ಐಪಿಎಲ್ 2022: ಮೆಗಾ ಟೂರ್ನಿಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ: ಅಭಿಮಾನಿಗಳಲ್ಲಿ ಹೆಚ್ಚಿದ ಕಾತರ

ಐಪಿಎಲ್ 15ನೇ ಆವೃತ್ತಿಯ ಆರಂಭಕ್ಕೆ ಇನ್ನು ಕೆಲ ಗಂಟೆಗಳು ಮಾತ್ರವೇ ಬಾಕಿಯಿದ್ದು ಸಂಜೆ 7:30ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುವ ಮೂಲಕ ಈ ಅದ್ದೂರಿ ಟೂರ್ನಿಗೆ ಚಾಲನೆ ದೊರೆಯಲಿದೆ. ಈ ಬಾರಿ ಹತ್ತು ತಂಡಗಳು ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವುದು ಟೂರ್ನಿಯ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
ಕಳೆದ ಬಾರಿಯ ಚಾಂಪಿಯನ್ ತಂಡವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್‌ಅಪ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳ ನಾಯಕತ್ವ ಬದಲಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿದ್ದ ಎಂಎಸ್ ಧೋನಿ ಎರಡು ದಿನಗಳ ಹಿಂದೆಯಷ್ಟೇ ನಾಯಕತ್ವ ಬಿಟ್ಟುಕೊಟ್ಟಿದ್ದರು. ಹೀಗಾಗಿ ರವೀಂದ್ರ ಜಡೇಜಾ ಸಿಎಸ್‌ಕೆ ತಂಡವ್ನನು ಈ ಬಾರಿಯ ಟೂರ್ನಿಯಲ್ಲಿಪೂರ್ಣಪ್ರಮಾಣದ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಜಡ್ಡುಗೆ ಇದೇ ಮೊದಲ ಬಾರಿಗೆ ಐಪಿಎಲ್ ತಂಡವನ್ನು ಮುನ್ನಡೆಸುವ ಹೊಣಡಗಾರಿಕೆ ದೊರೆತಿದ್ದು ಯಾವ ರೀತಿ ಈ ಜವಾಬ್ಧಾರಿಯನ್ನು ನಿರ್ವಹಿಸಲಿದ್ದಾರೆ ಎಂಬುದು ಕೂಡ ಕುತೂಹಲ ಮೂಡಿಸಿದೆ.
ಇನ್ನು ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ಈ ಬಾರಿ ನೂತನ ನಾಯಕನೊಂದಿಗೆ ಕಣಕ್ಕಿಳಿಯುತ್ತಿದೆ. ಕಳೆದ ಬಾರಿಯ ಆವೃತ್ತಿಯಲ್ಲಿ ನಾಯಕನಾಗಿದ್ದ ಇಯಾನ್ ಮಾರ್ಗನ್ ಅವನ್ನು ಈ ಬಾರಿಯ ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆಗೊಳಿಸಿತ್ತು. ನಂತರ ಹರಾಜು ಪ್ರಕ್ರಿಯೆಯಲ್ಲಿ ಶ್ರೇಯಸ್ ಐಯ್ಯರ್ ಅವರನ್ನು ಆಯ್ಕೆ ಮಾಡಿಕೊಂಡಿತು. ನಂತರ ಅವರನ್ನೇ ನಾಯಕನನ್ನಾಗಿ ನೇಮಕಗೊಳಿಸಿದೆ. ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಐಯ್ಯರ್ 2020ರ ಆವೃತ್ತಿಯಲ್ಲಿ ತಂಡವನ್ನು ಫೈನಲ್ ಹಂತಕ್ಕೆ ಮುನ್ನಡೆಸಿದ್ದರು.
ಇನ್ನು ಐಪಿಎಲ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಲೆಕ್ಕಾಚಾರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ. ಕಳೆದ ಬಾರಿಯ ಆವೃತ್ತಿಯಲ್ಲಿ ಚಾಂಪಿಯನ್ ತಂಡವಾಗಿರುವ ಸಿಎಸ್‌ಕೆ ಪಡೆ ಒಟ್ಟು 4 ಬಾರಿ ಚಾಂಪಿಯನ್ ಎನಿಸಿಕೊಂಡಿದೆ. ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ಹೆಸರಿನಲ್ಲಿಯೂ ಎರಡು ಟ್ರೋಫಿಗಳಿದ್ದು ಕಳೆದ ಆವೃತ್ತಿಯಲ್ಲಿಯೂ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಸನಿಹಕ್ಕೆ ತಲುಪಿ ವಿಫಲವಾಗಿತ್ತು.
ಇನ್ನು ಈ ಬಾರಿ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿದ್ದು ಲೀಗ್ ಹಂತದ ಎಲ್ಲಾ ಪಂದ್ಯಗಳು ಕೂಡ ಮುಂಬೈ ಹಾಗೂ ಪುಣೆಯಲ್ಲಿರುವ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಲಿದೆ. ಈ ಪಂದ್ಯಗಳಿಗೆ 25 ಶೇಕಡಾದಷ್ಟು ಪ್ರೇಕ್ಷಕರಿಗೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ನೀಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications