IPL 2022: ಕೋಟಿ ಕೋಟಿ ಪಡೆದು ಫ್ಲಾಪ್ ಆಗದೇ ಉತ್ತಮ ಪ್ರದರ್ಶನ ನೀಡಿದ್ದು ಈ ಐವರು ಮಾತ್ರ!

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಆರಂಭವಾಗಿದ್ದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಮೇ 29ರಂದು ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದ ಮೂಲಕ ತೆರೆಬಿತ್ತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಗೆಲುವನ್ನು ಸಾಧಿಸಿ ತಾನು ಕಣಕ್ಕಿಳಿದ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿಯೇ ಚಾಂಪಿಯನ್ ಆಗಿ ಹೊರಹೊಮ್ಮಿತು.
ಹೀಗೆ ಈ ಬಾರಿಯ ಟೂರ್ನಿಯಲ್ಲಿ ತಂಡದ ಎಲ್ಲಾ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟನ್ಸ್ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಯಿತು. ಇನ್ನು ಟ್ರೋಫಿ ಎತ್ತಿ ಹಿಡಿಯುವಲ್ಲಿ ವಿಫಲರಾದ ಇತರೆ ತಂಡಗಳ ಕೆಲ ಆಟಗಾರರು ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಅದರಲ್ಲಿಯೂ ಮೆಗಾ ಹರಾಜಿನಲ್ಲಿ ಕೋಟಿ ಕೋಟಿ ಪಡೆದ ಕೆಲ ಆಟಗಾರರು ತಾವು ಪಡೆದ ಮೊತ್ತಕ್ಕೆ ತಕ್ಕನಾದ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಮೆಗಾ ಹರಾಜಿನಲ್ಲಿ ಕೋಟಿ ಕೋಟಿ ಪಡೆದ ಹಲವಾರು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರೆ, ಈ ಕೆಳಕಂಡ ಐವರು ಆಟಗಾರರು ಮಾತ್ರ ಪಡೆದ ಹಣಕ್ಕೆ ತಕ್ಕಂತ ಪ್ರದರ್ಶನ ನೀಡಿ ಮಿಂಚಿದ್ದಾರೆ.

5. ಅಭಿಷೇಕ್ ಶರ್ಮಾ - ಸನ್ ರೈಸರ್ಸ್ ಹೈದರಾಬಾದ್
ಪಂಜಾಬ್‌ನ ಅಭಿಷೇಕ್ ಶರ್ಮಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅನ್‌ಕ್ಯಾಪ್ಡ್ ಆಟಗಾರರಲ್ಲಿ ಓರ್ವರು. ಪಂಜಾಬ್ ಮೂಲದ ಈ ಆಲ್‌ರೌಂಡರ್ ಆಟಗಾರನನ್ನು ಟೂರ್ನಿ ಆರಂಭಕ್ಕೂ ಮುನ್ನ ಹಲವಾರು ಆಟಗಾರರು ಹಾಡಿ ಹೊಗಳಿದ್ದರು. ಟೂರ್ನಿ ಆರಂಭದ ನಂತರ ಆ ಹೊಗಳಿಕೆಗಳಿಗೆ ಅರ್ಥವನ್ನು ನೀಡುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಕೇನ್ ವಿಲಿಯಮ್ಸನ್ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಅವಕಾಶ ಪಡೆದ ಈ ಎಡಗೈ ಬ್ಯಾಟ್ಸ್‌ಮನ್ ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿ 426 ರನ್ ಕಲೆಹಾಕಿ ಸನ್ ರೈಸರ್ಸ್ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಹೀಗೆ ಮೆಗಾ ಹರಾಜಿನಲ್ಲಿ 6.50 ಕೋಟಿ ಪಡೆದ ಅಭಿಷೇಕ್ ಶರ್ಮಾ ಹಣಕ್ಕೆ ತಕ್ಕಂತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

4. ಯುಜುವೇಂದ್ರ ಚಹಲ್ - ರಾಜಸ್ಥಾನ್ ರಾಯಲ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ದೀರ್ಘಕಾಲ ಆಟವಾಡಿದ್ದ ಯುಜುವೇಂದ್ರ ಚಹಲ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 6.50 ಕೋಟಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದರು. ಇನ್ನು ಟೂರ್ನಿಯಲ್ಲಿ 17 ಪಂದ್ಯಗಳನ್ನಾಡಿದ ಯುಜುವೇಂದ್ರ ಚಹಲ್ 27 ವಿಕೆಟ್‌ಗಳನ್ನು ಪಡೆದು ಅತಿಹೆಚ್ಚು ವಿಕೆಟ್ ಪಡೆದ ಆಟಗಾರನಾಗಿ ಹೊರಹೊಮ್ಮಿ ಪರ್ಪಲ್ ಕ್ಯಾಪ್‌ನ್ನು ತಮ್ಮ ಮುಡಿಗೇರಿಸಿಕೊಂಡರು. ಹೀಗೆ ತಾನು ಪಡೆದ ಮೊತ್ತಕ್ಕೆ ತಕ್ಕಂತ ಪ್ರದರ್ಶನವನ್ನು ನೀಡುವಲ್ಲಿ ಚಹಲ್ ಯಶಸ್ವಿಯಾಗಿದ್ದಾರೆ.

3. ಕ್ವಿಂಟನ್ ಡಿ ಕಾಕ್
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಡಿ ಕಾಕ್ ಫ್ರಾಂಚೈಸಿ ತನ್ನ ಮೇಲಿಟ್ಟಿದ್ದ ನಂಬಿಕೆ ಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿ 508 ರನ್ ಕಲೆಹಾಕಿದ ಡಿ ಕಾಕ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 70 ಎಸೆತಗಳಲ್ಲಿ ಅಜೇಯ 140 ರನ್ ಕಲೆಹಾಕಿ ಈ ಬಾರಿಯ ಟೂರ್ನಿಯಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಗರಿಷ್ಟ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಹೀಗೆ ಈ ಬಾರಿಯ ಮೆಗಾ ಹರಾಜಿನಲ್ಲಿ 6.75 ಕೋಟಿ ಪಡೆದ ಕ್ವಿಂಟನ್ ಡಿ ಕಾಕ್ ತಾವು ಪಡೆದ ಮೊತ್ತಕ್ಕೆ ತಕ್ಕಂತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.

2. ವನಿಂದು ಹಸರಂಗ - ರಾಯಲ್ ಚಾಲೆಂಜರ್ಸ್ ಬೆಂಗಳೂರು
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಬರೋಬ್ಬರಿ 10.75 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿಂದು ಹಸರಂಗ ಅವರನ್ನು ಖರೀದಿಸಿದಾಗ ಹಲವಾರು ಟೀಕೆಗಳು ಎದುರಾಗಿದ್ದವು. ಆದರೆ ಈ ಎಲ್ಲಾ ಟೀಕೆಗಳಿಗೆ ತಮ್ಮ ಪ್ರದರ್ಶನ ನೀಡಿದ ಹಸರಂಗ 16 ಪಂದ್ಯಗಳನ್ನಾಡಿ 26 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಒಂದು ವಿಕೆಟ್ ಅಂತರದಿಂದ ಕೈತಪ್ಪಿಸಿಕೊಂಡರು ಹಾಗೂ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತಿಹೆಚ್ಚು ವಿಕೆಟ್ ಪಡೆದ ಅಟಗಾರ ಎನಿಸಿಕೊಂಡ ಹಸರಂಗ ಪಡೆದ ಬೃಹತ್ ಮೊತ್ತಕ್ಕೆ ತಕ್ಕಂತ ಪ್ರದರ್ಶನ ನೀಡಿದ್ದಾರೆ.

1. ಲಿಯಾಮ್ ಲಿವಿಂಗ್‌ಸ್ಟನ್
ಈ ಬಾರಿಯ ಮೆಗಾ ಹರಾಜಿನಲ್ಲಿ ಬರೋಬ್ಬರಿ 11.50 ಕೋಟಿಗೆ ಪಂಜಾಬ್ ಕಿಂಗ್ಸ್ ಪಾಲಾದ ಇಂಗ್ಲೆಂಡ್‌ನ ಸಿಕ್ಸರ್ ಕಿಂಗ್ ಲಿಯಾಮ್ ಲಿವಿಂಗ್‌ಸ್ಟನ್ ಟೂರ್ನಿಯಲ್ಲಿ ತನ್ನ ಅದ್ಭುತ ಪ್ರದರ್ಶನದಿಂದ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದರ ಜತೆಗೆ ತಾನು ಪಡೆದ 11.50 ಕೋಟಿಗೆ ನ್ಯಾಯ ಒದಗಿಸಿದರು. ಆಡಿದ 14 ಪಂದ್ಯಗಳಲ್ಲಿ 437 ರನ್ ಕಲೆಹಾಕಿದ ಲಿಯಾಮ್ ಲಿವಿಂಗ್‌ಸ್ಟನ್ 34 ಸಿಕ್ಸರ್ ಚಚ್ಚಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನೂ ಸಹ ಪಡೆದುಕೊಂಡಿದ್ದಾರೆ ಹಾಗೂ 6 ವಿಕೆಟ್‌ಗಳನ್ನೂ ಸಹ ಲಿವಿಂಗ್‌ಸ್ಟನ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications