ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!

IPL 2021: Tim David could become a direct swap for either Maxwell or AB de Villiers says Mike Hesson

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮುಂಬರಲಿರುವ ಸೆಪ್ಟೆಂಬರ್ 19 ರಿಂದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಯುಎಇನಲ್ಲಿ ಆರಂಭವಾಗಲಿವೆ.

ಹೀಗೆ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಲವು ಆಟಗಾರರು ಅಲಭ್ಯರಾದ ಕಾರಣ ಬೆಂಗಳೂರು ಮೂವರು ನೂತನ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿತು. ಅಷ್ಟು ಮಾತ್ರವಲ್ಲದೇ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಆಗಿದ್ದ ಸೈಮನ್ ಕಾಟಿಚ್ ವೈಯಕ್ತಿಕ ಕಾರಣದಿಂದ ಹೊರಗುಳಿದಿದ್ದು ನೂತನ ಕೋಚ್ ಆಗಿ ಮೈಕ್ ಹೆಸನ್ ನೇಮಕವಾಗಿದ್ದಾರೆ.

ಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರುಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರು

ಹೀಗೆ ಸೈಮನ್ ಕಾಟಿಚ್ ಬದಲು ಮೈಕ್ ಹೆಸನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಕಳೆದ ಶನಿವಾರದಂದು ( ಆಗಸ್ಟ್ 21 ) ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಕೋಚ್ ಆಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮೈಕ್ ಹೆಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮತ್ತು ನೂತನವಾಗಿ ತಂಡ ಸೇರ್ಪಡೆಯಾಗುತ್ತಿರುವ ಆಟಗಾರರ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಸಂಭಾವ್ಯ ತಂಡ, ಪಿಚ್, ಸಮಯ ಹಾಗೂ ಹವಾಮಾನ ವರದಿಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಸಂಭಾವ್ಯ ತಂಡ, ಪಿಚ್, ಸಮಯ ಹಾಗೂ ಹವಾಮಾನ ವರದಿ

ಅದರಲ್ಲಿಯೂ ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಹೊಸದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿರುವ ವನಿಂದು ಹಸರಂಗ, ದುಷ್ಮಂತ ಚಮೀರ ಮತ್ತು ಟಿಮ್ ಡೇವಿಡ್ ಕುರಿತಾಗಿ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಕೋಚ್ ಮೈಕ್ ಹೆಸನ್ ಈ ಕೆಳಕಂಡಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಈತನಿಂದ ಎಬಿಡಿ ಅಥವಾ ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು

ಈತನಿಂದ ಎಬಿಡಿ ಅಥವಾ ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೂತನವಾಗಿ ಆಯ್ಕೆಯಾಗಿರುವ ಟಿಮ್ ಡೇವಿಡ್ ಕುರಿತು ಮಾತನಾಡಿದ ನೂತನ ಕೋಚ್ ಮೈಕ್ ಹೆಸನ್ ಮೆಚ್ಚುಗೆಯ ಮಾತುಗಳನ್ನಾಡಿದರು. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿಗೆ ಆಯ್ಕೆಯಾಗಿರುವ ಸಿಂಗಾಪುರ್ ಆಟಗಾರ ಎಂಬ ದಾಖಲೆಯನ್ನು ಬರೆದಿರುವ ಟಿಮ್ ಡೇವಿಡ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮೈಕ್ ಹೆಸನ್ ಈತ ಓರ್ವ ಸ್ಫೋಟಕ ಆಟಗಾರ, ಮಧ್ಯಮ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಅಥವಾ ಮ್ಯಾಕ್ಸ್‌ವೆಲ್ ಸ್ಥಾನವನ್ನು ತನ್ನದಾಗಿಸಿಕೊಳ್ಳಬಲ್ಲ ಪ್ರತಿಭಾವಂತ ಆಟಗಾರ ಎಂದು ಶ್ಲಾಘಿಸಿದ್ದಾರೆ.

ಮಧ್ಯಮ ಕ್ರಮಾಂಕ ಬಲಪಡಿಸುವ ಸಲುವಾಗಿ ಟಿಮ್ ಡೇವಿಡ್ ಆಯ್ಕೆ

ಮಧ್ಯಮ ಕ್ರಮಾಂಕ ಬಲಪಡಿಸುವ ಸಲುವಾಗಿ ಟಿಮ್ ಡೇವಿಡ್ ಆಯ್ಕೆ

ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಮೊದಲಾರ್ಧದಲ್ಲಿ ಬೆಂಗಳೂರು ತಂಡದ ಆಟಗಾರನಾಗಿದ್ದ ಫಿನ್ ಅಲೆನ್ ಅಲಭ್ಯನಾದ ಕಾರಣ ಆ ಸ್ಥಾನಕ್ಕೆ ಟಿಮ್ ಡೇವಿಡ್ ಅವರನ್ನು ಆಯ್ಕೆ ಮಾಡಲಾಯಿತು. ಸಿಂಗಾಪುರ್ ತಂಡದ ಆಟಗಾರನಾದರೂ ಸಹ ಕ್ರಿಕೆಟ್ ಜಗತ್ತಿನಲ್ಲಿ ತನ್ನದೇ ಆದ ಹವಾ ಸೃಷ್ಟಿಸಿರುವ ಟಿಮ್ ಡೇವಿಡ್ ಐಪಿಎಲ್ ಟೂರ್ನಿಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು. ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲಪಡಿಸುವ ಸಲುವಾಗಿ ಟಿಮ್ ಡೇವಿಡ್ ಅವರಿಗೆ ಸ್ಥಾನ ನೀಡಲಾಯಿತು ಎಂದು ಮೈಕ್ ಹೆಸನ್ ಹೇಳಿದ್ದಾರೆ.

RCB ತಂಡಕ್ಕೆ ಸ್ಟಾರ್ ಆಟಗಾರನ ಎಂಟ್ರಿ ! | Oneindia Kannada
ಹದಿನಾಲ್ಕನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲನೇ ಸೆಣಸಾಟ ಯಾವಾಗ?

ಹದಿನಾಲ್ಕನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲನೇ ಸೆಣಸಾಟ ಯಾವಾಗ?

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

Story first published: Monday, August 23, 2021, 17:56 [IST]
Other articles published on Aug 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X