For Quick Alerts
ALLOW NOTIFICATIONS  
For Daily Alerts
 

MI vs SRH: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರು

IPL 2022: 3 Players you should avoid in your dream team for MI vs SRH game

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಸನಿಹಕ್ಕೆ ಬಂದಿದ್ದು, ಪ್ಲೇಆಫ್ ಪ್ರವೇಶಿಸುವತ್ತ ತಂಡಗಳು ಕಣ್ಣಿಟ್ಟಿವೆ. ಗುಜರಾತ್ ಟೈಟನ್ಸ್ ತಂಡ ಈಗಾಗಲೇ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದು, ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕೂಡ ಪ್ಲೇಆಫ್ ಅರ್ಹತೆ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಇನ್ನು ನಾಲ್ಕನೇ ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದ್ದರೆ, ಈ ರೇಸ್‌ನಲ್ಲಿದ್ದ ಸನ್ ರೈಸರ್ಸ್ ಹೈದರಾಬಾದ್ ಇತ್ತೀಚೆಗಿನ ಪಂದ್ಯಗಳಲ್ಲಿ ಸಾಲು ಸಾಲು ಸೋಲು ಕಂಡು ಹಿನ್ನಡೆ ಅನುಭವಿಸಿದೆ.

ಹೌದು, ಕೇನ್ ವಿಲಿಯಮ್ಸನ್ ಬಳಗ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು. 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ತನ್ನ ಎರಡೂ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದರೂ ಸಹ ಪ್ಲೇಆಫ್ ಪ್ರವೇಶಿಸುವುದು ಅಸಾಧ್ಯವೆಂದೇ ಹೇಳಬಹುದು. ಇನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಬಾರಿ 12 ಪಂದ್ಯಗಳನ್ನಾಡಿದ್ದು 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಬರೋಬ್ಬರಿ 9 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಎಂದು ಮುಂಬೈ ಇಂಡಿಯನ್ಸ್ ಕರೆಸಿಕೊಂಡಿದೆ.

ಹೀಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶಗಳನ್ನು ಕೈಚೆಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ( ಮೇ 17 ) ನಡೆಯಲಿರುವ ಟೂರ್ನಿಯ 65ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು, ಈ ಪಂದ್ಯ ಹೆಚ್ಚಿನ ಕುತೂಹಲ ಹಾಗೂ ನಿರೀಕ್ಷೆ ಹುಟ್ಟುಹಾಕುವಲ್ಲಿ ವಿಫಲವಾಗಿದೆ. ಇನ್ನು ಈ ಪಂದ್ಯ ಮಹತ್ವದ್ದಾಗಿರದೇ ಇದ್ದರೂ ಸಹ ಈ ಪಂದ್ಯಕ್ಕಾಗಿ ಕೆಲ ಕ್ರಿಕೆಟ್ ಅಭಿಮಾನಿಗಳು ಡ್ರೀಮ್ ಟೀಮ್ ರಚಿಸುವುದರಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

1. ಕೇನ್ ವಿಲಿಯಮ್ಸನ್: 2015ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಕೇನ್ ವಿಲಿಯಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಆಟಗಾರನಾಗಿದ್ದಾರೆ. 2018ರಲ್ಲಿ ನಾಯಕನಾಗಿದ್ದ ಕೇನ್ ವಿಲಿಯಮ್ಸನ್ ಒಟ್ಟು 17 ಪಂದ್ಯಗಳಲ್ಲಿ 735 ರನ್ ಕಲೆಹಾಕಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿರುವ ಕೇನ್ ವಿಲಿಯಮ್ಸನ್ 12 ಪಂದ್ಯಗಳನ್ನಾಡಿ ಕೇವಲ 208 ರನ್ ಕಲೆಹಾಕಿದ್ದಾರೆ. ಅದರಲ್ಲಿಯೂ ಕಳೆದ ಐದು ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಒಮ್ಮೆಯೂ ಎರಡಂಕಿ ಮುಟ್ಟುವಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ಇಂದಿನ ಪಂದ್ಯದಿಂದ ಕೇನ್ ವಿಲಿಯಮ್ಸನ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡಿ.

2. ಶಶಾಂಕ್ ಸಿಂಗ್: ಸನ್ ರೈಸರ್ಸ್ ಹೈದರಾಬಾದ್ ತಂಡದ ಶಶಾಂಕ್ ಸಿಂಗ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಇಲ್ಲಿಯವರೆಗೂ 10 ಪಂದ್ಯಗಳಲ್ಲಿ ಕಣಕ್ಕಿಳಿದು ಕೇವಲ 69 ರನ್ ಗಳಿಸಿದ್ದಾರೆ. ಇನ್ನು ಶಶಾಂಕ್ ಸಿಂಗ್ 25ಕ್ಕಿಂತ ಹೆಚ್ಚು ರನ್‌ನ್ನು ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕುವಲ್ಲಿ ವಿಫಲರಾಗಿದ್ದಾರೆ. ಹೀಗೆ ಕಳಪೆ ಪ್ರದರ್ಶನ ನೀಡುತ್ತಿರುವ ಶಶಾಂಕ್ ಸಿಂಗ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ.

3. ಟ್ರಿಸ್ಟಾನ್ ಸ್ಟಬ್ಸ್: ಗಾಯಗೊಂಡು ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದ ಟೈಮಲ್ ಮಿಲ್ಸ್ ಬದಲಾಗಿ ತಂಡ ಸೇರಿದ ಟ್ರಿಸ್ಟಾನ್ ಸ್ಟಬ್ಸ್ ಕಳೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡರು. ಆದರೆ ಪಂದ್ಯದಲ್ಲಿ ಮಿಂಚುವಲ್ಲಿ ವಿಫಲವಾದ ಈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬದಲು ಬೇರೆ ವಿಕೆಟ್ ಕೀಪರ್‌ನ್ನು ನಿಮ್ಮ ಡ್ರೀಮ್ ಟೀಮ್‌ನಲ್ಲಿ ಆರಿಸಿಕೊಳ್ಳುವುದು ಉತ್ತಮ.

Story first published: Tuesday, May 17, 2022, 16:52 [IST]
Other articles published on May 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+