For Quick Alerts
ALLOW NOTIFICATIONS  
For Daily Alerts
 

RR vs LSG: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಮೂವರನ್ನು ತಂಡದಿಂದ ಹೊರಗಿಡಿ!

IPL 2022: 3 Players you should avoid in your dream team for RR vs LSG match

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 10 ) 2 ಪಂದ್ಯಗಳು ನಡೆಯುತ್ತಿದ್ದು, ಪ್ರಥಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿದ್ದರೆ, ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿ 3 ಪಂದ್ಯದಲ್ಲಿ ಜಯಗಳಿಸಿ ಉಳಿದೊಂದು ಪಂದ್ಯದಲ್ಲಿ ಸೋತಿರುವ ನೂತನ ತಂಡ ಲಕ್ನೋ ಸೂಪರ್ ಜೈಂಟ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಇನ್ನು ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ರಾಜಸ್ಥಾನ್ ರಾಯಲ್ಸ್ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತು ಇದೀಗ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರುವತ್ತ ಚಿತ್ತ ನೆಟ್ಟಿದೆ. ಅತ್ತ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಸೋತು ನಂತರ ಆಡಿದ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯದಲ್ಲಿಯೂ ಗೆದ್ದು ತನ್ನ ಗೆಲುವಿನ ಸರಪಳಿಯನ್ನು ಮುನ್ನಡೆಸುವ ಯೋಜನೆಯಲ್ಲಿದೆ. ಹೀಗೆ ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕೆಲ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ರಚಿಸಲಾಗುತ್ತಿರುವ ಡ್ರೀಮ್ ಟೀಮ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಮೂವರು ಆಟಗಾರರನ್ನು ಆಯ್ಕೆ ಮಾಡದೇ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

lewis

1. ಎವಿನ್ ಲೆವಿಸ್

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 23 ಎಸೆತಗಳಿಗೆ 55 ರನ್ ಬಾರಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡ 19.3 ಓವರ್‌ಗಳಲ್ಲಿ 211 ರನ್‌ಗಳ ಗುರಿಯನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಎವಿನ್ ಲೆವಿಸ್ ಆ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಿಂಚಿದ್ದ ಎವಿನ್ ಲೆವಿಸ್ ನಂತರ ನಡೆದ 2 ಪಂದ್ಯಗಳಲ್ಲಿ ಎರಡಂಕಿ ಮುಟ್ಟುವಲ್ಲಿಯೂ ಕೂಡ ವಿಫಲರಾಗಿದ್ದು, ಈ ಪಂದ್ಯದ ನಿಮ್ಮ ಡ್ರೀಮ್ ಟೀಮ್‌ನಲ್ಲಿ ಇವರನ್ನು ಕೈಬಿಡುವುದು ಉತ್ತಮ ಆಯ್ಕೆ ಎನ್ನಬಹುದು.

2. ರವಿಚಂದ್ರನ್ ಅಶ್ವಿನ್

ರಾಜಸ್ಥಾನ್ ರಾಯಲ್ಸ್ ತಂಡದ ಪರ 3 ಪಂದ್ಯಗಳಲ್ಲಿಯೂ ಕಣಕ್ಕಿಳಿದಿರುವ ರವಿಚಂದ್ರನ್ ಅಶ್ವಿನ್ ಕೇವಲ 1 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಹಾಗೂ ಕೊನೆಯದಾಗಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 39 ರನ್ ನೀಡಿದ ಅಶ್ವಿನ್ ಅಂತಿಮ 2 ಪಂದ್ಯಗಳಲ್ಲಿ ಹೆಚ್ಚು ರನ್ ನೀಡಿ ದುಬಾರಿಯಾಗಿದ್ದಾರೆ. ಹೀಗೆ ವಿಕೆಟ್ ಪಡೆಯಲಾಗದೇ ಹೆಚ್ಚು ರನ್ ನೀಡುತ್ತಿರುವ ರವಿಚಂದ್ರನ್ ಅಶ್ವಿನ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಆಯ್ಕೆ.

3. ಆ್ಯಂಡ್ರ್ಯೂ ಟೈ

ಆ್ಯಂಡ್ರ್ಯೂ ಟೈ ಕಳೆದೆರಡು ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಯಾವುದೇ ವಿಕೆಟ್ ಪಡೆಯದೇ ವಿಫಲರಾಗಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್ ಮಾಡಿದ ಆ್ಯಂಡ್ರ್ಯೂ ಟೈ 28 ರನ್ ನೀಡಿ ದುಬಾರಿಯಾದರು. ಇನ್ನು ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದು 3 ಓವರ್ ಬೌಲಿಂಗ್ ಮಾಡಿ 22 ರನ್ ನೀಡಿ 2 ವಿಕೆಟ್ ಪಡೆದಿದ್ದ ದುಷ್ಮಂತ ಚಮೀರ ಬದಲಾಗಿ ಆ್ಯಂಡ್ರ್ಯೂ ಟೈ ಅವರನ್ನು ನಂತರದ ಪಂದ್ಯಗಳಲ್ಲಿ ಕಣಕ್ಕಿಳಿಸಲಾಗಿತ್ತು. ಆದರೆ ಚಮೀರಾ ನೀಡಿದಷ್ಟು ಪ್ರದರ್ಶನವನ್ನು ಕೂಡ ನೀಡುವಲ್ಲಿ ವಿಫಲರಾಗಿರುವ ಆ್ಯಂಡ್ರ್ಯೂ ಟೈ ಇಂದಿನ ಪಂದ್ಯದಲ್ಲಿ ಆಡುವ ಅನುಮಾನಗಳಿದ್ದು, ಇವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

Story first published: Sunday, April 10, 2022, 17:58 [IST]
Other articles published on Apr 10, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+