CSK vs MI: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರು ಆಟಗಾರರನ್ನು ಕಡೆಗಣಿಸಿ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅತಿ ಕೆಟ್ಟ ಆರಂಭವನ್ನು ಪಡೆದುಕೊಂಡಿವೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿರುವ ಬಲಿಷ್ಠ ತಂಡಗಳು ಎಂಬ ಹಿರಿಮೆಯನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಕಂಡು ನೆಲಕಚ್ಚಿವೆ.
ಚೆನ್ನೈ ಸೂಪರ್ ಕಿಂಗ್ಸ್ ಇಲ್ಲಿಯವರೆಗೂ ಆಡಿರುವ ಒಟ್ಟು 6 ಪಂದ್ಯಗಳ ಪೈಕಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋಲುವ ಮೂಲಕ 2 ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ ಎಲ್ಲಾ ಪಂದ್ಯಗಳಲ್ಲಿಯೂ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್ ಗೆಲುವಿನ ಖಾತೆ ತೆರೆಯಲಾಗದೇ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಹೀಗೆ ಅಂಕಪಟ್ಟಿಯ ಅಂತಿಮ ಸ್ಥಾನಗಳನ್ನು ಪಡೆದು ಕೆಟ್ಟ ಸ್ಥಿತಿಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಟೂರ್ನಿಯ 33ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 21 ) ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಸೆಣಸಾಡುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಯಾವ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರಗಳಲ್ಲಿ ತೊಡಗಿಕೊಂಡಿದ್ದಾರೆ. ಮತ್ತೊಂದೆಡೆ ಕೆಲವೊಂದಿಷ್ಟು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಡ್ರೀಮ್ ತಂಡಗಳನ್ನು ರಚಿಸುತ್ತಿದ್ದು, ಪಂದ್ಯದಲ್ಲಿ ಮಿಂಚಬಹುದಾದ ಆಟಗಾರರನ್ನು ಆಯ್ಕೆ ಮಾಡುವಲ್ಲಿ ನಿರತರಾಗಿದ್ದಾರೆ. ಹೀಗೆ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ರಚಿಸುತ್ತಿರುವ ಡ್ರೀಮ್ ತಂಡಗಳಿಂದ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡುವುದು ಸೂಕ್ತ.
1. ಮೊಯಿನ್ ಅಲಿ
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 5 ಪಂದ್ಯಗಳನ್ನಾಡಿರುವ ಮೊಯಿನ್ ಅಲಿ ಒಂದೇ ಒಂದು ವಿಕೆಟ್‍ನ್ನೂ ಸಹ ಪಡೆದಿಲ್ಲ. 2 ಇನ್ನಿಂಗ್ಸ್‌ನಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿರುವುದನ್ನು ಬಿಟ್ಟರೆ ಉಳಿದ ಯಾವುದೇ ಪಂದ್ಯದಲ್ಲಿಯೂ ಕೂಡ ಮೊಯಿನ್ ಅಲಿ ಬ್ಯಾಟ್‌ನಿಂದ ದೊಡ್ಡ ರನ್ ಹರಿದು ಬಂದಿಲ್ಲ. ಹೀಗಾಗಿ ಇಂದಿನ ಪಂದ್ಯಕ್ಕೆ ನೀವು ರಚಿಸುತ್ತಿರುವ ಡ್ರೀಮ್ ತಂಡದಿಂದ ಮೊಯಿನ್ ಅಲಿ ಅವರನ್ನು ಹೊರಗಿಡುವುದು ಸೂಕ್ತ.
2. ಕೀರನ್ ಪೊಲಾರ್ಡ್
ನಿನ್ನೆಯಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿರುವ ಕೀರನ್ ಪೊಲಾರ್ಡ್ ಈ ಬಾರಿಯ ಐಪಿಎಲ್ ಟೂರ್ನಿಯ ಇನ್ನಿಂಗ್ಸ್‌ವೊಂದರಲ್ಲಿ 25ಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ ಹಾಗೂ ಟೂರ್ನಿಯಲ್ಲಿ ಕೇವಲ ಒಂದೇ ಒಂದು ವಿಕೆಟ್ ಪಡೆದು ಕಳಪೆಯಾಗಿದ್ದಾರೆ. ಇನ್ನು ಕಳೆದೆರಡು ಪಂದ್ಯಗಳಲ್ಲಿ ಬೌಲಿಂಗ್ ಕೂಡ ಮಾಡದೇ ಮಂಕಾಗಿರುವ ಕೀರನ್ ಪೊಲಾರ್ಡ್ ಅವರನ್ನು ನಿಮ್ಮ ಡ್ರೀಮ್ ಟೀಂನಿಂದ ಹೊರಗಿಡುವುದು ಸೂಕ್ತ.
3. ಟೈಮಲ್ ಮಿಲ್ಸ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತನ್ನ ಮೊದಲ 3 ಪಂದ್ಯಗಳಲ್ಲಿ 6 ವಿಕೆಟ್ ಪಡೆದು ಮಿಂಚಿದ್ದ ಟೈಮಲ್ ಮಿಲ್ಸ್ ನಂತರದ 2 ಪಂದ್ಯಗಳಲ್ಲಿ ಇದೇ ರೀತಿಯ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಕಳೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್ ಬೌಲಿಂಗ್ ಮಾಡಿ 54 ರನ್ ನೀಡಿ ದುಬಾರಿಯಾಗಿರುವ ಟೈಮಲ್ ಮಿಲ್ಸ್ ಈ ಪಂದ್ಯದಲ್ಲಿ ಆಡುವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಗಳೂ ಸಹ ಇವೆ. ಹೀಗಾಗಿ ಟೈಮಲ್ ಮಿಲ್ಸ್ ಅವರನ್ನು ಇಂದಿನ ಪಂದ್ಯದ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications