ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ನಿ‍ಷೇಧಿಸಿದ ತಾಲಿಬಾನ್ ಸರ್ಕಾರ: ಕೊಟ್ಟ ಕಾರಣ ಏನ್‌ ಗೊತ್ತಾ?!

ಐಪಿಎಲ್ 14ನೇ ಆವೃತ್ತಿಯ ಉಳಿದ ಪಂದ್ಯಗಳು ಯುಎಇನಲ್ಲಿ ಆರಂಭವಾಗಿದೆ. ಜಗತ್ತಿನೆಲ್ಲೆಡೆ ಇರುವ ಕ್ರಿಕೆಟ್ ಪ್ರೇಮಿಗಳು ಈ ಟೂರ್ನಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಆದರೆ ಅಫ್ಘಾನಿಸ್ತಾನದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಈ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಯ ಪ್ರಸಾರಕ್ಕೆ ನಿಷೇಧ ಹೇರಿದೆ. ಎಲ್ಲಾ ಂಆಧ್ಯಮಗಳಿಗೂ ಎಚ್ಚರಿಕೆ ರವಾನಿಸಿರುವ ತಾಲಿಬಾನ್ ಐಪಿಎಲ್‌ನ ಯುಎಇನಲ್ಲಿ ನಡೆಯುವ ಪಂದ್ಯಗಳನ್ನು ಪ್ರಸಾರ ಮಾಡದಂತೆ ಸೂಚಿಸಿದೆ. ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಉಪಸ್ಥಿತರಿರುವ ಕಾರಣದಿಂದಾಗಿಈ ನಿರ್ಧಾರವನ್ನು ತಾಲಿಬಾನ್ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದೆ.

ಐಪಿಎಲ್ ಇತಿಹಾಸದಲ್ಲಿ 7ನೇ ಬಾರಿಗೆ ಮೂರಂಕಿ ದಾಟಲು ವಿಫಲವಾದ ಆರ್‌ಸಿಬಿಐಪಿಎಲ್ ಇತಿಹಾಸದಲ್ಲಿ 7ನೇ ಬಾರಿಗೆ ಮೂರಂಕಿ ದಾಟಲು ವಿಫಲವಾದ ಆರ್‌ಸಿಬಿ

ಅಫ್ಘಾನಿಸ್ತಾನದ ಪತ್ರಕರ್ತ ಫಾವದ್ ಅಮನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಅವರು "ಹಾಸ್ಯಾಸ್ಪದ, ಅಫ್ಘಾನಿಸ್ತಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಪ್ರಸಾರವನ್ನು ತಾಲಿಬಾನ್ ನಿಷೇಧಿಸಿದೆ. ಕ್ರೀಡಾಂಗಣಗಳಲ್ಲಿ ಮಹಿಳಾ ಪ್ರೇಕ್ಷಕರ ಉಪಸ್ಥಿತಿ ಹಾಗೂ ಯುವತಿಯರು ನೃತ್ಯಗಳನ್ನು ಮಾಡುವ ಕಾರಣದಿಂದಾಗಿ ಅಫ್ಘಾನ್ ಮಾಧ್ಯಮಗಳು ಐಪಿಎಲ್‌ ಲೀಗ್‌ನ ಪ್ರಸಾರವನ್ನು ಮಾಡಬಾರದು ಎಂದು ತಾಲಿಬಾನ್ ಎಚ್ಚರಿಸಿದೆ" ಎಂದುಬರೆದುಕೊಂಡಿದ್ದಾರೆ.

ಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ

ಐಪಿಎಲ್‌ನ ಯುಎಇ ಚರಣದ ಪಂದ್ಯಗಳೂ ಈಗಾಗಲೇ ಆರಂಭವಾಗಿದೆ. ಈಗಾಗಲೇ ಇದರಲ್ಲಿ ಎರಡು ಪಂದ್ಯಗಳು ಮುಕ್ತಾಯವಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಸೆಣೆಸಾಟ ಅಂತ್ಯವಾಗಿದೆ. ಮಂಗಳವಾರ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಬಾರಿಯ ಐಪಿಎಲ್‌ನ ನಾಕೌಟ್ ಹಂತದ ಪಂದ್ಯಗಳು ಅಕ್ಟೋಬರ್ 10ರಿಂದ ನಡೆಯಲಿದ್ದು ಅಕ್ಟೋಬರ್ 15ರಂದು ಫೈನಲ್ ಪಂದ್ಯ ನಡೆಯಲಿದೆ.

'ಧೋನಿ ಟಿಪ್ಸ್ ಕೊಟ್ಟಿದ್ದಾರೆ, ಒಳ್ಳೆಯ ಆರಂಭ ಸಿಕ್ಕಿದೆ, ಈ ಸಲ ಕಪ್ ನಮ್ದೇ' ಎಂದ ಆರ್‌ಸಿಬಿ ಆಟಗಾರ!'ಧೋನಿ ಟಿಪ್ಸ್ ಕೊಟ್ಟಿದ್ದಾರೆ, ಒಳ್ಳೆಯ ಆರಂಭ ಸಿಕ್ಕಿದೆ, ಈ ಸಲ ಕಪ್ ನಮ್ದೇ' ಎಂದ ಆರ್‌ಸಿಬಿ ಆಟಗಾರ!

ಗಮನಾರ್ಹ ಸಂಗತಿಯೆಂದರೆ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಅಫ್ಘಾನಿಸ್ತಾನದಲ್ಲಿ ಸಾಕಷ್ಟು ಈಗಾಗಲೇ ಸಾಕಷ್ಟು ರೀತಿಯ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಇದರಲ್ಲಿ ಮಹಿಳೆಯರ ಕ್ರೀಡೆಗಳು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇನ್ನು ಅಫ್ಘಾನಿಸ್ತಾದ ತಾಲಿಬಾನ್ ಸರ್ಕಾರ ಮಹಿಳೆಯರ ಕ್ರಿಕೆಟ್‌ಗೆ ಮಾನ್ಯತೆ ನೀಡುವುದಿಲ್ಲ ಎಂಬುದಾಗಿ ತಾಲಿಬಾನ್ ವಕ್ತಾರ ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಆ ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾ ಮಹಿರಂಗ ಪ್ರಕಟಣೆಯನ್ನು ಹೊರಡಿಸಿತ್ತು. ತಾಲಿಬಾನ್ ಸರ್ಕಾರ ಮಹಿಳೆಯರ ಕ್ರಿಕೆಟ್‌ಗೆ ಮನ್ನಣೆ ನೀಡದಿದ್ದರೆ ಮುಂಬರುವ ಅಪ್ಘಾನಿಸ್ತಾನ ವಿರುದ್ಧದ ಏಕೈಕ ಪಂದ್ಯದ ಟೆಸ್ಟ್ ಸರಣಿಯ ಆಯೋಜನೆಯಿಂದ ಹಿಂದಕ್ಕೆ ಸರಿಯುವುದಾಗಿ ಎಚ್ಚರಿಸಿತ್ತು.

ತಾಲಿಬಾನ್ ಸರ್ಕಾರದ ಸಾಂಸ್ಕೃತಿಕ ಆಯೋಗದ ವಕ್ತಾರ ಅಹ್ಮದುಲ್ಲಾ ವಾಸಿಕ್ ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಇಸ್ಲಾಮಿಕ್ ಕಾನೂನು ಪ್ರಕಾರ ಮಹಿಳಾ ಕ್ರಿಕೆಟ್‌ಗೆ ಅನುಮತಿಯಿಲ್ಲ ಎಂದು ತಿಳಿಸಿದ್ದಾರೆ. "ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಇನ್ಯಾವುದೇ ಕ್ರೀಡೆಯಲ್ಲಿ ಭಾಗವಹಿಸಲು ಅನುಮತಿಯನ್ನು ನೀಡುವುದಿಲ್ಲ" ಎಂದು ಪ್ರತಿಕ್ರಿಯೆ ನೀಡಿರುವುದನ್ನು ಆಸ್ಟ್ರೇಲಿಯಾದ ಮಾಧ್ಯಮ ಎಸ್‌ಬಿಎಸ್ ಟಿವಿ ಉಲ್ಲೇಖ ಮಾಡಿದೆ.

"ಕ್ರಿಕೆಟ್‌ನಲ್ಲಿ ಮಹಿಳಾ ಆಟಗಾರ್ತಿಯರ ಮುಖ ಅಥವಾ ದೇಹ ಮುಚ್ಚಿಕೊಳ್ಳದೆ ಇರಬಹುದಾದ ಸಂದರ್ಭಗಳು ಬರಬಹುದು. ಇಸ್ಲಾಂ ಮಹಿಳೆಯರನ್ನು ಈ ರೀತಿಯಾಗಿರಲು ಅನುಮತಿ ನೀಡುವುದಿಲ್ಲ. ಇದು ಮಾಧ್ಯಮಗಳ ಕಾಲ. ಈಗ ಫೋಟೋಗಳು ಹಾಗೂ ವಿಡಿಯೋಗಳು ಚಿತ್ರೀಕರಿಸುತ್ತವೆ. ಬಳಿಕ ಜನರು ಇದನ್ನು ನೊಡುತ್ತಾರೆ. ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ಸ್ ಮಹಿಳೆಯರು ಕ್ರಿಕೆಟ್ ಅಥವಾ ತಮ್ಮನ್ನು ತಾವು ಬಹಿರಂಗಪಡಿಸುವ ಇನ್ಯಾವುದೇ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿರಾಕರಿಸುತ್ತದೆ" ಎಂಬ ತಾಲಿಬಾನ್ ವಕ್ತಾರನ ಹೇಳಿಕೆಯನ್ನು ಉಲ್ಲೇಖಿಸಿ ಎಸ್‌ಬಿಎಸ್ ಟಿವಿ ವರದಿ ಮಾಡಿದೆ.

For Quick Alerts
ALLOW NOTIFICATIONS
For Daily Alerts
Story first published: Tuesday, September 21, 2021, 14:51 [IST]
Other articles published on Sep 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X