ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಕೊಲ್ಕತ್ತಾ vs ಬೆಂಗಳೂರು ಇಂದಿನ ಪಂದ್ಯ ಮುಂದೂಡಿಕೆ

 IPL 2021: Tonight’s RCBvsKKR game has been postponed after a couple of KKR players tested positive for Covid-19
RCB vs KKR ಪಂದ್ಯಕ್ಕೆ Corona ಅಡ್ಡಿ | Oneindia Kannada

14ನೇ ಐಪಿಎಲ್ ಆವೃತ್ತಿಯ 30ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವನ್ನು ಇಂದು (ಸೋಮವಾರ, ಮೇ 3 ) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ಆದರೆ ಪಂದ್ಯ ಆರಂಭಕ್ಕೆ ಇನ್ನೇನು ಕೆಲವೇ ಗಂಟೆಗಳು ಇರುವಾಗ ಪಂದ್ಯ ಮುಂದೂಡಿಕೆಯಾಗಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಹೌದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರರು ಮತ್ತು ಮ್ಯಾನೇಜ್‌ಮೆಂಟ್‌ನ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣದಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಐಸೋಲೇಷನ್ ಮಾಡಲಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯವನ್ನು ಆಡುವ ಪರಿಸ್ಥಿತಿಯಲ್ಲಿ ಕೊಲ್ಕತ್ತಾ ತಂಡದ ಆಟಗಾರರು ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರ ಪ್ಯಾಟ್ ಕಮಿನ್ಸ್ ಸೇರಿದಂತೆ ತಂಡದ ಹಲವಾರು ಮಂದಿ ಅನಾರೋಗ್ಯಕ್ಕೀಡಾಗಿರುವ ಕಾರಣದಿಂದ ಬೆಂಗಳೂರು ವಿರುದ್ಧದ ಪಂದ್ಯ ನಡೆಯುವುದು ಅನುಮಾನ ಮತ್ತು ಈ ಪಂದ್ಯವನ್ನು ಮುಂದೂಡಲಾಗುವುದು ಎಂದು ಆಸ್ಟ್ರೇಲಿಯಾದ 'ದ ಸಿಡ್ನಿ ಮಾರ್ನಿಂಗ್ ಹೆರಾಲ್ಡ್' ವರದಿ ಮಾಡಿದೆ. ಹಾಗೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದಲೂ ಅಧಿಕೃತ ಪ್ರಕಟಣೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದಲೂ ಅಧಿಕೃತ ಪ್ರಕಟಣೆ

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯ ಮುಂದೂಡಿಕೆ ಆಗಿರುವುದರ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಟ್ವಿಟ್ಟರ್ ಮೂಲಕ ಅಧಿಕೃತ ಹೇಳಿಕೆ ನೀಡಿದೆ. ಹಾಗೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೆಂಗಳೂರು ತಂಡ ಆಶಿಸಿದೆ.

ಶೀಘ್ರದಲ್ಲೇ ಹೆಚ್ಚಿನ ಮಾಹಿತಿ

ಶೀಘ್ರದಲ್ಲೇ ಹೆಚ್ಚಿನ ಮಾಹಿತಿ

ಕೊಲ್ಕತ್ತಾ ಮತ್ತು ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿದ್ದು ಆದಷ್ಟು ಬೇಗ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದವರಿಗೂ ತಗುಲಿದ ಸೋಂಕು

ಚೆನ್ನೈ ಸೂಪರ್ ಕಿಂಗ್ಸ್ ತಂಡದವರಿಗೂ ತಗುಲಿದ ಸೋಂಕು

ಕೆಕೆಆರ್ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಶಿ ವಿಶ್ವನಾಥನ್, ತಂಡದ ಬೌಲಿಂಗ್ ಕೋಚ್ ಬಾಲಾಜಿ ಮತ್ತು ಬಸ್ ಕ್ಲೀನರ್ ಓರ್ವನಿಗೆ ಕೊರೊನಾ ಸೋಂಕು ತಗುಲಿದೆ.

Story first published: Monday, May 3, 2021, 16:58 [IST]
Other articles published on May 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X