Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಐಪಿಎಲ್‌ನಲ್ಲಿ ಯುಜುವೇಂದ್ರ ಚಾಹಲ್ ವಿಶೇಷ 'ಶತಕ'

IPL 2021: Yuzvendra Chahal completes special century

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ 14ನೇ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಆರ್‌ಸಿಬಿಯ ಸ್ಪಿನ್ ಸ್ಪೆಶಲಿಸ್ಟ್ ಯುಜುವೇಂದ್ರ ಅವರ 100ನೇ ಐಪಿಎಲ್ ಪಂದ್ಯ ಇದಾಗಿದೆ.

ಒಟ್ಟಾರೆ ಟಿ20 ಪಂದ್ಯಗಳಲ್ಲಿಯೂ ಯುಜುವೇಂದ್ರ ಚಾಹಲ್ ಈ ಪಂದ್ಯದ ಮೂಲಕ ಮೈಲಿಗಲ್ಲು ನೆಟ್ಟಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದ ಮೂಲಕ ಚಾಹಲ್ 200ನೇ ಟಿ20 ಪಂದ್ಯವನ್ನು ಆಡುತ್ತಿದ್ದಾರೆ.

ಐಪಿಎಲ್‌ನಲ್ಲಿ ಯುಜುವೇಂದ್ರ ಚಾಹಲ್ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಬೌಲರ್ ಆಗಿದ್ದಾರೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಪ್ಲೇಆಫ್ ಹಂತಕ್ಕೇರಲು ಚಾಹಲ್ ಪ್ರಮುಖ ಕಾರಣರಾಗಿದ್ದರು. ಈ ಬಾರಿಯ ಐಪಿಎಲ್‌ನಲ್ಲಿಯೂ ಚಾಹಲ್ ಮೇಲೆ ಅಂತಾದ್ದೇ ಭರವಸೆಯಿದೆ.

ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಚಾಹಲ್ 15 ಪಂದ್ಯಗಳಲ್ಲಿ ಆಡಿದ್ದು 21 ವಿಕೆಟ್ ಪಡೆದಿದ್ದರು. 19.28ರ ಸರಾಸರಿಯನ್ನು ಹೊಂದಿದ್ದ ಚಾಹಲ್ 7.08ರ ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದರು. ಈ ಮೂಲಕ ಎದುರಾಳಿಗಳ ರನ್‌ ನಿಯಂತ್ರಣ ಮಾಡುವುದರಲ್ಲಿಯೂ ಅವರು ಯಶಸ್ವಿಯಾಗಿದ್ದರು.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್, ಕೈಲ್ ಜ್ಯಾಮಿಸನ್ ಹಾಗೂ ರಜತ್ ಪಾಟಿದಾರ್ ಪದಾರ್ಪಣೆಯನ್ನು ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ:
ರೋಹಿತ್ ಶರ್ಮಾ (ನಾಯಕ), ಕ್ರಿಸ್ ಲಿನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ, ಮಾರ್ಕೊ ಜಾನ್ಸೆನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರಜತ್ ಪಾಟಿದಾರ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ ವೆಲ್, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಕೈಲ್ ಜಾಮಿಸನ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

Story first published: Saturday, April 10, 2021, 10:37 [IST]
Other articles published on Apr 10, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+