ಐಪಿಎಲ್ 2021: ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿಯುವ ಆಟಗಾರರ ಪಟ್ಟಿ

ಈ ಬಾರಿಯ ಐಪಿಎಲ್ ಆರಂಭಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹಾಗೂ ಐಪಿಎಲ್ ಆಡಳಿತ ಮಂಡಳಿ ಸಕಲ ರೀತಿಯಲ್ಲಿಯೂ ಸನ್ನಧವಾಗಿದ್ದು ಭರ್ಜರಿ ಆರಂಭಕ್ಕೆ ಸಿದ್ಧವಾಗಿದೆ. ಚೆನ್ನೈನಲ್ಲಿ ಮೊದಲ ಪಂದ್ಯಕ್ಕೆ ಶುಕ್ರವಾರ ಚಾಲನೆ ದೊರೆಯಲಿದೆ. ಈ ಖ್ಯಾತ ಟೂರ್ನಿಯ ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಭಾರಿ ಹೊಡೆತ ಬಿದ್ದಿದೆ. ಏಕೆಂದರೆ ಕೆಲ ತಂಡಗಳ ಪ್ರಮುಖ ಆಟಗಾರರು ಐಪಿಎಲ್ 2021 ರಲ್ಲಿ ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಕೆಲ ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿದ್ದು ಸೆಲ್ಫ್ ಐಸೋಲೇಶನ್‌ಗೆ ಒಳಗಾಗಿದ್ದಾರೆ. ಕೆಲ ವಿದೇಶೀ ಆಟಗಾರರು ಏಳು ದಿನಗಳ ಕಡ್ಡಾಯ ಕ್ವಾರಂಟೈನ್ ಪೂರೈಸುತ್ತಿದ್ದು ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಈ ಕ್ವಾರಂಟೈನ್ ಅವಧಿ ಪೂರ್ಣಗೊಂಡ ನಂತರ ಆಟಗಾರರು ತಮ್ಮ ತಂಡದ ಶಿಬಿರವನ್ನು ಸೇರ್ಪಡೆಯಾಗಲಿದ್ದಾರೆ.
ಐಪಿಎಲ್‌ನ ಆರಂಭಿಕ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಆರ್‌ಸಿಬಿ ಆಡಂ ಜಂಪಾ ಹಾಗೂ ಫಿನ್ ಅಲೆನ್ ಅವರ ಸೇವೆಯಿಂದ ವಂಚಿತವಾಗಲಿದೆ. ಮದುವೆಯ ಹಿನ್ನೆಲೆಯಲ್ಲಿ ಜಂಪಾ ತಡವಾಗಿ ತಂಡವನ್ನು ಸೇರಿಕೊಂಡರೆ ಕೀವಿಸ್ ಆಟಗಾರ ಫಿನ್ ಅಲೆನ್ ಬಾಂಗ್ಲಾದೇಶದ ವಿರುದ್ಧ ಏಪ್ರಿಲ್ 1ರಂದು ಅಂತ್ಯವಾದ ಸರಣಿಯಲ್ಲಿ ಪಾಲ್ಗೊಂಡಿದ್ದ ಕಾರಣ ಕ್ವಾರಂಟೈನ್ ಪೂರೈಸಿದ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಆರ್‌ಸಿಬಿ ಆಟಗಾರ ಡೇನಿಯಲ್ ಸ್ಯಾಮ್ಸ್ ಕೊರೊನಾ ವೈರಸ್‌ಗೆ ತುತ್ತಾಗಿದ್ದು ಹತ್ತು ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಿದ ನಂತರ ಎರಡು ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಪಡೆದ ಬಳಿಕ ತಂಡದ ಸೇವೆಗೆ ಲಭ್ಯವಾಗಲಿದ್ದಾರೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡದ ಕ್ವಿಂಟನ್ ಡಿಕಾಕ್ ಹಾಗೂ ಆಡಂ ಮಿಲ್ನೆ ಏಳು ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯಲ್ಲಿರುವ ಕಾರಣ ಆರಂಭಿಕ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿಯಬಹುದಾದ ಆಟಗಾರರ ಪಟ್ಟಿ ಇಲ್ಲಿದೆ:
ಮುಂಬೈ ಇಂಡಿಯನ್ಸ್ - ಆಡಮ್ ಮಿಲ್ನೆ, ಕ್ವಿಂಟನ್ ಡಿ ಕಾಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು - ಫಿನ್ ಅಲೆನ್, ಆಡಮ್ ಜಂಪಾ, ಡೇನಿಯಲ್ ಸ್ಯಾಮ್ಸ್
ಚೆನ್ನೈ ಸೂಪರ್ ಕಿಂಗ್ಸ್ - ಲುಂಗಿ ಎನ್‌ಗಿಡಿ
ಡೆಲ್ಲಿ ಕ್ಯಾಪಿಟಲ್ಸ್ - ಕಗಿಸೊ ರಬಾಡಾ, ಅನ್ರಿಕ್ ನಾರ್ಕಿಯಾ
ರಾಜಸ್ಥಾನ್ ರಾಯಲ್ಸ್ - ಜೋಫ್ರಾ ಆರ್ಚರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications