ಚೆನ್ನೈ ವಿರುದ್ಧದ ಸೋಲಿಗೆ ಕಾರಣರಾದ ಆಟಗಾರರು ಯಾರೆಂದು ತುಟಿ ಬಿಚ್ಚಿದ ವಿರಾಟ್ ಕೊಹ್ಲಿ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗವು ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು ಟೂರ್ನಿಯ 35ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸೆಪ್ಟೆಂಬರ್ 24ರ ಶುಕ್ರವಾರದಂದು ಯುಎಇಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯವೆಂದರೆ ಸಾಕು ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆ ಮತ್ತು ಕುತೂಹಲ ಹುಟ್ಟಿಕೊಂಡು ಬಿಡುತ್ತವೆ. ಪ್ರತಿ ಬಾರಿಯ ಹಾಗೆ ಉಭಯ ತಂಡಗಳ ನಡುವಿನ ಈ ಬಾರಿಯ ಪಂದ್ಯವೂ ಕೂಡ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಈ ಹಿಂದೆ ಇದೇ ವರ್ಷ ಭಾರತ ನೆಲದಲ್ಲಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದಾಗ ಬೆಂಗಳೂರು ಮತ್ತು ಚೆನ್ನೈ ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿಯೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯಗಳಿಸಿತ್ತು. ಹೀಗಾಗಿ ಪ್ರಸ್ತುತ ಟೂರ್ನಿಯಲ್ಲಿ ಎರಡನೇ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಕಳೆದ ಪಂದ್ಯದ ಸೇಡನ್ನು ತೀರಿಸಿಕೊಳ್ಳಲಿದೆ ಎಂಬ ಲೆಕ್ಕಾಚಾರಗಳನ್ನು ಹಾಕಲಾಗುತ್ತಿತ್ತು.
ಆದರೆ ಈ ಪಂದ್ಯದಲ್ಲಿಯೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲನ್ನು ಅನುಭವಿಸುವುದರ ಮೂಲಕ ಈ ಟೂರ್ನಿಯಲ್ಲಿ ಕಳೆದ 3 ಪಂದ್ಯಗಳಲ್ಲಿ ಸಾಲುಸಾಲಾಗಿ ಸೋಲನ್ನು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಇನ್ನು ಬೆಂಗಳೂರು ತಂಡ ನೀಡಿದ ಸಾಧಾರಣ 157 ರನ್‌ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 18.1 ಓವರ್‌ನಲ್ಲಿ 4 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ 6 ವಿಕೆಟ್‍ಗಳ ಜಯಗಳಿಸುವುದರ ಮೂಲಕ ಟೂರ್ನಿಯಲ್ಲಿ ಏಳನೇ ಜಯವನ್ನು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿರುವುದರ ಕುರಿತು ಮಾತನಾಡಿರುವ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಸೋಲಿಗೆ ಕಾರಣ ಏನೆಂಬುದನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ.

ನೀರಸ ಬೌಲಿಂಗ್ ಪ್ರದರ್ಶನ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತಮ್ಮ ಸೋಲಿಗೆ ಕಾರಣ ಪವರ್‌ಪ್ಲೇ ಓವರ್‌ಗಳಲ್ಲಿ ಮಾಡಿದ ಕಳಪೆ ಬೌಲಿಂಗ್ ಪ್ರದರ್ಶನ ಎಂದು ಹೇಳಿಕೆ ನೀಡಿದ್ದಾರೆ. ಹೌದು 'ಪವರ್‌ಪ್ಲೇ ಓವರ್‌ಗಳಲ್ಲಿ ಉತ್ತಮ ಬೌಲಿಂಗ್ ಮಾಡುವ ಅವಕಾಶವಿತ್ತು, ಆದರೆ ನಮ್ಮ ತಂಡದ ಬೌಲರ್‌ಗಳು ಆ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳದೇ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಹೆಚ್ಚಿನ ಬೌಂಡರಿಗಳನ್ನು ನೀಡಿದರು' ಎಂದು ಹೇಳಿಕೆ ನೀಡಿದ ಕೊಹ್ಲಿ ಬೌಲರ್‌ಗಳ ಕಳಪೆ ಪ್ರದರ್ಶನವೇ ಸೋಲಿಗೆ ಕಾರಣ ಎಂಬುದನ್ನು ತಿಳಿಸಿದರು.

15-20 ರನ್‌ಗಳ ಕೊರತೆ ಕಾಡಿತು
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 156 ರನ್‌ಗಳನ್ನು ಮಾತ್ರ ಗಳಿಸಿತು. ಚೆನ್ನೈ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ ಗುರಿಯನ್ನು 18.1 ಓವರ್‌ಗಳಲ್ಲಿ ತಲುಪಿತು. ಹೀಗೆ ತಮ್ಮ ತಂಡ ಮೊದಲು ಬ್ಯಾಟಿಂಗ್ ಮಾಡಿದಾಗ 15-20 ಹೆಚ್ಚು ರನ್‌ಗಳನ್ನು ಕಲೆ ಹಾಕಬೇಕಿತ್ತು ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. 15-20 ರನ್‌ಗಳ ಕೊರತೆಯಿಂದ ಸೋಲನ್ನು ಎದುರಿಸಬೇಕಾಯಿತು ಎಂದು ಕೂಡ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಅಂಕಪಟ್ಟಿಯಲ್ಲಿ ಬೆಂಗಳೂರು ತಂಡದ ಸ್ಥಾನ
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಸೋಲಿನ ಮೂಲಕ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಸೋಲನ್ನು ಅನುಭವಿಸಿದ್ದು 10 ಅಂಕಗಳನ್ನು ಹೊಂದುವುದರ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಟೂರ್ನಿಯಲ್ಲಿ ತನ್ನ ಏಳನೇ ಜಯವನ್ನು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications