Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RCB: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ತಂಡದಿಂದ ಹೊರಗಿಡಿ!

IPL 2022: 3 Players you should avoid in your dream team for MI vs RCB match

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಆರಂಭವಾಗಿದ್ದು, ಇಂದು (ಏಪ್ರಿಲ್ 9) ಎರಡು ಪಂದ್ಯಗಳು ನಡೆಯುತ್ತಿವೆ. ಇಂದಿನ ಮೊದಲ ಪಂದ್ಯದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿರುವ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ.

ಇನ್ನು ಸಾಲು ಸಾಲು ಸೋಲು ಕಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆಯಬೇಕಾದ ಒತ್ತಡದಲ್ಲಿದ್ದು, ಇತ್ತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಏರಿಕೆ ಕಾಣುವತ್ತ ಕಣ್ಣಿಟ್ಟಿದೆ.

ಹೀಗೆ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಗ್ಲೆನ್ ಮ್ಯಾಕ್ಸ್‌ವೆಲ್ ಕಣಕ್ಕಿಳಿದು ತಂಡ ಮತ್ತಷ್ಟು ಬಲಿಷ್ಟವಾಗಲಿದ್ದು, ಮುಂಬೈ ಇಂಡಿಯನ್ಸ್ ನಿಜಕ್ಕೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುತ್ತಾ ಅಥವಾ ಈ ಪಂದ್ಯದಲ್ಲಿಯೂ ಸೋತು ತನ್ನ ಸೋಲಿನ ಯಾನವನ್ನು ಮುಂದುವರೆಸುತ್ತಾ ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುವಲ್ಲಿ ಕ್ರಿಕೆಟ್ ಪ್ರೇಮಿಗಳು ನಿರತರಾಗಿದ್ದು, ಯಾವ ಆಟಗಾರರನ್ನು ತಮ್ಮ ಡ್ರೀಮ್ ಟೀಮ್‌ನಲ್ಲಿ ಆಯ್ಕೆ ಮಾಡಿಕೊಳ್ಳಬೇಕು ಹಾಗೂ ಯಾವ ಆಟಗಾರರನ್ನು ತಂಡದಿಂದ ಹೊರಗಿಡಬೇಕು ಎಂಬ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪಂದ್ಯಕ್ಕಾಗಿ ನೀವು ರಚಿಸುತ್ತಿರುವ ಡ್ರೀಮ್ ಟೀಮ್‌ನಲ್ಲಿ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡುವುದು ಉತ್ತಮ ಆಯ್ಕೆ ಎನ್ನಬಹುದು.

1. ಅನುಜ್ ರಾವತ್

1. ಅನುಜ್ ರಾವತ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊದಲ 3 ಪಂದ್ಯಗಳಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಅನುಜ್ ರಾವತ್ ಮೊದಲ ಪಂದ್ಯದಲ್ಲಿ 20 ಎಸೆತಗಳಲ್ಲಿ 21 ರನ್ ಬಾರಿಸಿದ್ದರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಶೂನ್ಯ ಸುತ್ತಿ ಕಳಪೆಯಾಗಿದ್ದರು. ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಮೂರನೇ ಪಂದ್ಯದಲ್ಲಿ 25 ಎಸೆತಗಳಲ್ಲಿ 26 ರನ್ ಕಲೆಹಾಕಿದ್ದರು. ಹೀಗೆ ಸಿಕ್ಕ ಅವಕಾಶಗಳಲ್ಲಿ ಟಿ ಟ್ವೆಂಟಿಗೆ ಬೇಕಾದ ದೊಡ್ಡ ರನ್ ದಾಖಲಿಸದೇ ಏಕದಿನ ಪಂದ್ಯದ ರೀತಿ ಸಾಮಾನ್ಯ ಮೊತ್ತ ಕಲೆಹಾಕಿರುವ ಅನುಜ್ ರಾವತ್ ಅವರ ಬದಲು ನಿಮ್ಮ ಡ್ರೀಮ್ ಟೀಮ್‌ನಲ್ಲಿ ಇತರೆ ವಿಕೆಟ್ ಕೀಪರ್‌ಗಳಾದ ದಿನೇಶ್ ಕಾರ್ತಿಕ್ ಹಾಗೂ ಇಶಾನ್ ಕಿಶನ್‌ಗೆ ಸ್ಥಾನ ನೀಡುವುದು ಉತ್ತಮ.

2. ಶೆರ್ಫೇನ್ ರುದರ್‌ಫೋರ್ಡ್

2. ಶೆರ್ಫೇನ್ ರುದರ್‌ಫೋರ್ಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊದಲ ಪಂದ್ಯದಲ್ಲಿ ಬ್ಯಾಟ್ ಬೀಸುವ ಅವಕಾಶ ಸಿಗದ ಶೆರ್ಫೇನ್ ರುದರ್‌ಫೋರ್ಡ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ 28 ರನ್ ಗಳಿಸಲು 40 ಎಸೆತಗಳನ್ನು ಎದುರಿಸಿದ್ದರು ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿ ಕೇವಲ 5 ರನ್ ಕಲೆಹಾಕಿದ್ದರು. ಹೀಗೆ ಸಿಕ್ಕಿರುವ ಅವಕಾಶಗಳಲ್ಲಿ ದೊಡ್ಡ ರನ್ ಕಲೆಹಾಕುವಲ್ಲಿ ವಿಫಲವಾಗಿರುವ ರುದರ್‌ಫೋರ್ಡ್ ಬದಲು ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಈತನನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ.

ACP ಯನ್ನು ಜೈಲಿಗೆ ಕಳಿಸಿ ಎಂದ ಕರ್ನಾಟಕ ಹೈ ಕೋರ್ಟ್ ಚೀಫ್ ಜಡ್ಜ್ | Oneindia Kannada
3. ಡೇನಿಯಲ್ ಸ್ಯಾಮ್ಸ್

3. ಡೇನಿಯಲ್ ಸ್ಯಾಮ್ಸ್

ಮುಂಬೈ ಇಂಡಿಯನ್ಸ್ ಆಟಗಾರ ಡೇನಿಯಲ್ ಸ್ಯಾಮ್ಸ್ ತಂಡದ ಮೂರನೇ ಪಂದ್ಯವಾದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ತನ್ನ ಮೊದಲ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಪಂದ್ಯದ ಮೊದಲ ಎರಡು ಓವರ್‌ನಲ್ಲಿ 15 ರನ್ ನೀಡಿದ್ದ ಡೇನಿಯಲ್ ಸ್ಯಾಮ್ಸ್ ಕೆಕೆಆರ್ ಗೆಲುವಿಗೆ 30 ಎಸೆತಗಳಲ್ಲಿ 35 ರನ್ ಬಾರಿಸಬೇಕಿದ್ದಾಗ 16ನೇ ಓವರ್ ಬೌಲಿಂಗ್ ಮಾಡಿ ಆ ಒಂದು ಓವರ್‌ನಲ್ಲಿಯೇ 35 ರನ್ ನೀಡಿ ದುಬಾರಿಯಾದರು. ಅಷ್ಟೇ ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪ್ರಥಮ ಪಂದ್ಯದಲ್ಲಿ 4 ಓವರ್ ಎಸೆದಿದ್ದ ಡೇನಿಯಲ್ ಸ್ಯಾಮ್ಸ್ 57 ರನ್ ನೀಡಿ ದುಬಾರಿಯಾಗಿದ್ದರು. ಹೀಗೆ ಸಾಲು ಸಾಲು ಕಳಪೆ ಪ್ರದರ್ಶನ ನೀಡುತ್ತಿರುವ ಡೇನಿಯಲ್ ಸ್ಯಾಮ್ಸ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿರುವುದು ಉತ್ತಮ ಆಯ್ಕೆ.

Story first published: Saturday, April 9, 2022, 14:11 [IST]
Other articles published on Apr 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+