ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 37ನೇ ಪಂದ್ಯದಲ್ಲಿ ಇಂದು (ಸೆಪ್ಟೆಂಬರ್ 25) ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡಿದೆ.
ನಾವು ತಟಸ್ಥ ತಾಣದಲ್ಲಿ ಸರಣಿ ನಡೆಸಲ್ಲ: ಪಾಕಿಸ್ತಾನ ಕ್ರಿಕೆಟ್ ಬೋರ್ಡ್
ಐಪಿಎಲ್ ದ್ವಿತೀಯ ಹಂತದ ಮೊದಲ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದವು. ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತ್ತು. ಸನ್ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿತ್ತು. ಹೀಗಾಗಿ ಎರಡೂ ತಂಡಗಳಿಗೂ ಗೆಲುವು ಪ್ರಮುಖವೆನಿಸಿದೆ.
ಐಪಿಎಲ್ 2021: ಹೈದರಾಬಾದ್ vs ಪಂಜಾಬ್, Live ಸ್ಕೋರ್
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್
ಸನ್ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಮನೀಶ್ ಪಾಂಡೆ, ಕೇದಾರ್ ಜಾಧವ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್