RR vs CSK: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ನಿನ್ನೆ ( ಮೇ 19 ) ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದ ನಂತರ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎಲಿಮಿನೇಟ್ ಆಗಿವೆ. ಇನ್ನು ಈಗಾಗಲೇ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈಗಾಗಲೇ ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿದ್ದು, ರಾಜಸ್ಥಾನ್ ರಾಯಲ್ಸ್ ಮೂರನೇ ತಂಡವಾಗಿ ಪ್ರವೇಶ ಪಡೆದುಕೊಳ್ಳುವುದು ಖಚಿತ. ಆದರೆ, ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದ ತನ್ನ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದ್ದು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದರೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿದ್ದು, ಕ್ವಾಲಿಫೈಯರ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ ಅಥವಾ ಸೋತರೆ ಮೂರನೇ ಸ್ಥಾನದಲ್ಲಿಯೇ ಉಳಿದುಕೊಳ್ಳಲಿದೆ.
ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯ ಬಹು ಮುಖ್ಯದ್ದಾಗಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಗುರಿಯನ್ನು ಹೊಂದಿದೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಇಂದು ( ಮೇ 20 ) ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು, ಈ ಪಂದ್ಯದ ಫಲಿತಾಂಶ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದೇ ಹೇಳಬಹುದು. ಹೀಗಾಗಿ ಈ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೆಚ್ಚು ಮುಖ್ಯವಾಗಿದ್ದು, ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದರೆ, ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತನ್ನ ಸ್ಥಾನದಲ್ಲಿಯೇ ಮುಂದುವರಿಯಲಿದೆ.
ಹೀಗೆ ಇಂದಿನ ಪಂದ್ಯದಲ್ಲಿ ಯಾವ ತಂಡ ಉತ್ತಮ ಪ್ರದರ್ಶನ ನೀಡಬಹುದು ಎಂಬ ಲೆಕ್ಕಾಚಾರಗಳನ್ನು ಹಾಕುವುದರಲ್ಲಿ ಕೆಲ ಕ್ರಿಕೆಟ್ ಅಭಿಮಾನಿಗಳು ನಿರತರಾಗಿದ್ದರೆ, ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುವಲ್ಲಿ ನಿರತರಾಗಿದ್ದು, ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಊಹಿಸಿ ಆರಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಆಟಗಾರರ ಪೈಕಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡುವುದು ಸೂಕ್ತ ಎನ್ನಬಹುದು.

1. ಶಿವಮ್ ದುಬೆ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದು ಆರಂಭದ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಮಿಂಚಿದ್ದ ಶಿವಮ್ ದುಬೆ ಟೂರ್ನಿಯ ದ್ವಿತೀಯಾರ್ಧದಲ್ಲಿ ಅದೇ ರೀತಿಯ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇನ್ನು ಈ ಬಾರಿಯ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಶಿವಮ್ ದುಬೆ ಎರಡನೇ ಸ್ಥಾನದಲ್ಲಿದ್ದರೂ ಸಹ ಕಳೆದ ಐದು ಪಂದ್ಯಗಳಲ್ಲಿ 30ಕ್ಕೂ ಹೆಚ್ಚು ರನ್ ಕಲೆಹಾಕಿರುವುದು ಕೇವಲ ಒಂದು ಬಾರಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲಿ ಶಿವಮ್ ದುಬೆ ಅವರನ್ನು ಹೊರಗಿಡುವುದು ಉತ್ತಮ ಎನ್ನಬಹುದು.

2. ಮಿಚೆಲ್ ಸ್ಯಾಂಟ್ನರ್
ಈ ಬಾರಿಯ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಐದು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಿಚೆಲ್ ಸ್ಯಾಂಟ್ನರ್ ಒಂದಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ ಹಾಗೂ 15ಕ್ಕಿಂತ ಹೆಚ್ಚು ರನ್ ಗಳಿಸಿಲ್ಲ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮಿಚೆಲ್ ಸ್ಯಾಂಟ್ನರ್‌ನ್ನು ತನ್ನ ಕೊನೆಯ ಪಂದ್ಯದಲ್ಲಿಯೂ ಕಣಕ್ಕಿಳಿಸಿತ್ತು. ಆದರೆ, ಸ್ಯಾಂಟ್ನರ್ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ. ಹೀಗಾಗಿ ಈತನನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ.

3. ಜೇಮ್ಸ್ ನೀಶಮ್
ರಾಜಸ್ಥಾನ್ ರಾಯಲ್ಸ್ ಆಡಿದ ಕೊನೆಯ ಪಂದ್ಯದಲ್ಲಿ ಈ ಬಾರಿಯ ಟೂರ್ನಿಯಲ್ಲಿ ಎರಡನೇ ಬಾರಿಗೆ ಕಣಕ್ಕಿಳಿದ ಜೇಮ್ಸ್ ನೀಶಮ್ ಆ ಪಂದ್ಯದಲ್ಲಿ ಕೇವಲ 14 ರನ್ ಗಳಿಸಿದ್ದರು. ಇನ್ನು ಶಿಮ್ರಾನ್ ಹೆಟ್ಮಾಯೆರ್ ಇಲ್ಲದ ಕಾರಣ ಅವರ ಬದಲಾಗಿ ಕಣಕ್ಕಿಳಿದಿದ್ದ ರಸ್ಸಿ ವಾನ್‌ಡರ್ ಡುಸೆನ್ ಅವರ ಬದಲಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಜೇಮ್ಸ್ ನೀಶಮ್ ಇದೀಗ ಶಿಮ್ರಾನ್ ಹೆಟ್ಮಾಯೆರ್ ವಾಪಸ್ಸಾಗಿರುವ ಕಾರಣದಿಂದಾಗಿ ಆಡುವ ಬಳಗದಿಂದ ಹೊರಬೀಳುವ ಸಾಧ್ಯತೆಗಳಿವೆ. ಹೀಗಾಗಿ ಈತನನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications