ಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿ ಕೊರೊನಾ ವೈರಸ್ ಹಾವಳಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿತ್ತು. ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಮುಂದುವರಿಯುತ್ತಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಒಳ್ಳೆಯ ಆರಂಭವನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಟೂರ್ನಿಯ ದ್ವಿತೀಯ ಭಾಗದ ತನ್ನ ಮೊದಲನೇ ಪಂದ್ಯದಲ್ಲಿಯೇ ಹೀನಾಯ ಸೋಲನ್ನು ಕಾಣುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದೆ.
ಹೌದು, ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 20ರ ಸೋಮವಾರದಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅಬುಧಾಬಿಯ ಶೈಖ್ ಝಾಯೆದ್ ಕ್ರೀಡಾಂಗಣದಲ್ಲಿ ಆಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಭಾಗದ ತನ್ನ ಮೊದಲನೇ ಪಂದ್ಯದಲ್ಲಿಯೇ ಕಳಪೆ ಪ್ರದರ್ಶನ ನೀಡುವುದರ ಜೊತೆಗೆ ಹೀನಾಯ ಸೋಲನ್ನು ಅನುಭವಿಸಿದೆ. ಬೆಂಗಳೂರು ಮತ್ತು ಕೊಲ್ಕತ್ತಾ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು 19 ಓವರ್‌ಗಳಲ್ಲಿ 92 ರನ್ ಗಳಿಸಿ ಆಲ್ ಔಟ್ ಆಯಿತು. ಇನ್ನು ಬೆಂಗಳೂರು ತಂಡ ನೀಡಿದ 93 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿ 9 ವಿಕೆಟ್‍ಗಳ ಭರ್ಜರಿ ಗೆಲುವನ್ನು ಸಾಧಿಸಿತು.
ಹೀಗೆ ಬೆಂಗಳೂರು ತಂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಮೊದಲನೇ ಪಂದ್ಯದಲ್ಲಿ ಹೀನಾಯವಾಗಿ ಸೋತ ನಂತರ ಮಾತನಾಡಿರುವ ನಾಯಕ ವಿರಾಟ್ ಕೊಹ್ಲಿ ಸೋಲಿಗೆ ಕಾರಣವೇನೆಂಬುದನ್ನು ಈ ಕೆಳಕಂಡಂತೆ ವಿವರಿಸಿದ್ದಾರೆ.

ಕೆಕೆಆರ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ವಿರಾಟ್ ಕೊಹ್ಲಿ
ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಭಾಗದ ರೀತಿಯೇ ದ್ವಿತೀಯ ಭಾಗದಲ್ಲಿಯೂ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಕಾಯುತ್ತಿದ್ದವರಿಗೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡ ಹೀನಾಯ ಸೋಲನ್ನು ಕಾಣುವ ಮೂಲಕ ನಿರಾಸೆ ಮೂಡಿಸಿದೆ. ಹೀಗೆ ಕೊಲ್ಕತ್ತಾ ವಿರುದ್ಧ ಬೆಂಗಳೂರು ತಂಡ ಹೀನಾಯವಾಗಿ ಸೋತ ನಂತರ ಮಾತನಾಡಿರುವ ವಿರಾಟ್ ಕೊಹ್ಲಿ ಬೆಂಗಳೂರು ತಂಡದ ಬ್ಯಾಟಿಂಗ್ ವೈಫಲ್ಯತೆಗೆ ಇಬ್ಬನಿ ಕಾರಣವಾಯಿತು ಎಂದಿದ್ದಾರೆ. ಪಂದ್ಯದ ಆರಂಭದ ವೇಳೆಯೇ ಇಷ್ಟೊಂದು ದೊಡ್ಡ ಮಟ್ಟದ ಇಬ್ಬನಿ ಇರುತ್ತದೆ ಎಂದು ನಾವು ಊಹಿಸಿರಲಿಲ್ಲ, 42 ರನ್‌ಗಳಿಗೆ ಕೇವಲ ಒಂದು ವಿಕೆಟ್ ಕಳೆದುಕೊಂಡಿದ್ದ ತಂಡ ಮುಂದಿನ 20 ರನ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡಿತು. ಹೀಗಾಗಿ ಇಂತಹ ಸನ್ನಿವೇಶದಲ್ಲಿ ಪುಟಿದೇಳುವುದು ತುಂಬಾ ಕಷ್ಟವಾಯಿತು ಎಂದು ವಿರಾಟ್ ಕೊಹ್ಲಿ ಸೋಲಿಗೆ ಕಾರಣವೇನೆಂಬುದನ್ನು ತಿಳಿಸಿದ್ದಾರೆ.

ತಂಡದ ಕೆಲ ಆಟಗಾರರು ಇತ್ತೀಚೆಗೆ ಟಿಟ್ವೆಂಟಿ ಆಡಿರಲಿಲ್ಲ
ಇನ್ನೂ ಮುಂದುವರಿದು ಬ್ಯಾಟಿಂಗ್ ವಿಫಲತೆಯ ಕುರಿತು ಮಾತನಾಡಿರುವ ವಿರಾಟ್ ಕೊಹ್ಲಿ ತಮ್ಮ ತಂಡದ ಹಲವಾರು ಆಟಗಾರರು ಇತ್ತೀಚಿನ ದಿನಗಳಲ್ಲಿ ಟಿ ಟ್ವೆಂಟಿ ಪಂದ್ಯಗಳನ್ನು ಆಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ತಂಡದ ಕೆಲ ಆಟಗಾರರು ಟಿ ಟ್ವೆಂಟಿ ಪಂದ್ಯಗಳನ್ನು ಆಡದೇ ಇರುವ ಕಾರಣ ಈ ಪಂದ್ಯದಲ್ಲಿ ಎಡವಿದರು ಎಂಬರ್ಥದಲ್ಲಿ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಇಂತಹ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್ ಪಿಚ್‌ಗೆ ಹೊಂದಿಕೊಳ್ಳಬೇಕಾದರೆ ಕನಿಷ್ಠ 8 ಎಸೆತಗಳನ್ನಾದರೂ ಎದುರಿಸಬೇಕು ಇಲ್ಲವಾದರೆ ಈ ರೀತಿ ಎದುರಾಳಿ ತಂಡ ನಮ್ಮ ಮೇಲೆ ಹಿಡಿತ ಸಾಧಿಸುತ್ತದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.ಹೀಗೆ ಬೆಂಗಳೂರು ತಂಡದ ಕೆಲ ಆಟಗಾರರು ಇತ್ತೀಚಿನ ದಿನಗಳಲ್ಲಿ ಟಿ ಟ್ವೆಂಟಿ ಪಂದ್ಯಗಳನ್ನು ಆಡದೇ ಇರುವುದು ಸೋಲಿಗೆ ಮತ್ತೊಂದು ಪ್ರಮುಖ ಕಾರಣವಾಯಿತು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನದ ಭರವಸೆ ನೀಡಿದ ಕೊಹ್ಲಿ
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹೀನಾಯವಾಗಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಪಂದ್ಯಗಳಲ್ಲಿ ತಂಡದ ತಪ್ಪುಗಳನ್ನು ತಿದ್ದುಕೊಂಡು ಉತ್ತಮ ಪ್ರದರ್ಶನ ನೀಡಲಿದೆ ಎಂಬ ಭರವಸೆಯನ್ನು ತಂಡದ ನಾಯಕ ವಿರಾಟ್ ಕೊಹ್ಲಿ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications