Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಪುನಾರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಆಘಾತ; ಪ್ರಮುಖ ಆಟಗಾರ ಹೊರಗುಳಿಯುವ ಸಾಧ್ಯತೆ

IPL 2021: Washington Sundar slated to be ruled out for second phase

ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧಕ್ಕೆ ಮೊಟಕುಗೊಂಡಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸೆಪ್ಟೆಂಬರ್ ತಿಂಗಳಿನಿಂದ ಯುಎಇಯಲ್ಲಿ ಮುಂದುವರಿಯಲಿದೆ.

ಸದ್ಯ ಇಂಗ್ಲೆಂಡ್ ನೆಲದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ತಂಡ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಬೀಡುಬಿಟ್ಟಿದ್ದು ಈ ಸರಣಿ ಮುಗಿದ ಬಳಿಕ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಆದರೆ ಟೂರ್ನಿ ಆರಂಭಗೊಳ್ಳುವ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಆಟಗಾರ ವಾಷಿಂಗ್ಟನ್ ಸುಂದರ್ ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗುತ್ತಿದೆ.

ಹೌದು ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಅಭ್ಯಾಸ ನಡೆಸುತ್ತಿದ್ದ ವೇಳೆ ಬೆರಳಿಗೆ ಗಾಯಮಾಡಿಕೊಂಡಿರುವ ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ವಾಷಿಂಗ್ಟನ್ ಸುಂದರ್ ಗಾಯದ ಪ್ರಭಾವ ದೊಡ್ಡದಾಗಿದ್ದು ಐಪಿಎಲ್ ವೇಳೆಗೆ ಅವರು ಗುಣಮುಖರಾಗುವುದು ಅನುಮಾನವಾಗಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಈ ಬಾರಿಯ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗುತ್ತಿದೆ.

Story first published: Sunday, July 25, 2021, 12:55 [IST]
Other articles published on Jul 25, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+