GT vs RR ಕ್ವಾಲಿಫೈಯರ್ 1: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರು

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ ಸುತ್ತಿನ ಪಂದ್ಯಗಳು ಇಂದಿನಿಂದ ( ಮೇ 24 ) ಆರಂಭವಾಗುತ್ತಿದ್ದು, ಟೂರ್ನಿಯ ಲೀಗ್ ಹಂತದ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡ ನಂತರ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿವೆ.
ಇನ್ನು ಲೀಗ್ ಹಂತದ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕ್ವಾಲಿಫೈಯರ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟರೆ, ಸೋಲುವ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶಿಸಲಿದ್ದು, ಆ ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಬರುವ ತಂಡದೊಂದಿಗೆ ಸೆಣಸಾಟ ನಡೆಸಲಿದೆ.
ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಒಂದನೇ ಕ್ವಾಲಿಫೈಯರ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಸಂಜೆ 7.30ಕ್ಕೆ ಆರಂಭವಾಗಲಿದ್ದು, ಎರಡೂ ತಂಡಗಳೂ ಸಹ ಗೆದ್ದು ನೇರವಾಗಿ ಫೈನಲ್ ಪ್ರವೇಶಿಸುವತ್ತ ಚಿತ್ತ ನೆಟ್ಟಿವೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸುವಲ್ಲಿ ಕೆಲ ಕ್ರಿಕೆಟ್ ಪ್ರೇಮಿಗಳು ನಿರತರಾಗಿದ್ದರೆ, ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು ಉತ್ತಮ ಆಟಗಾರರನ್ನು ಆಯ್ಕೆ ಮಾಡುವಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್‌ಗೆ ಆಟಗಾರರನ್ನು ಆಯ್ಕೆ ಮಾಡುವಲ್ಲಿ ನಿರತರಾಗಿರುವ ಕ್ರಿಕೆಟ್ ಅಭಿಮಾನಿಗಳು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಕಡೆಗಣಿಸುವುದು ಉತ್ತಮ ಎನ್ನಬಹುದು.

1. ಮ್ಯಾಥ್ಯೂ ವೇಡ್
ಮ್ಯಾಥ್ಯೂ ವೇಡ್‌ಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅದೃಷ್ಟವನ್ನು ತಂದುಕೊಟ್ಟಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಪಂದ್ಯ ಆಡಿದ ಮ್ಯಾಥ್ಯೂ ವೇಡ್ 30 ರನ್ ಗಳಿಸಿದ್ದು ಬಿಟ್ಟರೆ ನಂತರ ನಡೆದ ಯಾವುದೇ ಪಂದ್ಯದಲ್ಲಿಯೂ 20 ರನ್‌ಗಳ ಗಡಿಯನ್ನೂ ಕೂಡ ದಾಟಿಲ್ಲ. ನಂತರ ನಡೆದ ಕೆಲ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಕಳೆದ ಪಂದ್ಯಗಳ ಆಡುವ ಬಳಗದಲ್ಲಿ ಸ್ಥಾನ ಕಳೆದುಕೊಂಡ ಮ್ಯಾಥ್ಯೂ ವೇಡ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದ್ದಾರೆ. ಹೀಗಾಗಿ ಮ್ಯಾಥ್ಯೂ ವೇಡ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ.

2. ರಿಯಾನ್ ಪರಾಗ್
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ ಯಾವುದೇ ಪಂದ್ಯದಲ್ಲಿಯೂ ಪರಾಗ್ ಹೆಚ್ಚಿನ ರನ್ ಕಲೆಹಾಕಿಲ್ಲ. ಅದರಲ್ಲಿಯೂ ರಿಯಾನ್ ಪರಾಗ್ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಕಾರಣ ಕಳೆದ ಐದು ಪಂದ್ಯಗಳ ಪೈಕಿ ಯಾವುದೇ ಪಂದ್ಯದಲ್ಲಿಯೂ 20ಕ್ಕಿಂತ ಹೆಚ್ಚು ರನ್ ಗಳಿಸಿಲ್ಲ. ಹೀಗಾಗಿ ರಿಯಾನ್ ಪರಾಗ್‌ರನ್ನು ನಿಮ್ಮ ಡ್ರೀಮ್ ಟೀಮ್‌ನಲ್ಲಿ ಆಯ್ಕೆ ಮಾಡಿಕೊಂಡರೆ ಹೆಚ್ಚು ಫ್ಯಾಂಟಸಿ ಅಂಕಗಳನ್ನು ಗಳಿಸುವುದು ಅಸಾಧ್ಯವಿರುವ ಕಾರಣ ಪರಾಗ್‌ರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ..

3. ಲಾಕಿ ಫೆರ್ಗ್ಯುಸನ್
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ 12 ಪಂದ್ಯಗಳನ್ನಾಡಿರುವ ಲಾಕಿ ಫೆರ್ಗ್ಯುಸನ್ 12 ವಿಕೆಟ್‌ಗಳನ್ನು ಮಾತ್ರ ಕಬಳಿಸಿದ್ದು, 9.07 ಎಕಾನಮಿಯಲ್ಲಿ ರನ್ ನೀಡಿ ದುಬಾರಿಯಾಗಿದ್ದಾರೆ. ಇನ್ನು ಈ ಆಟಗಾರ ಕಳೆದ 5 ಪಂದ್ಯಗಳಲ್ಲಿ ಕೇವಲ 3 ವಿಕೆಟ್ ಪಡೆದಿದ್ದು, ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications