ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಟೂರ್ನಿಯಲ್ಲಿ ಮಿಂಚುತ್ತಿರುವ ಈ ಮೂವರಲ್ಲೊಬ್ಬರು ರೋಹಿತ್ ನಂತರ ಭಾರತದ ನಾಯಕನಾಗುವುದು ಪಕ್ಕಾ!

IPL 2022: 3 current IPL captains who may lead team India in future

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಸಮೀಪಿಸುತ್ತಿದ್ದು, ಯಾವ ತಂಡಗಳು ಯಶಸ್ವಿಯಾಗಿ ಪ್ಲೇಆಫ್ ಹಂತಕ್ಕೆ ಲಗ್ಗೆ ಇಡಲಿವೆ ಎಂಬುದು ಕುತೂಹಲವನ್ನು ಕೆರಳಿಸಿದೆ. ಇನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇಆಫ್ ಪ್ರವೇಶ ಪಡೆದ ಮೊದಲ ತಂಡ ಎನಿಸಿಕೊಂಡಿದ್ದರೆ, ಉಳಿದ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

MI vs SRH: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಸೋತಿರುವ ಕಳಪೆ ತಂಡ ಯಾವುದು?MI vs SRH: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಸೋತಿರುವ ಕಳಪೆ ತಂಡ ಯಾವುದು?

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಎರಡನೇ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದ್ದರೆ, ನಾಲ್ಕನೇ ಸ್ಥಾನ ಪಡೆದು ಪ್ಲೇಆಫ್ ಸುತ್ತಿನ ಅರ್ಹತೆ ಪಡೆದುಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹರಸಾಹಸ ಪಡುತ್ತಿವೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬಲಿಷ್ಟ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಈಗಾಗಲೇ ಮುಗ್ಗರಿಸಿದ್ದು, ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡಿವೆ.

PBKS vs DC: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಇರುವ ಮೂವರು ಆಟಗಾರರುPBKS vs DC: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಇರುವ ಮೂವರು ಆಟಗಾರರು

ಹೀಗೆ ಈ ಬಾರಿ ಐಪಿಎಲ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧಿಸಿರುವ ಅನುಭವವಿರುವ ನಾಯಕರಿಗಿಂತ ಯುವ ನಾಯಕರೇ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಮಿಂಚುತ್ತಿದ್ದು, ಈ ಅಂಶ ಇದೀಗ ಟೀಮ್ ಇಂಡಿಯಾದ ಮುಂದಿನ ನಾಯಕನ ಆಯ್ಕೆಯ ಮೇಲೂ ಪ್ರಭಾವ ಬೀರುವ ಸಾಧ್ಯತೆಗಳಿವೆ. ಹೌದು, ಸದ್ಯ ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಭಾರತ ತಂಡದ ನಾಯಕನಾಗಿದ್ದು, ರೋಹಿತ್ ಶರ್ಮಾ ನಂತರ ನಾಯಕತ್ವ ಯಾರ ಪಾಲಾಗಲಿದೆ ಎಂಬ ಪ್ರಶ್ನೆ ಎದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಗಮನಾರ್ಹ ನಾಯಕತ್ವವನ್ನು ನಿರ್ವಹಿಸಿರುವ ಈ ಕೆಳಕಂಡ ಮೂವರು ಆಟಗಾರರು ರೋಹಿರ್ ಶರ್ಮಾ ನಂತರ ಭಾರತ ತಂಡದ ನಾಯಕನಾಗುವ ಸಾಧ್ಯತೆಗಳಿವೆ.

1. ಹಾರ್ದಿಕ್ ಪಾಂಡ್ಯ

1. ಹಾರ್ದಿಕ್ ಪಾಂಡ್ಯ

ಈ ಹಿಂದೆ ಫಿಟ್‌ನೆಸ್ ವಿಚಾರಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಣಕ್ಕಿಳಿದಿದ್ದು, ಭರ್ಜರಿಯಾಗಿ ಯಶಸ್ಸು ಸಾಧಿಸಿದ್ದಾರೆ. ಹೌದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಗುಜರಾತ್ ಟೈಟನ್ಸ್ ಪಾತ್ರವಾಗಿದ್ದು, ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾ ನಾಯಕನಾಗುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಾರ್ದಿಕ್ ಪಾಂಡ್ಯ ಈ ಬಾರಿಯ ಟೂರ್ನಿಯಲ್ಲಿ ಬೌಲಿಂಗ್ ಕೂಡ ಮಾಡಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದಾರೆ.

2. ಶ್ರೇಯಸ್ ಐಯ್ಯರ್

2. ಶ್ರೇಯಸ್ ಐಯ್ಯರ್

2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿದ್ದ ಶ್ರೇಯಸ್ ಐಯ್ಯರ್ ತಂಡವನ್ನು ಫೈನಲ್ ಹಂತದವರೆಗೂ ಕೊಂಡೊಯ್ದಿದ್ದರು. ಹಾಗೂ ಈ ಬಾರಿಯ ಆವೃತ್ತಿಯಲ್ಲಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಐಯ್ಯರ್ ಟೀಮ್ ಇಂಡಿಯಾವನ್ನು ಮುಂದಿನ ದಿನಗಳಲ್ಲಿ ಮುನ್ನಡೆಸಬಹುದಾದ ಅರ್ಹತೆಯಿರುವ ಆಟಗಾರರ ಸಾಲಿನಲ್ಲಿದ್ದಾರೆ. ಇನ್ನು ಶ್ರೇಯಸ್ ಐಯ್ಯರ್ ಮುಂದಿನ ಐಪಿಎಲ್ ಆವೃತ್ತಿಗಳಲ್ಲಿ ನಾಯಕನಾಗಿ ಟ್ರೋಫಿ ಗೆಲ್ಲಿಸಿದರೆ, ರೋಹಿತ್ ಕೆಳಗಿಳಿದ ಬಳಿಕ ಟೀಮ್ ಇಂಡಿಯಾ ನಾಯಕನಾಗುವ ಸಾಧ್ಯತೆಗಳು ಹೆಚ್ಚಿವೆ.

ನಾನು ಡಕ್ ಔಟ್ ಆಗಿದ್ದು ದೊಡ್ಡ ಶಾಕ್ ! | Oneindia Kannada
3. ರಿಷಭ್ ಪಂತ್

3. ರಿಷಭ್ ಪಂತ್

ಶ್ರೇಯಸ್ ಐಯ್ಯರ್ ನಾಯಕತ್ವದ ನಂತರ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡ ರಿಷಭ್ ಪಂತ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರಿಸಿ ಯಶಸ್ವಿಯಾಗಿದ್ದರು. ಹಾಗೂ ಈ ಬಾರಿಯೂ ಸಹ ತಂಡವನ್ನು ಪ್ಲೇಆಫ್ ಸುತ್ತಿಗೆ ತಲುಪಿಸುವಲ್ಲಿ ಪಂತ್ ಯಶಸ್ವಿಯಾಗುವ ಸಾಧ್ಯತೆಗಳು ಹೆಚ್ಚಿದ್ದು, ಪಂತ್ ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾ ನಾಯಕತ್ವವನ್ನು ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನು ಯುವ ಆಟಗಾರನಾಗಿರುವ ಕಾರಣ ಪಂತ್ ಭಾರತ ಕ್ರಿಕೆಟ್ ತಂಡದ ಸಾರಥಿಯಾಗಲಿದ್ದಾರೆ ಎಂಬ ಅಭಿಪ್ರಾಯಗಳು ದೊಡ್ಡ ಮಟ್ಟದಲ್ಲಿಯೇ ಇವೆ.

Story first published: Monday, May 16, 2022, 17:57 [IST]
Other articles published on May 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X