ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಕೊಹ್ಲಿ ಮತ್ತು ಎಬಿಡಿಯನ್ನು ಈ ದೊಡ್ಡ ಸಮಸ್ಯೆ ಕಾಡಲಿದೆ ಎಂದ ಗೌತಮ್ ಗಂಭೀರ್

IPL 2021: Virat kohli and Ab de villiers will face these challenges in second leg says Gautam Gambhir
ವಿರಾಟ್ & ಎಬಿಡಿ ಗೆ ಕಾಡ್ತಿದೆ ದೊಡ್ಡ ಸಮಸ್ಯೆ!| Oneindia Kannada

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ಮಧ್ಯದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಹೌದು, 29 ಲೀಗ್ ಪಂದ್ಯಗಳು ಮುಗಿಯುವವರೆಗೂ ಯಾವುದೇ ಆತಂಕವಿಲ್ಲದೆ ನಡೆದ ಪ್ರಸ್ತುತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಂತರದ ದಿನಗಳಲ್ಲಿ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ನಾವು ಟ್ರೋಫಿ ಗೆದ್ದಿಲ್ಲ, ಧೋನಿ ಮೆಂಟರ್ ಆಗಲು ಸಿಎಸ್‌ಕೆ ಕೂಡ ಕಾರಣ; ಮನಬಿಚ್ಚಿ ಮಾತನಾಡಿದ ಗಂಗೂಲಿನಾವು ಟ್ರೋಫಿ ಗೆದ್ದಿಲ್ಲ, ಧೋನಿ ಮೆಂಟರ್ ಆಗಲು ಸಿಎಸ್‌ಕೆ ಕೂಡ ಕಾರಣ; ಮನಬಿಚ್ಚಿ ಮಾತನಾಡಿದ ಗಂಗೂಲಿ

ಹೀಗೆ ಮಧ್ಯದಲ್ಲಿಯೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದ್ದು ಇದೇ ಸೆಪ್ಟೆಂಬರ್ 19ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿದ್ದ ತಂಡಗಳಿಗೂ ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುತ್ತಿರುವ ತಂಡಗಳಿಗೂ ಸಾಕಷ್ಟು ವ್ಯತ್ಯಾಸಗಳಿದ್ದು ಆಟಗಾರರಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಿವೆ. ಹೀಗೆ ಹೊಸದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಕೆಲ ಆಟಗಾರರಿಗೆ ಟೂರ್ನಿಯಲ್ಲಿ ಕಠಿಣ ಸವಾಲುಗಳು ಎದುರಾಗಬಹುದು ಎಂದು ಕೆಲ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು ಇದೀಗ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಟಿ20 ವಿಶ್ವಕಪ್‌ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!ಟಿ20 ವಿಶ್ವಕಪ್‌ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!

ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಸವಾಲುಗಳನ್ನು ಎದುರಿಸಲಿದ್ದಾರೆ ಎಂಬುದರ ಕುರಿತು ಮಾತನಾಡಿರುವ ಗೌತಮ್ ಗಂಭೀರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಕೂಡ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಠಿಣ ಸವಾಲುಗಳನ್ನು ಎದುರಿಸಲಿದ್ದಾರೆ ಎಂದು ಈ ಕೆಳಕಂಡಂತೆ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಇಬ್ಬರೂ ಸಮಸ್ಯೆ ಎದುರಿಸಲಿದ್ದಾರೆ

ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಇಬ್ಬರೂ ಸಮಸ್ಯೆ ಎದುರಿಸಲಿದ್ದಾರೆ


ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಸವಾಲುಗಳನ್ನು ಎದುರಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗಷ್ಟೇ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಟವನ್ನಾಡಿ ಬಂದಿದ್ದು ಯಾವುದೇ ಟಿ ಟ್ವೆಂಟಿ ಪಂದ್ಯವನ್ನಾಡದೇ ನೇರವಾಗಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ ಹಾಗೂ ಯಾವುದೇ ಕ್ರಿಕೆಟ್ ಪಂದ್ಯವನ್ನಾಡದೇ ಎಬಿ ಡಿವಿಲಿಯರ್ಸ್ ನೇರವಾಗಿ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಈ ಇಬ್ಬರಿಗೂ ಇತ್ತೀಚಿನ ದಿನಗಳಲ್ಲಿ ಟಿ ಟ್ವೆಂಟಿ ಕ್ರಿಕೆಟ್ ಪಂದ್ಯಗಳನ್ನಾಡಿರುವ ಅನುಭವವಿಲ್ಲದೇ ಇರುವುದರಿಂದ ಮುಂದುವರಿಯಲಿರುವ ಐಪಿಎಲ್ ಟೂರ್ನಿ ಇಬ್ಬರಿಗೂ ಕಠಿಣ ಸವಾಲಾಗಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ


ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಯಶಸ್ವೀ ಪ್ರದರ್ಶನ ನೀಡಿದ ತಂಡಗಳ ಪೈಕಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಒಂದು. ಐಪಿಎಲ್ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋಲನ್ನನುಭವಿಸಿದ್ದು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

Story first published: Monday, September 13, 2021, 20:42 [IST]
Other articles published on Sep 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X