ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs CSK: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ಹೊರಗಿಡಿ

IPL 2022: 3 Players you should avoid in your dream team for CSK vs RCB game

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 49ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಪಂದ್ಯದ ಮೂಲಕ ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವೆ ಈ ಹಿಂದೆ ನಡೆದಿದ್ದ ಈ ಬಾರಿಯ ಟೂರ್ನಿಯ ಮೊದಲ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು.

ಇನ್ನು ಟೂರ್ನಿಯ ಆರಂಭದಲ್ಲಿ ಸಾಲು ಸಾಲು ಪಂದ್ಯಗಳಲ್ಲಿ ಗೆಲ್ಲುವುದರ ಮೂಲಕ ಅಬ್ಬರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಂತರದ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಹ್ಯಾಟ್ರಿಕ್ ಸೋಲನ್ನೂ ಕೂಡ ಕಂಡಿದೆ. ಅತ್ತ ಟೂರ್ನಿಯಲ್ಲಿ ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತು ಕೆಟ್ಟ ದಾಖಲೆ ಬರೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಇದೀಗ 9 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆದ್ದು, ಮುಂದಿನ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಹೊಂದಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆಗೂ 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 5 ಪಂದ್ಯಗಳಲ್ಲಿ ಸೋತಿದ್ದು, ಹತ್ತು ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಸೋತರೆ ಪ್ಲೇಆಫ್ ಪ್ರವೇಶಿಸಲು ಉಳಿದ ತಂಡಗಳ ನೆಟ್ ರನ್ ರೇಟ್ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅವಲಂಬಿತವಾಗಬೇಕಾಗುತ್ತದೆ.

ಕೊಹ್ಲಿ ಇರುವುದರಿಂದ ಈ ಪ್ರತಿಭಾವಂತ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುತ್ತಿಲ್ಲ ಎಂದ ಸ್ಟೇನ್!ಕೊಹ್ಲಿ ಇರುವುದರಿಂದ ಈ ಪ್ರತಿಭಾವಂತ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುತ್ತಿಲ್ಲ ಎಂದ ಸ್ಟೇನ್!

ಹೀಗೆ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ತನ್ನ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬಹುದು ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಡ್ರೀಮ್ ಟೀಮ್ ರಚಿಸುತ್ತಿದ್ದು ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಕ್ರಿಕೆಟ್ ಪ್ರೇಮಿಗಳು ಇಂದಿನ ಪಂದ್ಯಕ್ಕಾಗಿ ರಚಿಸುತ್ತಿರುವ ಡ್ರೀಮ್ ಟೀಮ್‌ನಲ್ಲಿ ಹೆಚ್ಚು ಫ್ಯಾಂಟಸಿ ಅಂಕಗಳನ್ನು ಪಡೆಯುವಲ್ಲಿ ವಿಫಲರಾಗಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡುವುದು ಉತ್ತಮ ಎನ್ನಬಹುದು.

1. ಮಹಿಪಾಲ್ ಲೊಮ್ರೊರ್: ಕಳೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪದಾರ್ಪಣೆ ಮಾಡಿರುವ ಮಹಿಪಾಲ್ ಲೊಮ್ರೊರ್ ಆ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದು 8 ಎಸೆತಗಳಲ್ಲಿ 16 ರನ್ ಕಲೆಹಾಕಿ ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಹೀಗೆ ಅಂತಿಮ ಹಂತದಲ್ಲಿ ಕಣಕ್ಕಿಳಿದು ಬ್ಯಾಟ್ ಬೀಸುವ ಮಹಿಪಾಲ್ ಲೊಮ್ರೊರ್ ಹೆಚ್ಚು ಫ್ಯಾಂಟಸಿ ಅಂಕಗಳನ್ನು ಪಡೆದುಕೊಳ್ಳುವುದಿಲ್ಲ ಹಾಗೂ ಬೌಲಿಂಗ್ ಅವಕಾಶ ಸಿಗದ ಇವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಆಯ್ಕೆ ಎನ್ನಬಹುದು.

2. ಮಿಚೆಲ್ ಸ್ಯಾಂಟ್ನರ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಒಟ್ಟು 4 ಪಂದ್ಯಗಳಲ್ಲಿ ಕಣಕ್ಕಿಳಿದು 3 ವಿಕೆಟ್ ಪಡೆಯುವಲ್ಲಿ ಮಾತ್ರ ಸಫಲರಾಗಿರುವ ಮಿಚೆಲ್ ಸ್ಯಾಂಟ್ನರ್ ಇಂದಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊಯಿನ್ ಅಲಿ ಏನಾದರೂ ಕಣಕ್ಕಿಳಿದರೆ ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಹೀಗಾಗಿ ಮಿಚೆಲ್ ಸ್ಯಾಂಟ್ನರ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡಿ.

ಈತ ಚೆನ್ನಾಗಿ ಆಡುವುದು ತಲೆಮಾರಿಗೊಮ್ಮೆ; ಹೀನಾಯ ಟ್ರೋಲ್‌ಗೆ ತುತ್ತಾದ ಮಾಜಿ ಆರ್‌ಸಿಬಿ ಆಟಗಾರಈತ ಚೆನ್ನಾಗಿ ಆಡುವುದು ತಲೆಮಾರಿಗೊಮ್ಮೆ; ಹೀನಾಯ ಟ್ರೋಲ್‌ಗೆ ತುತ್ತಾದ ಮಾಜಿ ಆರ್‌ಸಿಬಿ ಆಟಗಾರ

Kohli ಹಾಗು Lomror ನಡುವೆ ನಡೆದಿದ್ದೇನು | Oneindia Kannada

3. ಸಿಮರ್‌ಜೀತ್ ಸಿಂಗ್: ಕಳೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪದಾರ್ಪಣೆ ಮಾಡಿದ ಸಿಮರ್‌ಜೀತ್ ಸಿಂಗ್ ಆ ಪಂದ್ಯದಲ್ಲಿ 2 ಓವರ್ ಬೌಲಿಂಗ್ ಮಾಡಿ 24 ರನ್ ನೀಡಿ ಯಾವುದೇ ವಿಕೆಟ್ ಪಡೆಯದೇ ಮಂಕಾದರು. ಹೀಗಾಗಿ ಸಿಮರ್‌ಜೀತ್ ಸಿಂಗ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ.

Story first published: Wednesday, May 4, 2022, 17:54 [IST]
Other articles published on May 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X