ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಪಂಜಾಬ್ ವಿರುದ್ಧ ಕೊಹ್ಲಿಯ 3 ಅತ್ಯುತ್ತಮ ಪ್ರದರ್ಶನಗಳಿವು

IPL 2021 : top 3 best performances of Virat Kohli against Punjab Kings in IPL history

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 26ನೇ ಪಂದ್ಯ ಶುಕ್ರವಾರ ( ಏಪ್ರಿಲ್ 30 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಇದುವರೆಗೂ 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಗಳಿಸಿ ಕೇವಲ ಒಂದು ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯಗಳಿಸಿ 4 ಪಂದ್ಯಗಳಲ್ಲಿ ಸೋಲುಂಡಿರುವ ಪಂಜಾಬ್ ಕಿಂಗ್ಸ್ ತಂಡ ಎದುರಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 3 ಅತ್ಯುತ್ತಮ ಪ್ರದರ್ಶನಗಳನ್ನು ನೀಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿ ನೀಡಿರುವ ಆ ಅತ್ಯುತ್ತಮ ಪ್ರದರ್ಶನಗಳು ಈ ಕೆಳಕಂಡಂತಿವೆ

3. 57 (43) - ಐಪಿಎಲ್ 2013 :

2013ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯವೊಂದರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 57 ರನ್ ಬಾರಿಸಿದ್ದರು.

2. 67 (53) - ಐಪಿಎಲ್ 2019 :

2019ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಪಂದ್ಯವೊಂದರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ 67 ರನ್ ಬಾರಿಸಿದ್ದರು.

1. ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯ ಅತ್ಯುತ್ತಮ ಐಪಿಎಲ್ ಇನ್ನಿಂಗ್ಸ್ :

2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 50ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆದಿತ್ತು. ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಪಂದ್ಯವನ್ನು 15 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು ಈ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ವಿರಾಟ್ ಕೊಹ್ಲಿ ಎಡಗೈಯಲ್ಲಿ 9 ಹೊಲಿಗೆಗಳಿದ್ದರೂ ಸಹ ಲೆಕ್ಕಿಸದೇ ಕೇವಲ 50 ಎಸೆತಗಳಲ್ಲಿ 113 ರನ್ ಚಚ್ಚಿದ್ದರು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತ್ತು ಮತ್ತು 82 ರನ್‌ಗಳ ಜಯವನ್ನೂ ಸಾಧಿಸಿತ್ತು. ಉತ್ತಮ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

Story first published: Friday, April 30, 2021, 18:26 [IST]
Other articles published on Apr 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X