ಐಪಿಎಲ್ 2021: ಉಳಿದ ಲೀಗ್ ಪಂದ್ಯಗಳಿಂದ ಕೊಹ್ಲಿ ಹೊರಕ್ಕೆ? ಯಾರಾಗ್ತಾರೆ ಆರ್‌ಸಿಬಿ ಬದಲಿ ನಾಯಕ?

ಹಲವಾರು ಆವೃತ್ತಿಗಳ ನಂತರ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿದ ತಂಡಗಳ ಫಲಿತಾಂಶದ ಆಧಾರದ ಮೇಲೆ ಪ್ಲೇ ಆಫ್ ಹಂತವನ್ನು ಪ್ರವೇಶಿಸದೇ ನೇರವಾಗಿ ಹಾಗೂ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರವೇಶಿಸಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 12 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಜಯಗಳಿಸಿ, 4 ಪಂದ್ಯಗಳಲ್ಲಿ ಸೋತು, 16 ಅಂಕಗಳನ್ನು ಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

ರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗ

ಹೀಗೆ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ತನ್ನ 13ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರ ಬುಧವಾರದಂದು ಸೆಣಸಾಟ ನಡೆಸಲಿದೆ.

ಧೋನಿ ಐಪಿಎಲ್ ನಿವೃತ್ತಿ ಸುದ್ದಿಗೆ ತಿರುವು; ತಾವು ಆಡಲಿರುವ ಕೊನೆಯ ಪಂದ್ಯದ ಕುರಿತು ಬಾಯ್ಬಿಟ್ಟ ಧೋನಿ!ಧೋನಿ ಐಪಿಎಲ್ ನಿವೃತ್ತಿ ಸುದ್ದಿಗೆ ತಿರುವು; ತಾವು ಆಡಲಿರುವ ಕೊನೆಯ ಪಂದ್ಯದ ಕುರಿತು ಬಾಯ್ಬಿಟ್ಟ ಧೋನಿ!

ಟೂರ್ನಿಯಲ್ಲಿ ಈಗಾಗಲೇ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರವೇಶಿಸಿರುವ ಕಾರಣ ಇಂದು ( ಅಕ್ಟೋಬರ್ 6 ) ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆಯಲಿರುವ ಪಂದ್ಯದಿಂದ ಅಥವಾ ಮುಂಬರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿವೆ. ಟೂರ್ನಿಯಲ್ಲಿ ತಮ್ಮ ತಂಡ ಕಣಕ್ಕಿಳಿದಿರುವ ಎಲ್ಲಾ ಪಂದ್ಯಗಳಲ್ಲೂ ಭಾಗವಹಿಸಿರುವ ವಿರಾಟ್ ಕೊಹ್ಲಿ ಇನ್ನೆರಡು ವಾರಗಳಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ತಲೆಯಲ್ಲಿಟ್ಟುಕೊಂಡು ಲೀಗ್ ಹಂತದ ಉಳಿದ 2 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಹೊರಗುಳಿಯುವ ಸಾಧ್ಯತೆಗಳಿವೆ. ಹೀಗೆ ವಿರಾಟ್ ಕೊಹ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯ ಅಥವಾ ಮುಂಬರಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬದಲಿ ನಾಯಕ ಯಾರಾಗಬಹುದು ಎಂಬ ಮಾಹಿತಿ ಮುಂದೆ ಇದೆ ಓದಿ.

 ಕೊಹ್ಲಿ ಬದಲಿ ನಾಯಕ ಯಾರಾಗಬಹುದು?

ಕೊಹ್ಲಿ ಬದಲಿ ನಾಯಕ ಯಾರಾಗಬಹುದು?

ಅಕ್ಟೋಬರ್ 6ರ ಬುಧವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಿಂದ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬದಲಿ ನಾಯಕನಾಗಿ ಎಬಿ ಡಿವಿಲಿಯರ್ಸ್ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುವ ಮುನ್ನ ಮತ್ತು ಆರಂಭವಾದ ಕೆಲ ಪಂದ್ಯಗಳ ನಂತರ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ, ರನ್ ಗಳಿಸಲು ಪರದಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗತೊಡಗಿದ್ದವು. ಆದರೆ ಈ ಟೀಕೆಗಳಿಗೆಲ್ಲಾ ತಮ್ಮ ಬ್ಯಾಟಿಂಗ್ ಮೂಲಕ ಉತ್ತರ ನೀಡಿರುವ ವಿರಾಟ್ ಕೊಹ್ಲಿ ಉತ್ತಮ ರನ್ ಗಳಿಸುವ ಮೂಲಕ ತಾವು ಫಾರ್ಮ್ ಕಳೆದುಕೊಂಡಿಲ್ಲ ಎಂಬುದನ್ನು ಮನದಟ್ಟು ಮಾಡಿದ್ದಾರೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆಡಿರುವ 12 ಪಂದ್ಯಗಳ ಪೈಕಿ 121.42 ಸ್ಟ್ರೈಕ್ ರೇಟ್ ಜತೆಗೆ 357 ರನ್ ಕಲೆಹಾಕಿದ್ದಾರೆ.

Virat Kohli SRH ವಿರುದ್ಧ ಪಂದ್ಯ ಸೋತ ನಂತರ ಹೇಳಿದ್ದೇನು | Oneindia Kannada
ನಾಯಕನಾಗಿ ಕೊಹ್ಲಿಯದ್ದು ಇದೇ ಅಂತಿಮ ಐಪಿಎಲ್ ಟೂರ್ನಿ

ನಾಯಕನಾಗಿ ಕೊಹ್ಲಿಯದ್ದು ಇದೇ ಅಂತಿಮ ಐಪಿಎಲ್ ಟೂರ್ನಿ

ಇನ್ನು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಯುಎಇ ಚರಣ ಆರಂಭವಾಗುವ ಮುನ್ನವೇ ಈ ಬಾರಿಯ ಐಪಿಎಲ್ ಟೂರ್ನಿ ಮುಗಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಣೆ ಮಾಡಿದ್ದರು. ಭಾರತ ತಂಡದ ನಾಯಕತ್ವದ ಕಡೆ ಹೆಚ್ಚಿನ ಗಮನಹರಿಸುವ ಕಾರಣದಿಂದಾಗಿ ವಿರಾಟ್ ಕೊಹ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದರು. ಅದೇ ರೀತಿ ಇನ್ನೆರಡು ವಾರಗಳಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ಆರಂಭವಾಗುತ್ತಿದ್ದು ಆ ಟೂರ್ನಿಯಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾರ್ಯನಿರ್ವಹಿಸಬೇಕಾಗಿರುವ ಸಲುವಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಉಳಿದಿರುವ 2 ಲೀಗ್ ಹಂತದ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿದು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, October 6, 2021, 15:05 [IST]
Other articles published on Oct 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X