For Quick Alerts
ALLOW NOTIFICATIONS  
For Daily Alerts
 

CSK vs PBKS: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ಹೊರಗಿಡಿ

IPL 2022: 3 Players you should avoid in your dream team for CSK vs PBKS game

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯ 38ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಎರಡನೇ ಬಾರಿಗೆ ಇತ್ತಂಡಗಳು ಮುಖಾಮುಖಿಯಾಗುತ್ತಿವೆ. ಹೌದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿಯ ಐಪಿಎಲ್ ಆವೃತ್ತಿಯ ಹನ್ನೊಂದನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು ಹಾಗೂ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 54 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಉಳಿದ ನಾಲ್ಕು ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಹಾಗೂ 7 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು, ಉಳಿದ ಐದು ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡೂ ಸಹ ಪ್ಲೇಆಫ್ ಪ್ರವೇಶಿಸಲು ಉಳಿದ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆಯಲ್ಲಿದ್ದು, ಈ ಪಂದ್ಯವನ್ನು ಸೋಲುವ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಲಿದ್ದು, ಎರಡೂ ತಂಡಗಳಿಗೂ ಈ ಪಂದ್ಯ ಬಹುಮುಖ್ಯದ್ದಾಗಿದೆ.

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರ ಹಾಗೂ ಊಹೆಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ತೊಡಗಿಕೊಂಡಿದ್ದರೆ, ಮತ್ತೊಂದಷ್ಟು ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಊಹಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಆರಿಸದೇ ನಿರ್ಲಕ್ಷಿಸುವುದು ಉತ್ತಮ ಎಂದು ಕ್ರೀಡಾ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ.

1. ಶಾರುಖ್ ಖಾನ್

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಾರುಖ್ ಖಾನ್ ಕೇವಲ 98 ರನ್ ಗಳಿಸಿದ್ದು, ದೇಸಿ ಕ್ರಿಕೆಟ್ ಟೂರ್ನಿಗಳಲ್ಲಿ ನೀಡಿದ್ದ ರೀತಿಯ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ಈ ಬಾರಿಯ ಟೂರ್ನಿಯಲ್ಲಿ ಫಾರ್ಮ್ ಕಳೆದುಕೊಂಡು ವಿಫಲರಾಗಿರುವ ಶಾರುಖ್ ಖಾನ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

2. ಅರ್ಷದೀಪ್ ಸಿಂಗ್

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ರೀತಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಅರ್ಷದೀಪ್ ಸಿಂಗ್ ಅವರನ್ನು ಇಂದಿನ ಪಂದ್ಯಕ್ಕಾಗಿ ರಚಿಸಲಿರುವ ಡ್ರೀಮ್ ಟೀಮ್‌ನಿಂದ ಹೊರಗಿಡಿ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆಯುವಲ್ಲಿ ಮಾತ್ರ ಶಕ್ತರಾಗಿದ್ದಾರೆ.

3. ಅಂಬಟಿ ರಾಯುಡು

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅಂಬಟಿ ರಾಯುಡು 168 ರನ್ ಕಲೆಹಾಕುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಇನ್ನು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲಿನ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ನೆಲಕಚ್ಚಿ ನಿಂತರೆ ಅಂಬಟಿ ರಾಯುಡು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿದ್ದು ನಿಮ್ಮ ಡ್ರೀಮ್ ತಂಡಕ್ಕೆ ಹೆಚ್ಚಿನ ಅಂಕಗಳು ಬರುವುದಿಲ್ಲ ಎನ್ನಬಹುದು. ಹೀಗಾಗಿ ಅಂಬಟಿ ರಾಯುಡು ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಸೂಕ್ತ.

Story first published: Monday, April 25, 2022, 17:02 [IST]
Other articles published on Apr 25, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+