ಐಪಿಎಲ್ 2021: ಆರ್‌ಸಿಬಿ ಸೇರಿಕೊಳ್ಳಲು ದುಬೈ ಪ್ರಯಾಣ ಬೆಳೆಸಿದ ಹಸರಂಗ ಮತ್ತು ಚಮೀರ

ಇದೇ ವರ್ಷದ ಏಪ್ರಿಲ್ 9 ನೇ ತಾರೀಕಿನಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳವರೆಗೆ ಯಾವುದೇ ಅಡಚಣೆಯಿಲ್ಲದೆ ನಡೆಯಿತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಹೀಗೆ ಮಧ್ಯದಲ್ಲಿಯೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದ್ದು ಇದೇ ಸೆಪ್ಟೆಂಬರ್ 19ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿದ್ದ ತಂಡಗಳಿಗೂ ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುತ್ತಿರುವ ತಂಡಗಳಿಗೂ ಸಾಕಷ್ಟು ವ್ಯತ್ಯಾಸಗಳಿದ್ದು ಆಟಗಾರರಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಿವೆ. ಹೀಗೆ ಐಪಿಎಲ್ ದ್ವಿತೀಯಾರ್ಧ ಘೋಷಣೆಯಾಗುತ್ತಿದ್ದಂತೆಯೇ ಮೊದಲಾರ್ಧದಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳ ಕೆಲ ಆಟಗಾರರು ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿ ಟೂರ್ನಿಯಿಂದ ಹಿಂದೆ ಸರಿದರು. ಹೀಗಾಗಿ ವಿವಿಧ ಫ್ರಾಂಚೈಸಿಗಳು ತಮ್ಮ ತಂಡಗಳಿಂದ ಹಿಂದೆ ಸರಿದ ಆಟಗಾರರ ಸ್ಥಾನಕ್ಕೆ ಹೊಸ ಆಟಗಾರರನ್ನು ಆಯ್ಕೆ ಮಾಡಿಕೊಂಡಿವೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಹೊಸದಾಗಿ ನಾಲ್ವರು ಆಟಗಾರರನ್ನು ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೋಸ್ಕರ ಆಯ್ಕೆ ಮಾಡಿಕೊಂಡಿತ್ತು.

ಹೌದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಭಾಗವಹಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಾದ ಕೇನ್ ರಿಚರ್ಡ್ಸನ್, ಆಡಂ ಜಂಪಾ, ಡೇನಿಯಲ್ ಸ್ಯಾಂಡ್ಸ್ ಮತ್ತು ಫಿನ್ ಅಲೆನ್ ಬದಲು ಕ್ರಮವಾಗಿ ಜಾರ್ಜ್ ಗಾರ್ಟನ್, ವನಿಂದು ಹಸರಂಗ, ದುಷ್ಮಂತ ಚಾಮೀರಾ ಮತ್ತು ಟಿಮ್ ಡೇವಿಡ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದುವರಿಯಲಿರುವ ಐಪಿಎಲ್ ಟೂರ್ನಿಗಾಗಿ ಆಯ್ಕೆ ಮಾಡಿಕೊಂಡಿದೆ.

ಹೀಗೆ ಶ್ರೀಲಂಕಾದ ವನಿಂದು ಹಸರಂಗ ಮತ್ತು ದುಷ್ಮಂತ ಚಮೀರ ಈ ಬಾರಿ ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುತೇಕ ಎಲ್ಲಾ ಆಟಗಾರರು ಯುಎಇ ತಲುಪಿ ಅಭ್ಯಾಸಗಳಲ್ಲಿ ತೊಡಗಿಕೊಂಡಿದ್ದರೆ ಶ್ರೀಲಂಕಾದ ಆಟಗಾರರಾದ ದುಷ್ಮಂತ ಚಮೀರ ಮತ್ತು ವನಿಂದು ಹಸರಂಗ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆದ ಸೀಮಿತ ಓವರ್‌ಗಳ ಸರಣಿಗಳಲ್ಲಿ ನಿರತರಾಗಿದ್ದರು. ಸದ್ಯ ಇದೀಗ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ಮತ್ತು ಟಿ ಟ್ವೆಂಟಿ ಸರಣಿಗಳು ಮುಗಿದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ವನಿಂದು ಹಸರಂಗ ಮತ್ತು ದುಷ್ಮಂತ ಚಮೀರ ಯುಎಇ ಪ್ರಯಾಣವನ್ನು ಕೈಗೊಂಡಿದ್ದಾರೆ. ವನಿಂದು ಹಸರಂಗ ತನ್ನ ಸಹ ಆಟಗಾರ ದುಶ್ಮಂತ ಚಮೀರಾ ಜೊತೆ ಯುಎಇಗೆ ವಿಮಾನದಲ್ಲಿ ಪ್ರಯಾಣವನ್ನು ಕೈಗೊಂಡಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ಹಂಚಿಕೊಂಡಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ತಂಡದ ಮೊದಲನೇ ಪಂದ್ಯ ಯಾವಾಗ ಮತ್ತು ಯಾರ ವಿರುದ್ಧ?

ಅಫ್ಘಾನ್ ಟೀಮ್ ಗೆ ಬಿತ್ತು ದೊಡ್ಡ ಏಟು! | Oneindia Kannada

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, September 15, 2021, 14:35 [IST]
Other articles published on Sep 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X