ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

KKR vs LSG: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಇರುವ ಮೂವರು ಆಟಗಾರರು

IPL 2022: 3 players you should avoid in your dream team for KKR vs LSG game

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಲೀಗ್ ಹಂತದ 66ನೇ ಪಂದ್ಯದಲ್ಲಿ ಇಂದು ( ಮೇ 18 ) ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ಡಾ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆದ್ದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿದೆ. ಒಂದುವೇಳೆ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಉಳಿದುಕೊಳ್ಳಲಿದ್ದು, ಫೈನಲ್ ಪ್ರವೇಶಿಸಲು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಮತ್ತು ಪ್ರಥಮ ಸ್ಥಾನ ಪಡೆದ ತಂಡಗಳಿಗೆ ಸಿಗುವ ಎರಡನೇ ಅವಕಾಶವನ್ನು ಕೈತಪ್ಪಿಸಿಕೊಳ್ಳಲಿದೆ.

IND vs SA: ತಮ್ಮನ್ನು ಎದುರಿಸಲಿರುವ ಟೀಮ್ ಇಂಡಿಯಾದಲ್ಲಿ ಪಾಂಡ್ಯ ಅಲ್ಲ ಈ ಇಬ್ಬರು ಇರಬೇಕು ಎಂದ ಮಿಲ್ಲರ್!IND vs SA: ತಮ್ಮನ್ನು ಎದುರಿಸಲಿರುವ ಟೀಮ್ ಇಂಡಿಯಾದಲ್ಲಿ ಪಾಂಡ್ಯ ಅಲ್ಲ ಈ ಇಬ್ಬರು ಇರಬೇಕು ಎಂದ ಮಿಲ್ಲರ್!

ಇತ್ತ 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 7 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದರೆ ಲಕ್ನೋ ಸೂಪರ್ ಜೈಂಟ್ಸ್‌ನ ಎರಡನೇ ಸ್ಥಾನದ ಕನಸಿಗೆ ತಣ್ಣೀರು ಬೀಳುವುದು ಬಿಟ್ಟರೆ ಕೋಲ್ಕತ್ತಾ ನೈಟ್ ರೈಡರ್ಸ್ ಈ ಗೆಲುವಿನ ಮೂಲಕ ಪ್ಲೇಆಫ್ ಪ್ರವೇಶಿಸುವುದು ಅಸಾಧ್ಯ. ಹೀಗಾಗಿ ಈ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಅತಿ ಮುಖ್ಯದ್ದಾಗಿದ್ದು, ಈ ಸವಾಲನ್ನು ಲಕ್ನೋ ಸೂಪರ್ ಜೈಂಟ್ಸ್ ಯಶಸ್ವಿಯಾಗಿ ಪೂರೈಸುತ್ತಾ ಅಥವಾ ಸೋಲುತ್ತಾ ಎಂಬ ಊಹೆಯಲ್ಲಿ ಕೆಲ ಕ್ರಿಕೆಟ್ ಪ್ರೇಮಿಗಳು ತೊಡಗಿಕೊಂಡಿದ್ದರೆ, ಇನ್ನೂ ಕೆಲ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಅಭಿಮಾನಿಗಳು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಸಾಧ್ಯತೆಯಿರುವ ಈ ಕೆಳಕಂಡ ಈ ಮೂವರನ್ನು ಕೈಬಿಡುವುದು ಉತ್ತಮ ಎನ್ನಬಹುದು.

1. ಆಯುಷ್ ಬದೋನಿ: ಟೂರ್ನಿಯ ಆರಂಭದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದ ಆಯುಷ್ ಬದೋನಿ ಅದೇ ರೀತಿಯ ಪ್ರದರ್ಶನವನ್ನು ನಂತರದ ಪಂದ್ಯಗಳಲ್ಲಿಯೂ ನೀಡುವಲ್ಲಿ ವಿಫಲರಾಗಿದ್ದಾರೆ. ಇನ್ನು ಕೊನೆಯ 5 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ಮುಟ್ಟಿರುವ ಆಯುಷ್ ಬದೋನಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಡಕ್ ಔಟ್ ಆಗಿದ್ದರು. ಹೀಗೆ ಸಾಲು ಸಾಲು ಪಂದ್ಯಗಳಲ್ಲಿ ನೆಲಕಚ್ಚಿರುವ ಆಯುಷ್ ಬದೋನಿ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಹಿಂದಿರುಗಿದ ಸ್ಟಾರ್ ವೇಗಿಗಳುನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಹಿಂದಿರುಗಿದ ಸ್ಟಾರ್ ವೇಗಿಗಳು

2. ಸುನಿಲ್ ನರೈನ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಂಪೂರ್ಣವಾಗಿರುವ ಸುನಿಲ್ ನರೈನ್ ಕಳೆದ 5 ಪಂದ್ಯಗಳಲ್ಲಿ 3 ವಿಕೆಟ್‌ಗಳನ್ನು ಪಡೆಯುವಲ್ಲಿ ಮಾತ್ರ ಶಕ್ತರಾಗಿದ್ದು, ಎರಡು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದೇ ನೆಲಕಚ್ಚಿದ್ದಾರೆ. ಇನ್ನು ಈ ಬಾರಿ ಬ್ಯಾಟಿಂಗ್‌ನಲ್ಲಿಯೂ ಮುಗ್ಗರಿಸಿರುವ ಸುನಿಲ್ ನರೈನ್ ಟೂರ್ನಿಯಲ್ಲಿ 25ಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ಸಫಲರಾಗಿಲ್ಲ. ಹೀಗಾಗಿ ಸುನಿಲ್ ನರೈನ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.

3. ದುಷ್ಮಂತ ಚಮೀರ: ಈ ಬಾರಿಯ ಐಪಿಎಲ್‌ನಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿ ಕೇವಲ 9 ವಿಕೆಟ್ ಪಡೆದಿರುವ ದುಷ್ಮಂತ ಚಮೀರ ಕಳೆದ 2 ಪಂದ್ಯಗಳಲ್ಲಿ ಯಾವುದೇ ವಿಕೆಟ್ ಪಡೆಯದೇ ಮಂಕಾಗಿದ್ದಾರೆ. ಹೀಗಾಗಿ ದುಷ್ಮಂತ ಚಮೀರ ನಿಮ್ಮ ಡ್ರೀಮ್ ಟೀಮ್‌ನಲ್ಲಿರಲು ಸೂಕ್ತ ವ್ಯಕ್ತಿಯಲ್ಲ ಎನ್ನಬಹುದು.

Story first published: Wednesday, May 18, 2022, 16:34 [IST]
Other articles published on May 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X