ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

PBKS vs DC: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಇರುವ ಮೂವರು ಆಟಗಾರರು

IPL 2022: 3 players you should avoid in your dream team for DC vs PBKS game

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 64ನೇ ಪಂದ್ಯ ಇಂದು ( ಮೇ 16 ) ನಡೆಯಲಿದ್ದು, ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿತ ಕಾಣಲಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಪಂಜಾಬ್ ಕಿಂಗ್ಸ್ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು, ಉಳಿದ 6 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಜಯ ಸಾಧಿಸಿ 6 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗೆ ಇತ್ತಂಡಗಳು ಅಂಕಪಟ್ಟಿಯಲ್ಲಿ ಸರಿಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕಾರಣ ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ.

MI vs SRH Playing 11: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ಪ್ಲೇಯಿಂಗ್ XIMI vs SRH Playing 11: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ಪ್ಲೇಯಿಂಗ್ XI

ಇನ್ನು ಈ ಪಂದ್ಯದಲ್ಲಿ ಗೆಲ್ಲುವ ತಂಡ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಾಣಲಿದ್ದು, ಇದರ ಜೊತೆಗೆ ತನ್ನ ಪ್ಲೇ ಆಫ್ ಪ್ರವೇಶದ ಅವಕಾಶಗಳನ್ನು ಮತ್ತಷ್ಟು ಗಟ್ಟಿಪಡಿಸಿಕೊಳ್ಳಲಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಲಿದ್ದು, ಎರಡೂ ತಂಡಗಳೂ ಗೆಲುವಿನತ್ತ ಚಿತ್ತ ನೆಟ್ಟಿವೆ. ಇನ್ನು ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಕ್ರಿಕೆಟ್ ಪ್ರೇಮಿಗಳು ಊಹಿಸತೊಡಗಿದ್ದರೆ ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಕ್ರಿಕೆಟ್ ಪ್ರೇಮಿಗಳು ತಾವು ನಿರ್ಮಿಸುತ್ತಿರುವ ಡ್ರೀಮ್ ತಂಡದಿಂದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಮೂವರನ್ನು ಹೊರಗಿಡುವುದು ಉತ್ತಮ ಎನ್ನಬಹುದು.

1. ಶ್ರೀಕರ್ ಭರತ್

ಮೇ 8ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧಧ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಪದಾರ್ಪಣೆ ಮಾಡಿದ ಶ್ರೀಕರ್ ಭರತ್ ಆ ಪಂದ್ಯದಲ್ಲಿ ಡೇವಿಡ್ ವಾರ್ನರ್ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದು ಕೇವಲ 8 ರನ್ ಗಳಿಸಿದ್ದರು. ಹಾಗೂ ನಂತರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಭರತ್ ಶೂನ್ಯ ಸುತ್ತಿ ಮತ್ತೊಮ್ಮೆ ನೆಲಕಚ್ಚಿದರು. ಇನ್ನು ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಶ್ರೀಕರ್ ಭರತ್ ಈ ಬಾರಿಯ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ನಡೆದಿದ್ದ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಂಧ್ರ ಪ್ರದೇಶದ ಪರ ಕಣಕ್ಕಿಳಿದು ಎರಡು ಶತಕ ಬಾರಿಸಿ ಟೂರ್ನಿಯಲ್ಲಿ ತಂಡದ ಪರ ಅತಿಹೆಚ್ಚು ರನ್ ಕಲೆಹಾಕಿದ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ ಇದೇ ಪ್ರದರ್ಶನವನ್ನು ಈ ಬಾರಿ ತೋರುವಲ್ಲಿ ವಿಫಲವಾಗಿರುವ ಶ್ರೀಕರ್ ಭರತ್ ಅವರನ್ನು ಈ ಪಂದ್ಯದ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

2. ಜಿತೇಶ್ ಶರ್ಮಾ

ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕೊನೆಯ 5 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದ್ದು, ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು ಕಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ 5 ಎಸೆತಗಳನ್ನು ಎದುರಿಸಿ 9 ರನ್ ಮಾತ್ರ ಗಳಿಸಿದ್ದರು. ಹೀಗೆ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಜಿತೇಶ್ ಶರ್ಮಾ ಹೆಚ್ಚು ರನ್ ಬಾರಿಸುವ ಸಾಧ್ಯತೆ ತೀರಾ ಕಡಿಮೆ ಇದ್ದು, ಇವರ ಬದಲು ಬೇರೆ ಆಟಗಾರರನ್ನು ನಿಮ್ಮ ಡ್ರೀಮ್ ಟೀಮ್‌ಗೆ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರ.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಹಾಗೂ ಪಂಜಾಬ್ ಸೆಣೆಸಾಟ: ಯಾರು ಗೆದ್ದರೂ ಆರ್‌ಸಿಬಿಗೆ ಹಿನ್ನಡೆ!ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಹಾಗೂ ಪಂಜಾಬ್ ಸೆಣೆಸಾಟ: ಯಾರು ಗೆದ್ದರೂ ಆರ್‌ಸಿಬಿಗೆ ಹಿನ್ನಡೆ!

ಚಾಹಲ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಹೇಳಿದ್ದೇನು | Oneindia Kannada

3. ಅಕ್ಷರ್ ಪಟೇಲ್
ಕಳೆದ ಐದು ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಪಡೆದಿರುವುದು ಕೇವಲ ಒಂದು ವಿಕೆಟ್ ಮಾತ್ರ. ಬ್ಯಾಟಿಂಗ್‌ನಲ್ಲಿ ಸಮಾಧಾನಕರ ಆಟವಾಡಿದ್ದರೂ ಸಹ ಅಕ್ಷರ್ ಪಟೇಲ್ ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಅವಕಾಶ ಪಡೆಯುವ ಸಾಧ್ಯತೆಗಳೂ ಸಹ ಕಡಿಮೆ ಇವೆ. ಇನ್ನು ಕಳೆದ ಪಂದ್ಯದಲ್ಲಿ 2 ಓವರ್ ಬೌಲಿಂಗ್ ಮಾಡಿದ್ದ ಅಕ್ಷರ್ ಪಟೇಲ್ 25 ರನ್ ನೀಡಿದ್ದರು. ಹೀಗಾಗಿ ಅಕ್ಷರ್ ಪಟೇಲ್ ಬದಲು ಬೇರೆ ಆಟಗಾರರನ್ನು ನಿಮ್ಮ ಡ್ರೀಮ್ ತಂಡಕ್ಕೆ ಆರಿಸುವುದು ಉತ್ತಮ.

Story first published: Monday, May 16, 2022, 15:42 [IST]
Other articles published on May 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X