ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

LSG vs RR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಮೂವರನ್ನು ಹೊರಗಿಡಿ

IPL 2022: 3 players you should avoid in your dream team for LSG vs RR game

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದು ( ಮೇ 15 ) ಎರಡು ಪಂದ್ಯಗಳು ಜರುಗುತ್ತಿವೆ. ಪ್ರಥಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.

ಕ್ನೋ ಸೂಪರ್ ಜೈಂಟ್ಸ್ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಕಣಕ್ಕಿಳಿದು 7 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಗೆಲುವು ಸಾಧಿಸಿದರೆ ಪ್ಲೇ ಆಫ್ ಸುತ್ತಿಗೆ ಯಶಸ್ವಿಯಾಗಿ ಅರ್ಹತೆಯನ್ನು ಪಡೆದುಕೊಳ್ಳಲಿದ್ದು, ರಾಜಸ್ಥಾನ್ ರಾಯಲ್ಸ್ ಗೆಲುವು ಸಾಧಿಸಿದರೆ ಈ ಎರಡು ತಂಡಗಳ ನಡುವೆಯೇ ಲೀಗ್ ಹಂತದ ಸಮಯದಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವುದಕ್ಕಾಗಿ ಪೈಪೋಟಿ ಏರ್ಪಡಲಿದೆ.

'ತಂಡದ ಆಯ್ಕೆಯಲ್ಲಿ ಸಿಇಒ ವೆಂಕಿ ಮೈಸೂರು ಭಾಗಿ' ಹೇಳಿಕೆಗೆ KKR ನಾಯಕ ಶ್ರೇಯಸ್ ಅಯ್ಯರ್ ಸ್ಪಷ್ಟನೆ'ತಂಡದ ಆಯ್ಕೆಯಲ್ಲಿ ಸಿಇಒ ವೆಂಕಿ ಮೈಸೂರು ಭಾಗಿ' ಹೇಳಿಕೆಗೆ KKR ನಾಯಕ ಶ್ರೇಯಸ್ ಅಯ್ಯರ್ ಸ್ಪಷ್ಟನೆ

ಹೀಗಾಗಿ ಇತ್ತಂಡಗಳ ನಡುವಿನ ಈ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಕೆಲ ಕ್ರಿಕೆಟ್ ಪ್ರೇಮಿಗಳು ಯಾವ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರಗಳಲ್ಲಿ ತೊಡಗಿಕೊಂಡಿದ್ದರೆ, ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದು ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಊಹಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಆಟಗಾರರು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಆಟಗಾರರನ್ನು ಕಡೆಗಣಿಸುವುದು ಉತ್ತಮ ಎನ್ನಬಹುದು.

1. ಆಯುಷ್ ಬದೋನಿ: ಟೂರ್ನಿಯ ಆರಂಭದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದ ಆಯುಷ್ ಬದೋನಿ ನಂತರದ ಪಂದ್ಯಗಳಲ್ಲೂ ಅದೇ ರೀತಿಯ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅದರಲ್ಲಿಯೂ ಕಳೆದ 5 ಪಂದ್ಯಗಳಲ್ಲಿ 15 ರನ್ ಬಾರಿಸುವಲ್ಲಿ ವಿಫಲರಾಗಿರುವ ಆಯುಷ್ ಬದೋನಿ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ.

2. ರಸ್ಸಿ ವಾನ್‌ಡರ್ ಡಸೆನ್: ಮಗುವಿನ ಜನನದ ಕಾರಣದಿಂದ ಶಿಮ್ರಾನ್ ಹೆಟ್ಮಾಯೆರ್ ಟೂರ್ನಿಯ ಮಧ್ಯದಲ್ಲಿಯೇ ಟೂರ್ನಿಯಿಂದ ಹೊರಬಿದ್ದ ನಂತರ ತಂಡದಲ್ಲಿ ಆಡುವ ಪಡೆದುಕೊಂಡ ರಸ್ಸಿ ವಾನ್‌ಡರ್ ಡಸೆನ್ ಕಳೆದ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 10 ಎಸೆತಗಳನ್ನು ಎದುರಿಸಿ ಕೇವಲ 12 ರನ್ ಬಾರಿಸಿದರು. ಇನ್ನು ರಸ್ಸಿ ವಾನ್‌ಡರ್ ಡಸೆನ್ ಈ ಪಂದ್ಯದಲ್ಲಿಯೂ ಏಳನೇ ಕ್ರಮಾಂಕದಲ್ಲಿಯೇ ಕಣಕ್ಕಿಳಿಯುವ ಸಾಧ್ಯತೆಯಿದ್ದು ಹೆಚ್ಚಿನ ರನ್ ಗಳಿಸುವ ಅವಕಾಶ ಪಡೆದುಕೊಳ್ಳಲಾಗುವುದಿಲ್ಲ. ಹೀಗಾಗಿ ಈತನನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಎನ್ನಬಹುದು.

ಐತಿಹಾಸಿಕ ಥಾಮಸ್ ಕಪ್ ಗೆದ್ದ ಭಾರತೀಯ ಬ್ಯಾಡ್ಮಿಂಟನ್ ತಂಡಕ್ಕೆ ಅಭಿನಂದನೆಗಳ ಸುರಿಮಳೆಐತಿಹಾಸಿಕ ಥಾಮಸ್ ಕಪ್ ಗೆದ್ದ ಭಾರತೀಯ ಬ್ಯಾಡ್ಮಿಂಟನ್ ತಂಡಕ್ಕೆ ಅಭಿನಂದನೆಗಳ ಸುರಿಮಳೆ

CSK ಸ್ಟಾರ್ ಅಂಬಾಟಿ ರಾಯುಡು IPL ಗೆ ನಿವೃತ್ತಿ ಹೇಳೋ ಮನಸ್ಸು ಮಾಡಿದ್ಯಾಕೆ? | Oneindia Kannada

3. ದುಷ್ಮಂತ ಚಮೀರ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೊದಲ ಪಂದ್ಯದಲ್ಲಿ 22 ರನ್ ನೀಡಿ 2 ವಿಕೆಟ್ ಪಡೆದು ಉತ್ತಮ ಆರಂಭ ಪಡೆದುಕೊಂಡಿದ್ದ ದುಷ್ಮಂತ ಚಮೀರ ನಂತರ ಅದೇ ಲಯ ಕಾಪಾಡಿಕೊಳ್ಳುವಲ್ಲಿ ಸಫಲರಾಗಲಿಲ್ಲ. ಇನ್ನು ಕಳೆದ 5 ಪಂದ್ಯಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಮಾತ್ರ ಪಡೆದುಕೊಂಡಿರುವ ದುಷ್ಮಂತ ಚಮೀರ ಕಳೆದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 34 ರನ್ ನೀಡಿ ದುಬಾರಿಯಾಗಿ ಯಾವುದೇ ವಿಕೆಟ್ ಪಡೆಯಲಿಲ್ಲ. ಹೀಗೆ ಮಂಕಾಗಿರುವ ದುಷ್ಮಂತ ಚಮೀರ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ.

Story first published: Sunday, May 15, 2022, 17:17 [IST]
Other articles published on May 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X