IPL 2022 Final, GT vs RR: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು!

ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ( ಮೇ 29 ) ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಟೂರ್ನಿಯುದ್ದಕ್ಕೂ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಎರಡೂ ತಂಡಗಳು ಸಹ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿದ್ದ ತಂಡಗಳಾಗಿವೆ.
ಹೀಗಾಗಿ ಇತ್ತಂಡಗಳು 1ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಖಾಮುಖಿಯಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆಲುವನ್ನು ಕಂಡು ಫೈನಲ್ ಪಂದ್ಯಕ್ಕೆ ಪ್ರವೇಶಿಸಿತ್ತು ಹಾಗೂ ಸೋತ ರಾಜಸ್ತಾನ್ ರಾಯಲ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು.
ಇನ್ನು ಈ ತಂಡಗಳು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಮುಖಾಮುಖಿಯಾಗುತ್ತಿರುವ ಮೂರನೇ ಪಂದ್ಯ ಇದಾಗಿದ್ದು, ಹಿಂದಿನ 2 ಮುಖಾಮುಖಿ ಪಂದ್ಯಗಳಲ್ಲಿಯೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆಲುವನ್ನು ಸಾಧಿಸಿತ್ತು. ಹೀಗೆ ರಾಜಸ್ಥಾನ್ ರಾಯಲ್ಸ್ ತಂಡದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿರುವ ಗುಜರಾತ್ ಟೈಟಾನ್ಸ್ ಫೈನಲ್ ಪಂದ್ಯದಲ್ಲಿ ಗೆಲ್ಲುತ್ತಾ ಅಥವಾ ಸಂಜು ಸ್ಯಾಮ್ಸನ್ ಬಳಗ ಪುಟಿದೆದ್ದು ಗುಜರಾತ್ ಟೈಟನ್ಸ್ ತಂಡಕ್ಕೆ ಸೋಲಿನ ರುಚಿಯನ್ನು ತೋರಿಸುತ್ತಾ ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಡ್ರೀಮ್ ಟೀಮ್ ರಚಿಸುವುದರಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ತಮ್ಮ ತಂಡಗಳಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಹೆಚ್ಚಿರುವ ಈ ಕೆಳಕಂಡ ಮೂವರು ಆಟಗಾರರನ್ನು ಆಯ್ಕೆ ಮಾಡದೇ ಇರುವುದು ಉತ್ತಮ ಎನ್ನಬಹುದು.

1. ರಿಯಾನ್ ಪರಾಗ್
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ ಯಾವುದೇ ಪಂದ್ಯದಲ್ಲಿಯೂ ಕೂಡ ರಿಯಾನ್ ಪರಾಗ್ ಉತ್ತಮ ಪ್ರದರ್ಶನವನ್ನು ನೀಡಿಲ್ಲ. ಆಡಿರುವ ಒಟ್ಟು 16 ಪಂದ್ಯಗಳಲ್ಲಿ 168 ರನ್ ಕಲೆಹಾಕಿರುವ ಈತನನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ನಿರ್ಧಾರ.

2. ಮ್ಯಾಥ್ಯೂ ವೇಡ್
ಆಡುವ ಬಳಗದಿಂದ ಆಗಾಗ ಸ್ಥಾನ ಕಳೆದುಕೊಳ್ಳುತ್ತಾ ಬಂದಿರುವ ಮ್ಯಾಥ್ಯೂ ವೇಡ್ ಈ ಬಾರಿಯ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ಸಫಲರಾಗಿಲ್ಲ. ಆಡಿರುವ 9 ಪಂದ್ಯಗಳ ಪೈಕಿ 149 ರನ್ ಕಲೆ ಹಾಕಿರುವ ಮ್ಯಾಥ್ಯೂ ವೇಡ್ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ದಾಳಿಯ ಮುಂದೆ ಮಂಕಾಗುವ ಸಾಧ್ಯತೆಗಳಿವೆ. ಹೀಗಾಗಿ ಈತನನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

3. ಸಾಯಿ ಕಿಶೋರ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ 4 ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿರುವ ಸಾಯಿ ಕಿಶೋರ್ ಹೆಚ್ಚು ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಕ್ರೀಡಾಂಗಣದಲ್ಲಿ ನಡೆದ ಕಳೆದ ಪಂದ್ಯವನ್ನು ಗಮನಿಸಿದರೆ ಸ್ಪಿನ್ ಬೌಲರ್‌ಗಳು ಈ ಪಿಚ್‌ನಲ್ಲಿ ಯಶಸ್ವಿಯಾಗದ ಕಾರಣ ಈತನನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಒಳ್ಳೆಯದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications