ಐಪಿಎಲ್ 2021: ಟೂರ್ನಿ ಮುಂದೂಡಿಕೆ ವೇಳೆ ಅಂಕಪಟ್ಟಿ ಹೇಗಿದೆ ಗೊತ್ತಾ!

ಐಪಿಎಲ್ 14ನೇ ಆವೃತ್ತಿ ಈಗ ಅರ್ಧಕ್ಕೆ ಮುಂದೂಡಿಕೆಯಾಗಿದೆ. ಎಲ್ಲಾ ತಂಡಗಳು ಕೂಡ ಮೊದಲ ಹಂತದ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎರಡನೇ ಹಂತದ ಪಂದ್ಯಾವಳಿಯ ಮೊದಲ ಮುಖಾಮುಖಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮಧ್ಯೆ ನಡೆದಿತ್ತು. ಉಳಿದ ತಂಡಗಳು ಲೀಗ್ ಹಂತದ ಭರ್ತಿ ಅರ್ಧ ಪಂದ್ಯಾವಳಿಯನ್ನು ಮುಗಿಸಿದೆ.
ಈ ಹಂತದಲ್ಲಿ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 8 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಸೋತು 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ 12 ಅಂಕಗಳನ್ನು ಗಳಿಸಿದ್ದು ಟೂರ್ನಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಅಂಕಗಳಿಕೆಯಲ್ಲಿ ಆರ್‌ಸಿಬಿ-ಸಿಎಸ್‌ಕೆ ಸಮ
ಇನ್ನು ಟೂರ್ನಿ ಮುಂದೂಡಿಕೆಯಾಗುವ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಇದ್ದರೆ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವಿದೆ. ಈ ಎರಡು ತಂಡಗಳು ಕೂಡ ಆಡಿದ 7 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿ 10 ಅಂಕಗಳನ್ನು ಸಂಪಾದಿಸಿದ್ದು ರನ್‌ರೇಟ್‌ನಲ್ಲಿ ಧೋನಿ ಪಡೆ ಉತ್ತಮ ಸಾಧನೆ ತೋರಿ ಮುಂಚೂಣಿಯಲ್ಲಿದೆ. ಇನ್ನು ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಮತ್ತೊಂದು ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್.

ತಳ ಕಂಡ ಹೈದರಾಬಾದ್
ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ತಳಭಾಗದಲ್ಲಿದೆ. ಏಳು ಪಂದ್ಯಗಳನ್ನು ಆಡಿರುವ ಹೈದರಾಬಾದ್ ತಂಡ ಕೇವಲ ಒಂದು ಪಂದ್ಯವನ್ನಷ್ಟೇ ಗೆದ್ದಿದ್ದು 2 ಅಂಕವನ್ನು ಹೊಂದಿದೆ.

ಪರ್ಪಲ್ ಕ್ಯಾಪ್ ಹಾಗೂ ಆರೆಂಜ್ ಕ್ಯಾಪ್
ಇನ್ನು ಟೂರ್ನಿಯ ಮೊದಲಾರ್ಧದ ಪ್ರದರ್ಶನದಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿದ ಆಟಗಾರರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ ಧವನ್ 8 ಪಂದ್ಯಗಳಲ್ಲಿ 380 ರನ್‌ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಹೆಚ್ಚು ವಿಕೆಟ್ ಪಡೆದ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್‌ಸಿಬಿ ತಂಡದ ಹರ್ಷಲ್ ಪಟೇಲ್ ಅಗ್ರಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ ಹರ್ಷಲ್ 17 ವಿಕೆಟ್ ಸಂಪಾದಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications