬಳಗಗಳು:

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಮ್ ಗಾರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್ ಮತ್ತು ಸಂದೀಪ್ ಶರ್ಮಾ.

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ ( ನಾಯಕ ಮತ್ತು ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಮತ್ತು ಜೋಶ್ ಹೇಜಲ್‌ವುಡ್

Story first published: Thursday, September 30, 2021, 21:22 [IST]
Other articles published on Sep 30, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+