ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಹೊಸದಾಗಿ ಆರ್‌ಸಿಬಿ ಸೇರಿರುವ ಲಂಕಾದ ವನಿಂದು ಹಸರಂಗಗೆ ಕೊಹ್ಲಿ ವಾಟ್ಸಾಪ್ ಸಂದೇಶ

IPL 2021: Virat kohli sent special Whatsapp message to Wanindu Hasaranga
ಹಸರಂಗನಿಗೆ ವಾಟ್ಸ್ ಆಪ್ ಮೆಸೇಜ್ ಮಾಡಿದ ವಿರಾಟ್ ! | Oneindia Kannada

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿದ್ದವು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಕೂಡಲೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನವನ್ನು ಕೈಗೊಂಡಿತ್ತು.

ದೇಶಕ್ಕಾಗಿ ಆಡಿದ್ದೇನೆ ಸ್ವಲ್ಪವಾದರೂ ಗೌರವ ಕೊಡಿ; ಹಿರಿಯ ಕ್ರಿಕೆಟಿಗರಿಂದ ಆದ ಅವಮಾನ ಬಿಚ್ಚಿಟ್ಟ ತಾಹಿರ್ದೇಶಕ್ಕಾಗಿ ಆಡಿದ್ದೇನೆ ಸ್ವಲ್ಪವಾದರೂ ಗೌರವ ಕೊಡಿ; ಹಿರಿಯ ಕ್ರಿಕೆಟಿಗರಿಂದ ಆದ ಅವಮಾನ ಬಿಚ್ಚಿಟ್ಟ ತಾಹಿರ್

ಹೀಗೆ ಮಧ್ಯಂತರದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧಾರವನ್ನು ಮಾಡಿತ್ತು. ಬಿಸಿಸಿಐ ನಿರ್ಧರಿಸಿದಂತೆಯೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಾಕಿ ಉಳಿದಿರುವ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರಿಂದ ಮುಂದುವರೆಯಲಿವೆ. ಹೀಗೆ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ವಿವಿಧ ತಂಡಗಳ ಬಹುತೇಕ ಎಲ್ಲಾ ಆಟಗಾರರು ಯುಎಇ ತಲುಪಿದ್ದು ಕಠಿಣ ಅಭ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಐಪಿಎಲ್: ಕೊಹ್ಲಿ ಮತ್ತು ಎಬಿಡಿಯನ್ನು ಈ ದೊಡ್ಡ ಸಮಸ್ಯೆ ಕಾಡಲಿದೆ ಎಂದ ಗೌತಮ್ ಗಂಭೀರ್ಐಪಿಎಲ್: ಕೊಹ್ಲಿ ಮತ್ತು ಎಬಿಡಿಯನ್ನು ಈ ದೊಡ್ಡ ಸಮಸ್ಯೆ ಕಾಡಲಿದೆ ಎಂದ ಗೌತಮ್ ಗಂಭೀರ್

ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರತರಾಗಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಯುಎಇ ತಲುಪಿದ್ದು ತಂಡದ ಸಹ ಆಟಗಾರರ ಜೊತೆ ಸೇರಿಕೊಂಡು ಅಭ್ಯಾಸ ಪಂದ್ಯವೊಂದರಲ್ಲಿಯೂ ಸಹ ಭಾಗವಹಿಸಿದ್ದಾರೆ. ತನ್ನ ತಂಡದ ಆಟಗಾರರೆಂದರೆ ಪ್ರೀತಿ ಮತ್ತು ಕಾಳಜಿಯನ್ನು ತೋರಿಸುವ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ದ್ವಿತೀಯಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ಆಟಗಾರರಿಗೆ ವಾಟ್ಸಾಪ್ ಸಂದೇಶವನ್ನು ಕಳಿಹಿಸುವುದರ ಸುದ್ದಿಯಾಗಿದ್ದಾರೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ 4 ನೂತನ ಆಟಗಾರರಿಗೆ ವಿರಾಟ್ ಕೊಹ್ಲಿ ವಾಟ್ಸಾಪ್ ಸಂದೇಶವನ್ನು ಕಳುಹಿಸಿರುವ ಸುದ್ದಿ ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು ಅವುಗಳ ಕುರಿತ ಮಾಹಿತಿ ಮುಂದೆ ಇದೆ ಓದಿ..

ವನಿಂದು ಹಸರಂಗಗೆ ವಾಟ್ಸಾಪ್ ಸಂದೇಶ ಕಳುಹಿಸಿದ ಕೊಹ್ಲಿ

ವನಿಂದು ಹಸರಂಗಗೆ ವಾಟ್ಸಾಪ್ ಸಂದೇಶ ಕಳುಹಿಸಿದ ಕೊಹ್ಲಿ

ಯುಎಇಯಲ್ಲಿ ಮುಂದುವರೆಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿದ ಶ್ರೀಲಂಕಾದ ಆಟಗಾರ ವನಿಂದು ಹಸರಂಗ ಮೇಲೆ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ. ತನ್ನ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಒಳ್ಳೆಯ ಹೆಸರು ಮಾಡಿರುವ ವನಿಂದು ಹಸರಂಗಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸುವುದರ ಮೂಲಕ ವಿರಾಟ್ ಕೊಹ್ಲಿ ಸರ್ಪ್ರೈಸ್ ನೀಡಿದ್ದಾರೆ. ಆದಷ್ಟು ಬೇಗ ತಂಡದಲ್ಲಿ ನಿಮ್ಮನ್ನು ಹೊಂದಲು ಇಷ್ಟಪಡುತ್ತೇನೆ ಎಂದು ವಿರಾಟ್ ಕೊಹ್ಲಿ ಕಳುಹಿಸಿದ ಸಂದೇಶವನ್ನು ಕಂಡ ವನಿಂದು ಹಸರಂಗ ಖುಷಿ ಮತ್ತು ಆಶ್ಚರ್ಯಕ್ಕೆ ಒಳಗಾಗಿದ್ದಾರೆ. ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ವನಿಂದು ಹಸರಂಗ ನಿರತರಾಗಿದ್ದು ಆದಷ್ಟು ಬೇಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆ.

ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಾನ

ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಾನ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋಲುಂಡು ಅಂಕಪಟ್ಟಿಯಲ್ಲಿ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ತಂಡದ ಮೊದಲನೇ ಪಂದ್ಯ ಯಾವಾಗ ಮತ್ತು ಯಾರ ವಿರುದ್ಧ?

ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ತಂಡದ ಮೊದಲನೇ ಪಂದ್ಯ ಯಾವಾಗ ಮತ್ತು ಯಾರ ವಿರುದ್ಧ?


ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

Story first published: Tuesday, September 14, 2021, 18:18 [IST]
Other articles published on Sep 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X