
ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾಟ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 6 ಪಂದ್ಯಗಳಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಮಾತ್ರ ಸೋತು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 5 ಪಂದ್ಯಗಳಲ್ಲಿ ಗೆದ್ದು, ಉಳಿದೆರಡು ಪಂದ್ಯಗಳಲ್ಲಿ ಸೋಲುವುದರ ಮೂಲಕ 10 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನು ಗುಜರಾತ್ ಟೈಟನ್ಸ್ ಆರಂಭದಿಂದಲೂ ಗೆಲುವು ಸಾಧಿಸುತ್ತಾ ಬಂದಿದ್ದು, ಟೂರ್ನಿ ಅರ್ಧದಷ್ಟು ಮುಗಿಯುವ ಸಮಯಕ್ಕೆ ಅತಿಹೆಚ್ಚು ಯಶಸ್ಸು ಸಾಧಿಸಿದ ತಂಡ ಎನಿಸಿಕೊಂಡಿದೆ. ಇತ್ತ ಟೂರ್ನಿಯ ಆರಂಭದ ಮೊದಲ ಎರಡು ಪಂದ್ಯಗಳಲ್ಲಿ ಸತತವಾಗಿ ಸೋಲುಂಡಿದ್ದ ಸನ್ ರೈಸರ್ಸ್ ಹೈದರಾಬಾದ್ ನಂತರ ಐದು ಪಂದ್ಯಗಳಲ್ಲಿ ಸಾಲು ಸಾಲು ಗೆಲುವುಗಳನ್ನು ಸಾಧಿಸುವ ಮೂಲಕ ಗೆಲುವಿನ ನಾಗಾಲೋಟದಲ್ಲಿದೆ. ಇನ್ನು ಸನ್ ರೈಸರ್ಸ್ ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೆಲುವನ್ನು ಸಾಧಿಸಿತ್ತು ಹಾಗೂ ಗುಜರಾತ್ ಟೈಟನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವನ್ನು ದಾಖಲಿಸಿತ್ತು. ಹೀಗೆ ಉತ್ತಮ ಪ್ರದರ್ಶನದಿಂದ ಸಾಲು ಸಾಲು ಗೆಲುವು ಕಂಡಿರುವ ಇತ್ತಂಡಗಳ ನಡುವಿನ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಯಾವ ತಂಡ ಏರಿಕೆ ಕಾಣುತ್ತೆ ಎಂಬ ಲೆಕ್ಕಾಚಾರಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿನ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂದು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸಿರುವ ಕ್ರಿಕೆಟ್ ಅಭಿಮಾನಿಗಳು ಚರ್ಚಿಸುತ್ತಿದ್ದಾರೆ.
ಹೀಗೆ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ರಚಿಸುತ್ತಿರುವ ಡ್ರೀಮ್ ಟೀಮ್‌ನಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರಿಗೆ ಸ್ಥಾನ ನೀಡಬಾರದು ಎಂದು ಕ್ರಿಕೆಟ್ ಪರಿಣಿತರು ಸಲಹೆ ನೀಡಿದ್ದಾರೆ.
1. ಶಶಾಂಕ್ ಸಿಂಗ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಶಶಾಂಕ್ ಸಿಂಗ್ ಯಾವುದೇ ಪಂದ್ಯದಲ್ಲಿಯೂ ಸಹ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿಲ್ಲ. ಇನ್ನು ಒಂದು ಓವರ್ ಬೌಲಿಂಗ್ ಮಾಡಿರುವ ಶಶಾಂಕ್ ಸಿಂಗ್ 10 ರನ್ ನೀಡಿದ್ದು, ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲಿಯೂ ಹೆಚ್ಚು ಅವಕಾಶ ಪಡೆದುಕೊಂಡಿಲ್ಲ. ಹೀಗಾಗಿ ಶಶಾಂಕ್ ಸಿಂಗ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.
2. ಜಗದೀಶ ಸುಚಿತ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 4 ವಿಕೆಟ್ ಪಡೆದುಕೊಂಡಿರುವ ಜಗದೀಶ ಸುಚಿತ್ ಎರಡು ಪಂದ್ಯಗಳಲ್ಲಿ ತನ್ನ ಪಾಲಿನ ಎಲ್ಲಾ ಓವರ್ ಮಾಡುವ ಅವಕಾಶ ಪಡೆದುಕೊಂಡಿಲ್ಲ ಹಾಗೂ ಇತ್ತೀಚೆಗಿನ ಪಂದ್ಯಗಳಲ್ಲಿ ವಿಕೆಟ್ ಪಡೆಯುವಲ್ಲಿಯೂ ಹೆಚ್ಚು ಯಶಸ್ವಿಯಾಗಿಲ್ಲ. ಹೀಗಾಗಿ ಜಗದೀಶ ಸುಚಿತ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಆಯ್ಕೆಯಾಗಿದೆ.
3. ರಾಹುಲ್ ತೆವಾಟಿಯಾ: ಟೂರ್ನಿಯಲ್ಲಿ ಇಲ್ಲಿಯವರೆಗೂ ಬಹುತೇಕ ಎಲ್ಲಾ ಪಂದ್ಯಗಳಲ್ಲಿಯೂ ಬ್ಯಾಟ್ ಬೀಸುವ ಅವಕಾಶವನ್ನು ಪಡೆದುಕೊಂಡಿರುವ ರಾಹುಲ್ ತೆವಾಟಿಯಾ 7 ಪಂದ್ಯಗಳನ್ನಾಡಿ 24ರ ಸರಾಸರಿಯಲ್ಲಿ 90 ರನ್ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ ಹಾಗೂ ಬೌಲಿಂಗ್‌ನಲ್ಲಿ ಟೂರ್ನಿಯಲ್ಲಿ ಇಲ್ಲಿಯವರೆಗೂ ಯಾವುದೇ ವಿಕೆಟ್ ಪಡೆಯುವಲ್ಲಿಯೂ ಯಶಸ್ವಿಯಾಗಿಲ್ಲ. ಹೀಗೆ ಟೂರ್ನಿಯಲ್ಲಿ ಹೆಚ್ಚಿನ ಬೌಲಿಂಗ್ ಅವಕಾಶ ಪಡೆದುಕೊಳ್ಳದ ರಾಹುಲ್ ತೆವಾಟಿಯಾ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ.