For Quick Alerts
ALLOW NOTIFICATIONS  
For Daily Alerts
 

CSK vs GT: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರು ಆಟಗಾರರನ್ನು ಹೊರಗಿಡಿ!

IPL 2022: 3 players you should avoid in your dream team for CSK vs GT game
Miller ಹಾಗು Rashid ಸೋತ ಪಂದ್ಯವನ್ನು ಗೆಲ್ಲಿಸಿದ್ದು ಹೀಗೆ | Oneindia Kannada

ಪ್ರಸ್ತುತ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಏಪ್ರಿಲ್ 17ರ ಭಾನುವಾರದಂದು ಟೂರ್ನಿಯಲ್ಲಿ ಒಟ್ಟು 2 ಪಂದ್ಯಗಳು ಆಯೋಜನೆಯಾಗಿವೆ. ಈ ಪೈಕಿ ಪ್ರಥಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸುತ್ತಿದ್ದರೆ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ನೂತನ ತಂಡ ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ನೂತನವಾಗಿ ಈ ಬಾರಿ ಕಣಕ್ಕಿಳಿದಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಒಟ್ಟು 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 5 ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಸತತ 4 ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದ ನಂತರ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದು ಗೆಲುವಿನ ಖಾತೆ ತೆರೆದಿದೆ. ಇತ್ತ ಗುಜರಾತ್ ಟೈಟನ್ಸ್ ತನ್ನ ಅಂತಿಮ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 37 ರನ್‌ಗಳ ಗೆಲುವು ಸಾಧಿಸಿದೆ.

ಹೀಗೆ ತಮ್ಮ ಅಂತಿಮ ಪಂದ್ಯಗಳಲ್ಲಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಹಾದಿಯಲ್ಲಿ ಮುಂದುವರಿಯುವತ್ತ ಚಿತ್ತ ನೆಟ್ಟಿದ್ದರೆ, ಗುಜರಾತ್ ಟೈಟನ್ಸ್ ಕೂಡ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಯೋಜನೆ ಹಾಕಿಕೊಂಡಿದೆ. ಇನ್ನು ಸತತ ಗೆಲುವು ಸಾಧಿಸುತ್ತಿರುವ ಗುಜರಾತ್ ಟೈಟನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುತ್ತಾ ಅಥವಾ ಸೋಲುತ್ತಾ ಎಂಬ ಲೆಕ್ಕಾಚಾರಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಡ್ರೀಮ್ ಟೀಮ್ ರಚಿಸಿ, ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಈ ತಂಡಕ್ಕೆ ಆಯ್ಕೆ ಮಾಡುತ್ತಿದ್ದಾರೆ. ಹೀಗೆ ಕ್ರಿಕೆಟ್ ಪ್ರೇಮಿಗಳು ರಚಿಸುತ್ತಿರುವ ಡ್ರೀಮ್ ತಂಡಗಳಲ್ಲಿ ಈ ಕೆಳಕಂಡ ಮೂವರು ಆಟಗಾರರನ್ನು ಕೈಬಿಡುವುದು ಉತ್ತಮ ಆಯ್ಕೆಯಾಗಿರಲಿದೆ.

wade

1. ಮ್ಯಾಥ್ಯೂ ವೇಡ್

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಕಣಕ್ಕಿಳಿದಿರುವ ಮ್ಯಾಥ್ಯೂ ವೇಡ್ ಪ್ರಥಮ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 29 ಎಸೆತಗಳಲ್ಲಿ 30 ರನ್ ಗಳಿಸಿದ್ದರು ಹಾಗೂ ನಂತರ ನಡೆದ 2 ಪಂದ್ಯಗಳಲ್ಲಿ ಎರಡಂಕಿ ಮುಟ್ಟುವಲ್ಲಿ ವಿಫಲವಾದ ಮ್ಯಾಥ್ಯೂ ವೇಡ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ 19 ಎಸೆತಗಳಲ್ಲಿ 19 ರನ್ ಕಲೆ ಹಾಕಿದರು ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ 6 ಎಸೆತಗಳನ್ನು ಎದುರಿಸಿ 12 ರನ್ ಕಲೆ ಹಾಕಿದರು. ಹೀಗೆ ಟೂರ್ನಿಯಲ್ಲಿ ಆಡಿರುವ ಯಾವುದೇ ಪಂದ್ಯದಲ್ಲಿಯೂ ದೊಡ್ಡ ರನ್ ಕಲೆಹಾಕುವಲ್ಲಿ ಯಶಸ್ವಿಯಾಗದ ಮ್ಯಾಥ್ಯೂ ವೇಡ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡಿ.

2. ವಿಜಯ್ ಶಂಕರ್

ಈ ಬಾರಿಯ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಗುಜರಾತ್ ಟೈಟನ್ಸ್ ಪರ ಕಣಕ್ಕಿಳಿದಿದ್ದ ವಿಜಯ್ ಶಂಕರ್ ಕೇವಲ 17 ರನ್ ಕಲೆಹಾಕುವಲ್ಲಿ ಮಾತ್ರ ಯಶಸ್ವಿಯಾಗಿದ್ದರು. ನಂತರ ಮೂರನೇ ಪಂದ್ಯದಲ್ಲಿ ತಂಡದಿಂದ ಹೊರಬಿದ್ದ ವಿಜಯ್ ಶಂಕರ್ ಬದಲು ಸಾಯಿ ಸುದರ್ಶನ್ 30 ಎಸೆತಗಳಲ್ಲಿ 35 ರನ್ ಕಲೆಹಾಕಿ ಶುಬ್ ಮನ್ ಗಿಲ್ ಜತೆ 101 ರನ್‌ಗಳ ಜತೆಯಾಟವಾಡಿದರು. ಇನ್ನು ಕೊನೆಯ ಪಂದ್ಯದಲ್ಲಿ ತಂಡದಿಂದ ಹೊರಗುಳಿದ ಸಾಯಿ ಸುದರ್ಶನ್ ಬದಲು ವಿಜಯ್ ಶಂಕರ್ ಅವರಿಗೆ ಮತ್ತೆ ಅವಕಾಶ ನೀಡಿದರೂ ಸಹ ಯಶಸ್ವಿಯಾಗಲಿಲ್ಲ. ವಿಜಯ್ ಶಂಕರ್ ಈ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಮಾತ್ರ ಗಳಿಸಿದರು. ಈ ಮೂಲಕ ಟೂರ್ನಿಯಲ್ಲಿ ವಿಜಯ್ ಶಂಕರ್ ಫಾರ್ಮ್ ಕಳೆದುಕೊಂಡಿರುವುದು ಖಚಿತವಾಗಿದ್ದು, ನಿಮ್ಮ ಡ್ರೀಮ್ ತಂಡದಿಂದ ಇವರನ್ನು ಹೊರಗಿಡುವುದು ಉತ್ತಮ.

3. ಕ್ರಿಸ್ ಜೋರ್ಡಾನ್

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪದಾರ್ಪಣೆ ಮಾಡಿದ ಕ್ರಿಸ್ ಜೋರ್ಡಾನ್ ಆ ಪಂದ್ಯದಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಆದರೆ ನಂತರದ 2 ಪಂದ್ಯಗಳಲ್ಲಿ ಯಾವುದೇ ವಿಕೆಟ್ ಪಡೆಯದೇ ವಿಫಲರಾದ ಕ್ರಿಸ್ ಜೋರ್ಡಾನ್ ಬದಲಾಗಿ ಇತರೆ ಬೌಲರ್‌ಗಳನ್ನು ನಿಮ್ಮ ಡ್ರೀಮ್ ತಂಡಕ್ಕೆ ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎನ್ನಬಹುದು.

Story first published: Sunday, April 17, 2022, 16:25 [IST]
Other articles published on Apr 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+