RCB vs GT: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು

ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದದ್ದು, 10 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ವಶಪಡಿಸಿಕೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿದೆ. ಅತ್ತ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆವಗೂ ಒಟ್ಟು 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಂಡಿದ್ದು, ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಇತ್ತಂಡಗಳ ಲೀಗ್ ಹಂತದ ಈ ಕೊನೆಯ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.
ಹೌದು, ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸುವ ತನ್ನ ಆಸೆಯನ್ನು ಜೀವಂತವಾಗಿರಿಕೊಳ್ಳಲಿದ್ದು, ಶನಿವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾರ ಮೇಲೂ ಅವಲಂಬಿತವಾಗದೇ ಪ್ಲೇಆಫ್ ಪ್ರವೇಶವನ್ನು ಪಡೆದುಕೊಳ್ಳಲಿದೆ. ಹೀಗಾಗಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾರು ಜಯ ಸಾಧಿಸಬಹುದು ಎಂಬ ಲೆಕ್ಕಾಚಾರಗಳಲ್ಲಿ ಕೆಲ ಕ್ರಿಕೆಟ್ ಪ್ರೇಮಿಗಳು ತೊಡಗಿಕೊಂಡಿದ್ದರೆ. ಇನ್ನೂ ಕೆಲ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸಿ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆಯ್ಕೆ ಮಾಡುವಲ್ಲಿ ನಿರತರಾಗಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಕಳಪೆ ಪ್ರದರ್ಶನ ನೀಡುವ ಸಾಧ್ಯತೆ ಇರುವ ಈ ಕೆಳಕಂಡ ಮೂವರು ಆಟಗಾರರನ್ನು ಹೊರಗಿಡುವುದು ಉತ್ತಮ.

1. ಮ್ಯಾಥ್ಯೂ ವೇಡ್
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳನ್ನಾಡಿ 98 ರನ್ ಕಲೆಹಾಕಿರುವ ಮ್ಯಾಥ್ಯೂ ವೇಡ್ ಉತ್ತಮ ಪ್ರದರ್ಶನ ನೀಡಲಾಗದೇ ಮಂಕಾಗಿದ್ದಾರೆ. ಇನ್ನು ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ಪಡೆಯದ ಕಾರಣ ಈತನಿಗೆ ಫ್ಯಾಂಟಸಿ ಅಂಕಗಳು ಹೆಚ್ಚೇನೂ ಲಭಿಸುವುದಿಲ್ಲ ಎನ್ನಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಮ್ಯಾಥ್ಯೂ ವೇಡ್ ಅವರನ್ನು ನಿಮ್ಮ ಡ್ರೀಮ್‌ನಲ್ಲಿ ತೆಗೆದುಕೊಳ್ಳದೇ ಇರುವುದು ಉತ್ತಮ.

2. ಮಹಿಪಾಲ್ ಲೊಮ್ರೊರ್
ಮಹಿಪಾಲ್ ಲೊಮ್ರೊರ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 98 ರನ್ ಕಲೆಹಾಕುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಇನ್ನು ಮಹಿಪಾಲ್ ಲೊಮ್ರೊರ್ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದು ಹೆಚ್ಚು ಎಸೆತಳನ್ನು ಎದುರಿಸದ ಕಾರಣ ಈ ಪಂದ್ಯದಲ್ಲಿಯೂ ಗಮನಾರ್ಹ ಪ್ರದರ್ಶನ ನೀಡುವ ಸಾಧ್ಯತೆ ಕಡಿಮೆ ಇದ್ದು, ಇವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ ಎನ್ನಬಹುದು.

3. ಮೊಹಮ್ಮದ್ ಸಿರಾಜ್
ಮೊಹಮ್ಮದ್ ಸಿರಾಜ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈ ಬಾರಿ ಅದೇ ರೀತಿಯ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 8 ವಿಕೆಟ್ ಪಡೆಯುವಲ್ಲಿ ಮಾತ್ರ ಶಕ್ತರಾಗಿದ್ದಾರೆ. ಇನ್ನು ಕೊನೆಯ ಪಂದ್ಯದಲ್ಲಿ ತನ್ನ ಪಾಲಿನ ಎಲ್ಲಾ ಓವರ್‌ಗಳನ್ನು ಮಾಡುವಲ್ಲಿ ವಿಫಲರಾದ ಇವರನ್ನು ನಿಮ್ಮ ಡ್ರೀಮ್ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications