RCB vs CSK: ಪಂದ್ಯದಲ್ಲಿ ಗೆಲ್ಲಬೇಕೆಂದರೆ ನಿಮ್ಮ ಡ್ರೀಮ್ ಟೀಮ್‌ನಿಂದ ಈ ಮೂವರನ್ನು ತಪ್ಪದೇ ಹೊರಗಿಡಿ!

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಟೂರ್ನಿಯಲ್ಲಿ ಸತತ ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಹತ್ವದ್ದಾಗಿದೆ.
ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ 4 ಪಂದ್ಯಗಳ ಪೈಕಿ ಎಲ್ಲ ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ ನೆಲಕಚ್ಚಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಇದೇ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತವಾಗಿ 4 ಪಂದ್ಯಗಳನ್ನು ಸೋತ ಅನುಭವವನ್ನು ಪಡೆದು ಹಿನ್ನಡೆ ಅನುಭವಿಸಿದ್ದರೆ, ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ಪಂದ್ಯಗಳಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋಲುವುದರ ಮೂಲಕ 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಮೊದಲಿಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಂತರ ನಡೆದ ಮೂರು ಪಂದ್ಯಗಳಲ್ಲಿ ಗೆದ್ದು, ಹ್ಯಾಟ್ರಿಕ್ ಜಯ ಸಾಧಿಸಿದೆ. ಹೀಗೆ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದ್ದರೆ, ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ಸಾಲು ಸಾಲು ಸೋಲನ್ನು ಅನುಭವಿಸಿದೆ. ಹೀಗೆ ನೆಲಕಚ್ಚಿರುವ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ತನ್ನ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಾದರೂ ಸಿಎಸ್‌ಕೆ ಜಯ ಗಳಿಸಿ ಗೆಲುವಿನ ಖಾತೆ ತೆರೆಯುತ್ತಾ ಅಥವಾ ಸೋತು ತನ್ನ ಕಳಪೆ ಫಾರ್ಮ್‌ನ್ನು ಮುಂದುವರೆಸುತ್ತಾ ಎಂಬ ಚರ್ಚೆಗಳು ಆರಂಭಗೊಂಡಿವೆ. ಈ ಚರ್ಚೆಗಳ ಜತೆಗೆ ಈ ಪಂದ್ಯಕ್ಕಾಗಿ ಕೆಲ ಕ್ರಿಕೆಟ್ ಪ್ರೇಮಿಗಳು ಡ್ರೀಮ್ ಟೀಮ್ ರಚಿಸುತ್ತಿದ್ದು, ಈ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ತಮ್ಮ ಡ್ರೀಮ್ ಟೀಮ್‌ನಲ್ಲಿ ಈ ಕೆಳಕಂಡ ಮೂವರು ಆಟಗಾರರನ್ನು ಸೇರಿಸಿಕೊಳ್ಳದೇ ಇರುವುದು ಉತ್ತಮ ಆಯ್ಕೆ ಎನ್ನಬಹುದು.

1. ಶಿವಮ್ ದುಬೆ
ಚೆನ್ನೈ ಸೂಪರ್ ಕಿಂಗ್ಸ್‌ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ವಿರುದ್ಧ ಕಣಕ್ಕಿಳಿದು ಕೇವಲ 3 ರನ್ ಗಳಿಸಿದ್ದ ಶಿವಮ್ ದುಬೆ ನಂತರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ದ್ವಿತೀಯ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು 30 ಎಸೆತಗಳಲ್ಲಿ 49 ರನ್ ಕಲೆಹಾಕಿದ್ದರು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ತೃತೀಯ ಪಂದ್ಯದಲ್ಲಿ ಆರನನೇ ಕ್ರಮಾಂಕದಲ್ಲಿ ಕಣಕ್ಕಿಳಿದು 30 ಎಸೆತಗಳಲ್ಲಿ 57 ರನ್ ಬಾರಿಸಿದ್ದ ದುಬೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ಕೇವಲ 3 ರನ್ ಗಳಿಸಿದರು. ಇನ್ನು ಕಳೆದೆರಡು ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ಅವಕಾಶ ಪಡೆಯದೇ ಇರುವ ಶಿವಮ್ ದುಬೆಗೆ ನಿಮ್ಮ ಡ್ರೀಮ್ ಟೀಮ್‌ನಲ್ಲಿ ಅವಕಾಶ ನೀಡುವುದು ಸರಿಯಾದ ಆಯ್ಕೆಯಲ್ಲ ಎನ್ನಬಹುದು. ಹಾಗೂ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಸಲ್ಪಡುತ್ತಿರುವ ಶಿವಮ್ ದುಬೆಯಿಂದ ನಿಮ್ಮ ಡ್ರೀಮ್ ಟೀಮ್‌ಗೆ ಹೆಚ್ಚಿನ ಅಂಕಗಳೇನು ಸಿಗುವುದಿಲ್ಲ ಎನ್ನಬಹುದು.

2. ಡೇವಿಡ್ ವಿಲ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಡೇವಿಡ್ ವಿಲ್ಲಿ ಕೇವಲ 18 ರನ್ ಕಲೆಹಾಕಿ ಕೇವಲ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೋಶ್ ಹೇಜಲ್‌ವುಡ್ ಕಣಕ್ಕಿಳಿಯುವ ಕಾರಣ ನಿರೀಕ್ಷಿಸಿದ ಮಟ್ಟದ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಡೇವಿಡ್ ವಿಲ್ಲಿ ತಂಡದಿಂದ ಹೊರಬೀಳುವ ಸಾಧ್ಯತೆಗಳಿದೆ. ಹೀಗಾಗಿ ಈ ಪಂದ್ಯದಿಂದ ಡೇವಿಡ್ ವಿಲ್ಲಿ ಅವರನ್ನು ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಆಯ್ಕೆ ಎನ್ನಬಹುದು.

3. ಹರ್ಷಲ್ ಪಟೇಲ್
ತನ್ನ ಸಹೋದರಿಯ ನಿಧನದ ಕಾರಣ ಬಯೋ ಬಬಲ್ ತೊರೆದಿರುವ ಹರ್ಷಲ್ ಪಟೇಲ್ ಈ ಪಂದ್ಯದ ಆಯ್ಕೆಗೆ ಅಲಭ್ಯರಾಗಲಿದ್ದಾರೆ. ಹರ್ಷಲ್ ಪಟೇಲ್ ಮತ್ತೆ ತಂಡ ಸೇರಿದರೂ ಸಹ 3 ದಿನಗಳ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಿದ್ದು, ಈ ಪಂದ್ಯಕ್ಕಾಗಿ ನೀವು ರಚಿಸಲಿರುವ ಡ್ರೀಮ್ ಟೀಮ್‌ನಲ್ಲಿ ಇತರೆ ಬೌಲರ್‌ಗಳನ್ನು ಆರಿಸುವುದು ಉತ್ತಮ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications