IPL: SRH vs KKR, Live: ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಐಪಿಎಲ್‌ನ ಮೂರನೇ ಸೆಣೆಸಾಟದಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯ ಎರಡು ಪಂದ್ಯಗಳಲ್ಲಿಯೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಆ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಎಂಬುದು ಕುತೂಹಲ ಮೂಡಿಸಿದೆ. ಡೇವಿಡ್ ವಾರ್ನರ್ ಮುನ್ನಡೆಸುತ್ತಿರುವ ಹೈದರಾಬಾದ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಕನ್ನಡಿಗ ಮನೀಶ್ ಪಾಂಡೆ ಇಂದು ಕಣಕ್ಕಿಳಿಯುತ್ತಿದ್ದಾರೆ.

ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ಆಡುವ ಬಳಗದಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ಗೆ ಕೆಕೆಆರ್ ತಂಡದ ಪಾಲಾಗಿರುವ ಅನುಭವಿ ಹರ್ಭಜನ್ ಸಿಂಗ್ ಕೂಡ ಕೆಕೆಆರ್ ಆಡುವ ಬಳಗದಲ್ಲಿದ್ದಾರೆ

Live ಸ್ಕೋರ್‌ಕಾರ್ಡ್ ಇಲ್ಲಿದೆ:

1
50811

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ:
ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮನೀಶ್ ಪಾಂಡೆ, ವಿಜಯ್ ಶಂಕರ್, ಅಬ್ದುಲ್ ಸಮದ್, ಮೊಹಮ್ಮದ್ ನಬಿ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಸಂದೀಪ್ ಶರ್ಮಾ

ಕೋಲ್ಕತಾ ನೈಟ್ ರೈಡರ್ಸ್ ಆಡುವ ಬಳಗ:
ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮೋರ್ಗಾನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸ್ಸೆಲ್, ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ

For Quick Alerts
ALLOW NOTIFICATIONS
For Daily Alerts
Story first published: Sunday, April 11, 2021, 19:10 [IST]
Other articles published on Apr 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X