ಬೇಡವಾಗಿದ್ದ ಕೆಟ್ಟ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ಆರ್‌ಸಿಬಿ

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನ ಮೊದಲ ನಾಲ್ಕು ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.
ಆದರೆ ಭಾನುವಾರ ( ಏಪ್ರಿಲ್ 25 ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವಿನ ಪಂದ್ಯದಲ್ಲಿ, ಚೆನ್ನೈ ತಂಡ ಬೆಂಗಳೂರು ವಿರುದ್ಧ 69 ರನ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿತ್ತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತ್ತು. 192 ರನ್‌ಗಳ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್‌ಗಳು ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದರು. 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿ 69 ರನ್‌ಗಳ ಅಂತರದಿಂದ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಟ್ಟ ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದುಕೊಂಡಿತು.
ಹೌದು ಚೆನ್ನೈ ವಿರುದ್ಧ ಪಂದ್ಯವನ್ನು ಸೋಲುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ 50ಕ್ಕಿಂತ ಹೆಚ್ಚು ರನ್‌ಗಳ ಅಂತರದಲ್ಲಿ ಅತಿಹೆಚ್ಚು ಪಂದ್ಯಗಳನ್ನು ಸೋತಿರುವ ತಂಡ ಎನ್ನುವ ಕೆಟ್ಟ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಹೆಸರಿಗೆ ಬರೆದುಕೊಂಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ 14 ಪಂದ್ಯಗಳನ್ನು 50ಕ್ಕಿಂತ ಅಧಿಕ ರನ್ ಅಂತರದಿಂದ ಸೋತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊರತುಪಡಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ 13 ಬಾರಿ 50ಕ್ಕಿಂತ ಅಧಿಕ ರನ್ ಅಂತರದಲ್ಲಿ ಪಂದ್ಯಗಳನ್ನು ಸೋತು ಈ ಕೆಟ್ಟ ದಾಖಲೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಉಳಿದಂತೆ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಲಾ 8 ಪಂದ್ಯಗಳಲ್ಲಿ 50ಕ್ಕಿಂತ ಅಧಿಕ ರನ್ ಅಂತರದಲ್ಲಿ ಸೋಲುಂಡಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications