ಐಪಿಎಲ್ 2021 : ಕೊಲ್ಕತ್ತಾ vs ಬೆಂಗಳೂರು ಇಂದಿನ ಪಂದ್ಯ ಮುಂದೂಡಿಕೆ

14ನೇ ಐಪಿಎಲ್ ಆವೃತ್ತಿಯ 30ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವನ್ನು ಇಂದು (ಸೋಮವಾರ, ಮೇ 3 ) ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ಆದರೆ ಪಂದ್ಯ ಆರಂಭಕ್ಕೆ ಇನ್ನೇನು ಕೆಲವೇ ಗಂಟೆಗಳು ಇರುವಾಗ ಪಂದ್ಯ ಮುಂದೂಡಿಕೆಯಾಗಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.
ಹೌದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರರು ಮತ್ತು ಮ್ಯಾನೇಜ್‌ಮೆಂಟ್‌ನ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣದಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಐಸೋಲೇಷನ್ ಮಾಡಲಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯವನ್ನು ಆಡುವ ಪರಿಸ್ಥಿತಿಯಲ್ಲಿ ಕೊಲ್ಕತ್ತಾ ತಂಡದ ಆಟಗಾರರು ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರ ಪ್ಯಾಟ್ ಕಮಿನ್ಸ್ ಸೇರಿದಂತೆ ತಂಡದ ಹಲವಾರು ಮಂದಿ ಅನಾರೋಗ್ಯಕ್ಕೀಡಾಗಿರುವ ಕಾರಣದಿಂದ ಬೆಂಗಳೂರು ವಿರುದ್ಧದ ಪಂದ್ಯ ನಡೆಯುವುದು ಅನುಮಾನ ಮತ್ತು ಈ ಪಂದ್ಯವನ್ನು ಮುಂದೂಡಲಾಗುವುದು ಎಂದು ಆಸ್ಟ್ರೇಲಿಯಾದ 'ದ ಸಿಡ್ನಿ ಮಾರ್ನಿಂಗ್ ಹೆರಾಲ್ಡ್' ವರದಿ ಮಾಡಿದೆ. ಹಾಗೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದಲೂ ಅಧಿಕೃತ ಪ್ರಕಟಣೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯ ಮುಂದೂಡಿಕೆ ಆಗಿರುವುದರ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಟ್ವಿಟ್ಟರ್ ಮೂಲಕ ಅಧಿಕೃತ ಹೇಳಿಕೆ ನೀಡಿದೆ. ಹಾಗೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೆಂಗಳೂರು ತಂಡ ಆಶಿಸಿದೆ.

ಶೀಘ್ರದಲ್ಲೇ ಹೆಚ್ಚಿನ ಮಾಹಿತಿ
ಕೊಲ್ಕತ್ತಾ ಮತ್ತು ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿದ್ದು ಆದಷ್ಟು ಬೇಗ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದವರಿಗೂ ತಗುಲಿದ ಸೋಂಕು
ಕೆಕೆಆರ್ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಶಿ ವಿಶ್ವನಾಥನ್, ತಂಡದ ಬೌಲಿಂಗ್ ಕೋಚ್ ಬಾಲಾಜಿ ಮತ್ತು ಬಸ್ ಕ್ಲೀನರ್ ಓರ್ವನಿಗೆ ಕೊರೊನಾ ಸೋಂಕು ತಗುಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications