MI vs KKR: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್‌ನಿಂದ ಈ ಮೂವರು ಆಟಗಾರರನ್ನು ಹೊರಗಿಡಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 14ನೇ ಪಂದ್ಯ ಇಂದು ( ಏಪ್ರಿಲ್ 6 ) ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಒಟ್ಟು 2 ಪಂದ್ಯಗಳನ್ನಾಡಿ ಎರಡರಲ್ಲಿಯೂ ಸೋತಿರುವ ಮುಂಬೈ ಇಂಡಿಯನ್ಸ್ ಎಂಟನೇ ಸ್ಥಾನದಲ್ಲಿದೆ.
ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತು, ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದಿದೆ. ಅತ್ತ ತನ್ನ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋತಿದೆ. ಹೀಗೆ ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುತ್ತಾ ಅಥವಾ ಈ ಪಂದ್ಯದಲ್ಲಿಯೂ ಸೋತು ಹ್ಯಾಟ್ರಿಅನ್ಮೋಲ್ ಪ್ರೀತ್ ಸಿಂಗ್ಕ್ ಸೋಲಿನ ಮುಖಭಂಗಕ್ಕೆ ಒಳಗಾಗುತ್ತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.
ಈ ಚರ್ಚೆಗಳು ಒಂದೆಡೆಯಾದರೆ ಮೊತ್ತೊಂದೆಡೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿರುವ ಆಟಗಾರರನ್ನೊಳಗೊಂಡ ಡ್ರೀಮ್ ಟೀಮ್ ಕುರಿತಾದ ಚರ್ಚೆಗಳೂ ಸಹ ನಡೆಯುತ್ತಿವೆ. ಹೀಗೆ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ರಚಿಸುತ್ತಿರುವ ಡ್ರೀಮ್ ಟೀಮ್‌ನಿಂದ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡಬೇಕಾಗಿದೆ.

1. ಅನ್ಮೋಲ್ ಪ್ರೀತ್ ಸಿಂಗ್
ಮುಂಬೈ ಇಂಡಿಯನ್ಸ್ ಪರ ಎರಡು ಪಂದ್ಯಗಳಲ್ಲಿಯೂ ಕಣಕ್ಕಿಳಿದಿರುವ ಅನ್ಮೋಲ್ ಪ್ರೀತ್ ಸಿಂಗ್ 13 ಎಸೆತಗಳನ್ನು ಎದುರಿಸಿ 13 ರನ್ ಕಲೆಹಾಕಿದ್ದಾರೆ. ಹೀಗೆ ಪಂದ್ಯವೊಂದರಲ್ಲಿ ಎರಡು ಅಂಕಿ ಮುಟ್ಟುವಲ್ಲಿಯೂ ವಿಫಲರಾಗಿರುವ ಅನ್ಮೋಲ್ ಪ್ರೀತ್ ಸಿಂಗ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದುಕೊಳ್ಳುವುದು ಅನುಮಾನ ಮೂಡಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವ ಸಾಧ್ಯತೆಗಳಿದ್ದು ಅನ್ಮೋಲ್ ಪ್ರೀತ್ ಸಿಂಗ್ ಹೊರಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಅನ್ಮೋಲ್ ಪ್ರೀತ್ ಸಿಂಗ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ ಆಯ್ಕೆ.

2. ಡೇನಿಯಲ್ ಸ್ಯಾಮ್ಸ್
70ಕ್ಕೂ ಅಧಿಕ ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಅನುಭವವನ್ನು ಹೊಂದಿರುವ ಡೇನಿಯಲ್ ಸ್ಯಾಮ್ಸ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಬ್ಬರಿಸಿದ್ದಾರೆ. ಆದರೆ, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂದೇ ಒಂದು ವಿಕೆಟ್ ಪಡೆಯದೇ ವಿಫಲವಾಗಿರುವ ಡೇನಿಯಲ್ ಸ್ಯಾಮ್ಸ್ ತಾನಾಡಿದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್ ಬೌಲಿಂಗ್ ಮಾಡಿ 57 ರನ್ ನೀಡಿ ದುಬಾರಿಯಾಗಿದ್ದರು ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 32 ರನ್ ನೀಡಿದ್ದರು. ಹೀಗೆ ಎರಡೂ ಪಂದ್ಯಗಳಲ್ಲಿಯೂ ವಿಕೆಟ್ ಪಡೆಯದೇ ನೆಲಕಚ್ಚಿರುವ ಡೇನಿಯಲ್ ಸ್ಯಾಮ್ಸ್ ಅವರನ್ನು ನಿಮ್ಮ ಡ್ರೀಮ್ ಟೀಮ್‌ನಿಂದ ಹೊರಗಿಡುವುದು ಉತ್ತಮ.


3. ಟಿಮ್ ಸೌಥಿ
ಕೋಲ್ಕತ್ತಾ ನೈಟ್ ರೈಡರ್ಸ್ ಪರ 3 ಪಂದ್ಯಗಳಲ್ಲಿ ಕಣಕ್ಕಿಳಿದು 5 ವಿಕೆಟ್ ಪಡೆದಿರುವ ಟಿಮ್ ಸೌಥಿ ಎಲ್ಲಿಯೂ ಎಡವಿಲ್ಲ. ಆದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಅವರನ್ನು ಕಣಕ್ಕಿಳಿಸುವ ಯೋಜನೆಯಲ್ಲಿದ್ದು, ಟಿಮ್ ಸೌಥಿ ತಮ್ಮ ಸ್ಥಾನವನ್ನು ಬಿಟ್ಟುಕೊಡಲೇಬೇಕಾಗಿದೆ. ಹೀಗಾಗಿ ನಿಮ್ಮ ಡ್ರೀಮ್ ಟೀಮ್‌ನಿಂದ ಟಿಮ್ ಸೌಥಿಯನ್ನು ಹೊರಗಿಡುವುದು ಉತ್ತಮ ಎನ್ನಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications