ಐಪಿಎಲ್ ಆಡುವುದು ಕೇವಲ ದುಡ್ಡಿಗೋಸ್ಕರ ಅಲ್ಲ ಎಂದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹಲವು ಕ್ರಿಕೆಟಿಗರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂದು ಸ್ಟಾರ್ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಆಟಗಾರರು ಅಂತಾರಾಷ್ಟ್ರೀಯ ತಂಡಗಳಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡ ಹಲವಾರು ಉದಾಹರಣೆಗಳಿವೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿಯೂ ಸಹ ಯುವ ಪ್ರತಿಭೆಗಳು ಮಿಂಚು ಹರಿಸಿದ್ದನ್ನು ನೀವು ಗಮನಿಸಿರಬಹುದು. ಆದರೆ ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ಐಪಿಎಲ್ ಟೂರ್ನಿಯನ್ನು ಮುಂದೂಡಿದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾದ ಬೌಲರ್ ಟಬ್ರೈಜ್ ಶಂಸಿ ಐಪಿಎಲ್ ಮತ್ತು ಸಿಪಿಎಲ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಕೆರಿಬಿಯನ್ ಪ್ರೀಮಿಯರ್ ಲೀಗ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಕ್ರಿಕೆಟ್ ಜೀವನದಲ್ಲಿ ದೊಡ್ಡ ತಿರುವನ್ನು ನೀಡಿದವು ಎಂದು ಶಂಸಿ ಹೇಳಿಕೊಂಡಿದ್ದಾರೆ. ತುಂಬಾ ಜನ ಆಟಗಾರರು ಐಪಿಎಲ್ ಟೂರ್ನಿಗಳಲ್ಲಿ ಭಾಗವಹಿಸುವುದು ಹಣಕ್ಕಾಗಿ ಎಂದು ತಪ್ಪಾಗಿ ತಿಳಿದುಕೊಂಡಿದ್ದಾರೆ, ಆದರೆ ಐಪಿಎಲ್ ಟೂರ್ನಿಯಿಂದ ಆಟಗಾರನೊಬ್ಬ ಬಹಳಷ್ಟು ವಿಷಯಗಳನ್ನು ಕಲಿಯುತ್ತಾನೆ, ಕೇವಲ ದುಡ್ಡಿಗಾಗಿ ಆಟಗಾರರು ಐಪಿಎಲ್ ಟೂರ್ನಿಗಳಲ್ಲಿ ಭಾಗವಹಿಸುವುದಿಲ್ಲ ಎಂದು ಶಂಸಿ ತಿಳಿಸಿದರು.

ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿ ನಂತರ ಐಪಿಎಲ್ ಟೂರ್ನಿಯಲ್ಲಿ ಆಡಿದ ತನಗೆ ದಕ್ಷಿಣ ಆಫ್ರಿಕಾ ತಂಡದ ಪರ ಆಡಲು ಹೆಚ್ಚಿನ ಅವಕಾಶಗಳು ಸಿಕ್ಕಿತು ಎಂದು ಶಂಸಿ ತಿಳಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ವಿವಿಧ ದೇಶಗಳ ಹಲವಾರು ಆಟಗಾರರ ಜೊತೆ ಆಡುವುದರಿಂದ ಬಹಳಷ್ಟು ವಿಷಯಗಳನ್ನು ಕಲಿಯಬಹುದು, ತನ್ನ ಬೌಲಿಂಗ್ ಕೂಡ ಐಪಿಎಲ್ ಟೂರ್ನಿಯ ಮುಖಾಂತರ ಸಾಕಷ್ಟು ಅಭಿವೃದ್ಧಿಗೊಂಡಿತು ಎಂದು ಟಬ್ರೈಜ್ ಶಂಸಿ ಐಪಿಎಲ್ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

For Quick Alerts
ALLOW NOTIFICATIONS
For Daily Alerts
Story first published: Thursday, May 6, 2021, 17:22 [IST]
Other articles published on May 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X