ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮೊದಲ ಭಾಗದಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ 3 ಅತ್ಯುತ್ತಮ ಪ್ರದರ್ಶನ

IPL 2021: Top Three batting performances of RCB in the first half

ಐಪಿಎಲ್ 2021ರ ಆವೃತ್ತಿಯಲ್ಲಿ ಆರ್‌ಸಿಬಿ ಅತ್ಯುತ್ತಮ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆಡಿದ ಮೊದಲ ಏಳು ಪಂದ್ಯಗಳ ಪೈಕಿ ವಿರಾಟ್ ಕೊಹ್ಲಿ ಪಡೆ ಐದು ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಂತರ ಮೂರನೇ ಸ್ಥಾನದಲ್ಲಿದೆ. ಐಪಿಎಲ್ 2021ರ ಆವೃತ್ತಿಯೂ ಮುನ್ನ ಆರ್‌ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಕೇಲ್ ಜ್ಯಾಮಿಸನ್ ಸೇರ್ಪಡೆಯಾಗಿದ್ದರು. ಈ ಸೇರ್ಪಡೆ ಆರ್‌ಸಿಬಿ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗಿತ್ತು.

14ನೇ ಆವೃತ್ತಿಯ ಮೊದಲಾರ್ಧದಲ್ಲಿ ಆರ್‌ಸಿಬಿ ತಂಡದ ಯಶಸ್ಸಿನಲ್ಲಿ ಕೆಲ ಬ್ಯಾಟ್ಸ್‌ಮನ್‌ಗಳ ಕೊಡುಗೆ ಅತ್ಯಂತ ಪ್ರಮುಖವಾಗಿದೆ. ನಿರ್ಣಾಯಕ ಹಂತದಲ್ಲಿ ಈ ದಾಮಡಿಗರು ಮುಂದೆ ಬಂದು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್‌ನ ಮೊದಲಾರ್ಧದಲ್ಲಿ ಆರ್‌ಸಿಬಿ ತಂಡದ ಮೂರುಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಯಾವುದು ಎಂಬುದನ್ನು ನೋಡೋಣ..

RCB blue jersey: ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ನೀಲಿ ಜೆರ್ಸಿ ಧರಿಸಲಿದೆ ಆರ್‌ಸಿಬಿRCB blue jersey: ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ನೀಲಿ ಜೆರ್ಸಿ ಧರಿಸಲಿದೆ ಆರ್‌ಸಿಬಿ

1. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಡಿಕ್ಕಲ್ 101*

1. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಡಿಕ್ಕಲ್ 101*

ಕರ್ನಾಟಕದ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಈ ಬಾರಿಯ ಐಪಿಎಲ್‌ನಲ್ಲಿಯೂ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ಪಡಿಕ್ಕಲ್ ಅಜೇಯ 101 ರನ್‌ಗಳಿಸುವ ಮೂಲಕ ಐಪಿಎಲ್‌ನಲ್ಲಿ ತಮ್ಮ ಮೊದಲ ಶತಕ ಸಿಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಪಡಿಕ್ಕಲ್ ಆರ್‌ಆರ್ ನೀಡಿದ್ದ 177 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಲು ಕಾರಣರಾದರು. ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಕೂಡ ಮತ್ತೊಂದು ತುದಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಯುವ ಆಟಗಾರನಿಗೆ ಸಾಥ್ ನೀಡಿದ್ದರು. 47 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 72 ರನ್‌ ಬಾರಿಸಿದ್ದಾರೆ.

2. ಕೆಕೆಆರ್ ವಿರುದ್ಧ ಮ್ಯಾಕ್ಸ್‌ವೆಲ್ ಅಬ್ಬರ

2. ಕೆಕೆಆರ್ ವಿರುದ್ಧ ಮ್ಯಾಕ್ಸ್‌ವೆಲ್ ಅಬ್ಬರ

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಿಜಕ್ಕೂ ಸಂಕಷ್ಟದ ಪರಿಸ್ಥಿತಿಯಲ್ಲಿತ್ತು. ನಾಯಕ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟಿದಾರ್ ಅಸಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡಿದ್ದರು. ಈ ಸಂದರ್ಭದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು ಗ್ಲೆನ್ ಮ್ಯಾಕ್ಸ್‌ವೆಲ್. ಅಮೋಘ ಪ್ರದರ್ಶನ ನೀಡಿದ ಮ್ಯಾಕ್ಸ್‌ವೆಲ್ ರನ್‌ ಮಳೆ ಹರಿಸಿದರು. 49 ಎಸೆತ ಎದುರಿಸಿದ ಅವರು 78 ರನ್‌ಗಳನ್ನು ಸಿಡಿಸಿದ್ದರು. ನಾಲ್ಕು ಬೌಂಡರು ಹಾಗೂ ಮೂರು ಸಿಕ್ಸರ್ ಚಚ್ಚಿದ್ದರು ಆಸಿಸ್ ಆಟಗಾರ. ಮತ್ತೊಂದು ತುದಿಯಲ್ಲಿ ಎಬಿ ಡಿವಿಲಿಯರ್ಸ್ ಮ್ಯಾಕ್ಸ್‌ವೆಲ್‌ಗೆ ಉತ್ತಮ ಸಾಥ್ ನೀಡಿದರು. ಈ ಜೋಡಿ 86 ರನ್‌ಗಳ ಜೊತೆಯಾಟವನ್ನು ನೀಡಿತ್ತು. ಈ ಮೂಲಕ ಆರ್‌ಸಿಬಿ ಈ ಪಂದ್ಯದಲ್ಲಿ ಕೆಕೆಆರ್‌ಗೆ 205 ರನ್‌ಗಳ ಗುರಿ ನಿಗದಿ ಪಡಿಸಿತ್ತು. ಇದನ್ನು ಬೆನ್ನಟ್ಟಿದ ಕೆಕೆಆರ್ 38 ರನ್‌ಗಳ ಅಂತರದಿಂದ ಆರ್‌ಸಿಬಿಗೆ ಶರಣಾಯಿತು.

IPL ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಸಕ್ಸಸ್ ವಿರಾಟ್ ಮತ್ತು ABD ಗೆ‌ ಇನ್ನೂ ಸಿಕ್ಕಿಲ್ಲ | Oneindia Kannada
3. ಮುಂಬೈ ವಿರುದ್ಧ ಎಬಿಡಿ ಆರ್ಭಟ

3. ಮುಂಬೈ ವಿರುದ್ಧ ಎಬಿಡಿ ಆರ್ಭಟ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 159 ರನ್‌ಗಳನ್ನು ಬೆನ್ನಟ್ಟಿದ್ದ ಆರ್‌ಸಿಬಿ ತಂಡ 106 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಬಂದ ಎಬಿ ಡಿವಿಲಿಯರ್ಸ್ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಮಿಂಚಿಹರಿಸಿದರು. 27 ಎಸೆತಗಳಲ್ಲಿ 48 ರನ್‌ಗಳಿಸುವ ಮೂಲಕ ಪಂದ್ಯವನ್ನು ಆರ್‌ಸಿಬಿ ಕಡೆಗೆ ವಾಲಿಸಿದರು. ಈ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ಸೇರಿತ್ತು. ಅಂತಿಮ ಓವರ್‌ನಲ್ಲಿ ಎರಡು ಎಸೆತಗಳು ಬಾಕಿಯಿರುವಾಗ ಎಬಿಡಿ ರನೌಟ್ ಆದರು. ಆದರೆ ಕ್ರೀಸ್‌ನಲ್ಲಿದ್ದ ಮೊಹಮ್ಮದ್ ಸಿರಾಜ್ ಹಾಗೂ ಹರ್ಷಲ್ ಪಟೇಲ್ ಗೆಲುವಿನ ರನ್‌ಗಳಿಸುವಲ್ಲಿ ಯಶಸ್ವಿಯಾದರು.

Story first published: Tuesday, September 14, 2021, 23:43 [IST]
Other articles published on Sep 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X