ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

GT vs LSG: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ಹೊರಗಿಡಿ

IPL 2022: 3 Players you should avoid in your dream team for GT vs LSG game

ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯ ಇಂದು ( ಮೇ 10 ) ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಈ ಬಾರಿಯ ಟೂರ್ನಿಯಲ್ಲಿ ಮೊದಲು ಅಧಿಕೃತವಾಗಿ ಯಾವ ತಂಡ ಪ್ಲೇಆಫ್ ತಲುಪಲಿದೆ ಎಂಬುದನ್ನು ತಿಳಿಸಲಿದೆ. ಹೌದು, ಇಂದಿನ ಪಂದ್ಯದಲ್ಲಿ ಸಮನಾದ ಪಂದ್ಯಗಳಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ ಟಾಪ್ ಒನ್ ಮತ್ತು ಟಾಪ್ ಎರಡನೇ ಸ್ಥಾನಗಳಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳೂ ಸಹ ತಲಾ 11 ಪಂದ್ಯಗಳಲ್ಲಿ ಕಣಕ್ಕಿಳಿದು ತಲಾ 8 ಪಂದ್ಯಗಳಲ್ಲಿ ಗೆದ್ದು, ಉಳಿದ ಮೂರು ಪಂದ್ಯಗಳಲ್ಲಿ ಸೋತಿದ್ದು, ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಅಗ್ರಸ್ಥಾನದಲ್ಲಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಎರಡನೇ ಸ್ಥಾನದಲ್ಲಿದೆ. ಹೀಗೆ ತಲಾ 16 ಅಂಕಗಳನ್ನು ಗಳಿಸಿರುವ ಇತ್ತಂಡಗಳ ಪೈಕಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 18 ಅಂಕಗಳನ್ನು ಹೊಂದಲಿದ್ದು, ಪ್ಲೇಆಫ್ ಸುತ್ತಿಗೆ ಅಧಿಕೃತ ಪ್ರವೇಶವನ್ನು ಪಡೆದುಕೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯ ತುಸು ಹೆಚ್ಚೇ ಕುತೂಹಲವನ್ನು ಹುಟ್ಟುಹಾಕಿದ್ದು, ಯಾವ ತಂಡ ಈ ಬಾರಿಯ ಟೂರ್ನಿಯಲ್ಲಿ ಮೊದಲು ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್‌ಗೂ ಮುನ್ನವೇ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಿನಿ ಸಮರ: ವರದಿಟಿ20 ವಿಶ್ವಕಪ್‌ಗೂ ಮುನ್ನವೇ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಿನಿ ಸಮರ: ವರದಿ

ಹೀಗೆ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ಕೆಲ ಕ್ರಿಕೆಟ್ ಅಭಿಮಾನಿಗಳು ಚರ್ಚಿಸುತ್ತಿದ್ದರೆ, ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಇತ್ತಂಡಗಳ ನಡುವಿನ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಿ ಹೆಚ್ಚು ಫ್ಯಾಂಟಸಿ ಅಂಕಗಳನ್ನು ಪಡೆದುಕೊಳ್ಳಬಹುದಾದ ಆಟಗಾರರನ್ನು ಆರಿಸುವಲ್ಲಿ ನಿರತರಾಗಿದ್ದಾರೆ. ಇನ್ನು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ಕಡಿಮೆ ಫ್ಯಾಂಟಸಿ ಅಂಕ ಪಡೆದು ಮುಗ್ಗರಿಸಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎಂದೇ ಹೇಳಬಹುದು.

1. ಪ್ರದೀಪ್ ಸಾಂಗ್ವಾನ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಪ್ರದೀಪ್ ಸಾಂಗ್ವಾನ್ ಮೂರು ವಿಕೆಟ್ ಮಾತ್ರ ಪಡೆದಿದ್ದು, ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ಇಂದಿನ ಪಂದ್ಯದ ಡ್ರೀಮ್ ಟೀಮ್‌ಗೆ ಪ್ರದೀಪ್ ಸಾಂಗ್ವಾನ್ ಅವರನ್ನು ಆರಿಸುವ ಬದಲು ಇತರೆ ಆಟಗಾರರನ್ನು ಆರಿಸುವುದು ಉತ್ತಮ ಆಯ್ಕೆ ಎನ್ನಬಹುದು.

2. ಆಯುಷ್ ಬದೋನಿ: ಟೂರ್ನಿಯ ಆರಂಭದಲ್ಲಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದ ಆಯುಷ್ ಬದೋನಿ ನಂತರದ ಪಂದ್ಯಗಳಲ್ಲಿ ಮಿಂಚುವಲ್ಲಿ ವಿಫಲರಾಗಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಆಯುಷ್ ಬದೋನಿ 153 ರನ್‌ಗಳನ್ನು ಮಾತ್ರ ಕಲೆ ಹಾಕಿದ್ದಾರೆ, ಇನ್ನು ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಬದೋನಿ ಹೆಚ್ಚಿನ ಫ್ಯಾಂಟಸಿ ಅಂಕಗಳನ್ನು ಪಡೆಯುವುದರಲ್ಲಿ ಎಡವಲಿದ್ದು, ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.

MI vs KKR: ಮೋಸದ ತೀರ್ಪಿಗೆ ಬಿತ್ತಾ ರೋಹಿತ್ ವಿಕೆಟ್?; ಮೋಸವೆನ್ನಲು ಇಲ್ಲಿದೆ ಬಲವಾದ ಕಾರಣ!MI vs KKR: ಮೋಸದ ತೀರ್ಪಿಗೆ ಬಿತ್ತಾ ರೋಹಿತ್ ವಿಕೆಟ್?; ಮೋಸವೆನ್ನಲು ಇಲ್ಲಿದೆ ಬಲವಾದ ಕಾರಣ!

Marcus Stoinis ಔಟ್ ಆದ ರೀತಿ ಇದು | Oneindia Kannada

3. ರಾಹುಲ್ ತೆವಾಟಿಯಾ: ಕೆಲ ಪಂದ್ಯಗಳಲ್ಲಿ ಅಂತಿಮ ಹಂತದಲ್ಲಿ ಕಣಕ್ಕಿಳಿದು ಅಬ್ಬರಿಸಿ ತಂಡವನ್ನು ಗೆಲ್ಲಿಸಿರುವ ರಾಹುಲ್ ತೆವಾಟಿಯಾ ಬೃಹತ್ ರನ್ ಗಳಿಸಿ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಇನ್ನೂ ಯಶಸ್ವಿಯಾಗಿಲ್ಲ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿ 193 ರನ್ ಗಳಿಸಿದ್ದು ದೊಡ್ಡ ರನ್ ಗಳಿಸಲು ಬೇಕಾದ ಎಸೆತಗಳನ್ನೂ ಸಹ ಎದುರಿಸಿಲ್ಲ. ಹೀಗಾಗಿ ಇಂದಿನ ಪಂದ್ಯದ ಡ್ರೀಮ್ ಟೀಮ್‌ನಲ್ಲಿ ರಾಹುಲ್ ತೆವಾಟಿಯಾರನ್ನು ಹೊರಗಿಡುವುದು ಉತ್ತಮ.

Story first published: Tuesday, May 10, 2022, 16:22 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X