ಕೊಹ್ಲಿ-ರೋಹಿತ್ ನಡುವೆ ಬಿರುಕಿದೆ ಎನ್ನುವವರಿಗೆ ಸರಿಯಾದ ಉತ್ತರ ಕೊಟ್ಟ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಪ್ಟೆಂಬರ್ 26ರ ಭಾನುವಾರದಂದು ನಡೆದ ಪಂದ್ಯದಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡು ಬೆಂಗಳೂರು ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ನೀಡಿದರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಇನ್ನು ಬೆಂಗಳೂರು ತಂಡ ನೀಡಿದ 166 ರನ್‌ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭವನ್ನು ಪಡೆದುಕೊಂಡ ಹೊರತಾಗಿಯೂ 18.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ ಗಳಿಸಿತು.

ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹತ್ವದ ಪಂದ್ಯದಲ್ಲಿ 54 ರನ್‌ಗಳ ಅಮೋಘ ಗೆಲುವನ್ನು ಸಾಧಿಸಿತು. ಈ ಮೂಲಕ ಯುಎಇ ಚರಣದಲ್ಲಿ ಸತತ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನ್ನು ಅನುಭವಿಸಿದಂತಾಗಿದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ.

ಹೀಗೆ ಮಹತ್ತರವಾದ ಪಂದ್ಯ ಮುಗಿದ ಬಳಿಕ ಬೇಸರದಲ್ಲಿ ಕುಳಿತಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬಳಿ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೊತೆ ನಗುನಗುತ್ತಾ ಮಾತನಾಡಿದ್ದಾರೆ. ಪ್ರತಿಯಾಗಿ ಪಂದ್ಯದ ಸೋಲಿನ ನಡುವೆಯೂ ವಿರಾಟ್ ಕೊಹ್ಲಿ ಜೊತೆ ರೋಹಿತ್ ಶರ್ಮಾ ಖುಷಿಯಿಂದ ನಗುನಗುತ್ತಾ ಮಾತನಾಡಿದ್ದಾರೆ. ಹೀಗೆ ಈ ಇಬ್ಬರೂ ಪರಸ್ಪರ ಸ್ನೇಹದಿಂದ ಮಾತನಾಡುತ್ತಾ ಇರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇಬ್ಬರ ಅಭಿಮಾನಿಗಳೂ ಸಹ ಈ ಚಿತ್ರಗಳನ್ನು ಕಂಡು ಸಂತಸಗೊಂಡಿದ್ದಾರೆ.

'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್

ಈ ಹಿಂದೆ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆ ಘೋಷಣೆ ಮಾಡಲಿದ್ದು ರೋಹಿತ್ ಶರ್ಮಾ ನೂತನ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದಾಗ ಇಬ್ಬರ ನಡುವೆ ಬಿರುಕು ಮೂಡಿದೆ ಎಂಬ ಊಹಾಪೋಹಗಳು ಎದ್ದಿದ್ದವು. ಆದರೆ ಬೆಂಗಳೂರು ಮತ್ತು ಮುಂಬೈ ಪಂದ್ಯದ ನಂತರ ಕಂಡುಬಂದ ಈ ದೃಶ್ಯ ಆ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿದ್ದು ಇಬ್ಬರ ನಡುವೆ ಯಾವುದೇ ರೀತಿಯ ಬಿರುಕಾಗಲಿ, ಮನಸ್ತಾಪವಾಗಲಿ ಇಲ್ಲ ಎಂಬುದು ಬಹಿರಂಗವಾಗಿದೆ.

ಇನ್ನು ಈ ಇಬ್ಬರ ಚಿತ್ರಗಳನ್ನು ಕಂಡ ನೆಟ್ಟಿಗರು ಈ ಕೆಳಕಂಡಂತೆ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಇಲ್ಲಸಲ್ಲದ ಸುದ್ದಿಗಳನ್ನು ಹರಡುವವರ ವಿರುದ್ಧ ಆಕ್ರೋಶ

ಇಲ್ಲಸಲ್ಲದ ಸುದ್ದಿಗಳನ್ನು ಹರಡುವವರ ವಿರುದ್ಧ ಆಕ್ರೋಶ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಖುಷಿಖುಷಿಯಿಂದ ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ ಅವರ ಅಭಿಮಾನಿಯೊಬ್ಬ ಇಬ್ಬರ ನಡುವೆ ಇಲ್ಲಸಲ್ಲದ ಸುದ್ದಿಗಳನ್ನು ಹರಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇಬ್ಬರ ನಡುವೆಯೂ ಯಾವುದೇ ರೀತಿಯ ಬಿರುಕಿಲ್ಲ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಖುಷಿಯಿಂದ ಜೊತೆ ಇರುವ ಚಿತ್ರಗಳನ್ನು ನೋಡುತ್ತೇವೆ ಎಂದುಕೊಂಡಿರಲಿಲ್ಲ

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಖುಷಿಯಿಂದ ಜೊತೆ ಇರುವ ಚಿತ್ರಗಳನ್ನು ನೋಡುತ್ತೇವೆ ಎಂದುಕೊಂಡಿರಲಿಲ್ಲ

ಮತ್ತೊಬ್ಬ ಕ್ರಿಕೆಟ್ ಅಭಿಮಾನಿ ಈ ಇಬ್ಬರೂ ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದು, ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ ಸ್ನೇಹದಿಂದ ಇರುವ ಚಿತ್ರಗಳನ್ನು ನೋಡಿದ್ದೆವು, ಆದರೆ ಈ ರೀತಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಖುಷಿಯಿಂದ ಜೊತೆ ಇರುವ ಚಿತ್ರಗಳನ್ನು ನೋಡುತ್ತೇವೆ ಎಂದುಕೊಂಡಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮಿಂದ ಆಗುತ್ತಿಲ್ಲ ಅಂತ ಸೋಲಿನ ನಂತರ ರೋಹಿತ್ ಶರ್ಮಾ ಹೇಳಿದ್ದು ಯಾಕೆ? | Oneindia Kannada
ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲಿ ಅಥವಾ ಸೋಲಲಿ

ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲಿ ಅಥವಾ ಸೋಲಲಿ

ಈ ಕುರಿತಾಗಿ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಟ್ವೀಟ್ ಮಾಡಿದ್ದು ಮುಂಬೈ ಇಂಡಿಯನ್ಸ್ ತಂಡ ಗೆಲ್ಲಲಿ ಅಥವಾ ಸೋಲಲಿ ಈ ಚಿತ್ರಗಳನ್ನು ನೋಡಿದ ನಂತರ ಶುಭದಿನ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 27, 2021, 11:49 [IST]
Other articles published on Sep 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X