ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಆಸೆಯಲ್ಲಿರುವ ಚಹಲ್‌ಗೆ ಈ ನಾಲ್ವರದ್ದೇ ತಲೆನೋವು!

IPL 2022: 5 spinners who can steal the place in Team India squad for T20 world cup

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡ ಆಟಗಾರರ ಉದಾಹರಣೆಗಳು ಇವೆ. ಹೌದು, ಐಪಿಎಲ್‌ನಲ್ಲಿ ಮಿಂಚಿದ ಹಲವಾರು ಯುವ ಪ್ರತಿಭೆಗಳು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದು, ವಿಶ್ವಕಪ್ ತಂಡದಲ್ಲಿಯೂ ಸಹ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಕಳಪೆ ಪ್ರದರ್ಶನ ಹಾಗೂ ಫಿಟ್‌ನೆಸ್ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದ ಅನುಭವಿ ಆಟಗಾರರು ಮರಳಿ ತಂಡ ಸೇರಲೂ ಸಹ ಈ ಇಂಡಿಯನ್ ಪ್ರೀಮಿಯರ್ ಲೀಗ್ ವೇದಿಕೆಯಾಗಿದ್ದು, ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯಲ್ಲಿಯೂ ಸಹ ಹಲವು ಆಟಗಾರರು ಉತ್ತಮ ಪ್ರದರ್ಶನ ನೀಡಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳುವತ್ತ ಚಿತ್ತ ನೆಟ್ಟಿದ್ದಾರೆ.

MI vs KKR: ಮೋಸದ ತೀರ್ಪಿಗೆ ಬಿತ್ತಾ ರೋಹಿತ್ ವಿಕೆಟ್?; ಮೋಸವೆನ್ನಲು ಇಲ್ಲಿದೆ ಬಲವಾದ ಕಾರಣ!MI vs KKR: ಮೋಸದ ತೀರ್ಪಿಗೆ ಬಿತ್ತಾ ರೋಹಿತ್ ವಿಕೆಟ್?; ಮೋಸವೆನ್ನಲು ಇಲ್ಲಿದೆ ಬಲವಾದ ಕಾರಣ!

ಅದರಲ್ಲಿಯೂ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐವರು ಸ್ಪಿನ್ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿ ಮಿಂಚುತ್ತಿದ್ದು ಇದೇ ವರ್ಷದ ಅಕ್ಟೋಬರ್ - ನವೆಂಬರ್‌ ತಿಂಗಳಿನಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಪ್ರಯತ್ನಲಿದ್ದಾರೆ. ಹೀಗೆ ಟೀಮ್ ಇಂಡಿಯಾ ಕದ ತಟ್ಟುತ್ತಿರುವ ಆ ಐವರು ಸ್ಪಿನ್ನರ್‌ಗಳ ಪಟ್ಟಿ ಈ ಕೆಳಕಂಡಂತಿದೆ. .

1. ಯುಜುವೇಂದ್ರ ಚಹಲ್

1. ಯುಜುವೇಂದ್ರ ಚಹಲ್

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕಣಕ್ಕಿಳಿದಿರುವ ಯುಜುವೇಂದ್ರ ಚಹಲ್ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿದ್ದು 22 ವಿಕೆಟ್ ಪಡೆದು ಈ ಬಾರಿ ಪರ್ಪಲ್ ಕ್ಯಾಪ್ ವಿಜೇತನಾಗಲಿರುವ ಆಟಗಾರರಲ್ಲಿ ಹೆಚ್ಚು ಫೇವರಿಟ್ ಆಗಿದ್ದಾರೆ. ಈ ಬಾರಿ ಹ್ಯಾಟ್ರಿಕ್ ವಿಕೆಟ್‌ಗಳನ್ನೂ ಸಹ ಪಡೆದು ಮಿಂಚಿರುವ ಚಹಲ್ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡು ವಿಶ್ವಕಪ್‌ನಲ್ಲಿ ತಂಡವನ್ನು ಪ್ರತಿನಿಧಿಸುವ ಸಾಧ್ಯತೆಗಳಿವೆ. ಇನ್ನು ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಸ್ಥಾನ ಪಡೆದುಕೊಳ್ಳದೇ ಇರುವ ಚಹಲ್ 54 ಅಂತರರಾಷ್ಟ್ರೀಯ ಟಿಟ್ವೆಂಟಿ ಪಂದ್ಯಗಳನ್ನಾಡಿ 68 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಬೇಕಾಗಿರುವ ಉತ್ತಮ ಪ್ರದರ್ಶನ ನೀಡಿರುವ ಚಹಲ್‌ಗೆ ಮುಂದಿನ ನಾಲ್ವರು ಆಟಗಾರರು ಪೈಪೋಟಿ ನಡೆಸಿ ತಲೆನೋವಾಗಬಹುದಾದ ಸಾಧ್ಯತೆಗಳಿವೆ.

2. ಕುಲ್‌ದೀಪ್ ಯಾದವ್

2. ಕುಲ್‌ದೀಪ್ ಯಾದವ್

ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿರುವ ಕುಲ್‌ದೀಪ್ ಯಾದವ್ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿ 18 ವಿಕೆಟ್‌ಗಳನ್ನು ಪಡೆದುಕೊಂಡಿದ್ದು ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ತಮ್ಮ ತಂಡದ ಪರ ಅತಿಹೆಚ್ಚು ವಿಕೆಟ್ ಪಡೆದು ಮಿಂಚಿರುವ ಕುಲ್‌ದೀಪ್ ಯಾದವ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳಲು ರೇಸ್‌ಗೆ ಇಳಿದಿರುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಇನ್ನು ಚಹಲ್ ಮತ್ತು ಕುಲ್‌ದೀಪ್ ಜೋಡಿ ಎದುರಾಳಿಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವ ಸಾಮರ್ಥ್ಯವನ್ನು ಹೊಂದಿದ್ದು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

3. ರವೀಂದ್ರ ಜಡೇಜಾ

3. ರವೀಂದ್ರ ಜಡೇಜಾ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಸ್ವೀಕರಿಸಿ ವಿಫಲವಾದ ಕಾರಣ ಕೆಳಗಿಳಿದ ರವೀಂದ್ರ ಜಡೇಜಾ ಟೂರ್ನಿಯಲ್ಲ ಮಂಕಾಗಿದ್ದಾರೆ. ಇನ್ನು 10 ಪಂದ್ಯಗಳನ್ನಾಡಿರುವ ಜಡೇಜಾ ಕೇವಲ 5 ವಿಕೆಟ್‌ಗಳನ್ನು ಮಾತ್ರ ಪಡೆದಿದ್ದು, ಬ್ಯಾಟಿಂಗ್‌ನಲ್ಲಿಯೂ ಸಹ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡಿಲ್ಲ. ಆದರೆ ಅಂತರರಾಷ್ಟ್ರೀಯ ಕ್ರಿಕೆಟ್‌ ವಿಷಯಕ್ಕೆ ಬಂದರೆ ಜಡೇಜಾ ಫಾರ್ಮ್ ಅತ್ಯುತ್ತಮವಾಗಿದ್ದು, ಸದ್ಯ ಮುಂಬರುವ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವತ್ತ ಕಣ್ಣಿಟ್ಟಿದ್ದಾರೆ.

4. ರವಿಚಂದ್ರನ್ ಅಶ್ವಿನ್

4. ರವಿಚಂದ್ರನ್ ಅಶ್ವಿನ್

ಕಳೆದ ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿದ್ದ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ರವಿಚಂದ್ರನ್ ಅಶ್ವಿನ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಧಾರಣ ಪ್ರದರ್ಶನ ನೀಡುತ್ತಿದ್ದು, ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆದುಕೊಳ್ಳುವತ್ತ ಕಣ್ಣಿಟ್ಟಿದ್ದಾರೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿ 9 ವಿಕೆಟ್ ಪಡೆದಿರುವ ಅಶ್ವಿನ್ ಹೇಳಿಕೊಳ್ಳುವಂತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ.

5. ರವಿ ಬಿಷ್ಣೋಯಿ

5. ರವಿ ಬಿಷ್ಣೋಯಿ

ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಯುವ ಸ್ಪಿನ್ನರ್ ರವಿ ಬಿಷ್ಣೋಯಿಗೆ ಆಯ್ಕೆಗಾರರು ಮಣೆಹಾಕುವ ಸಾಧ್ಯತೆಗಳು ಹೆಚ್ಚಿವೆ. ಕಳೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯ ಮೂಲಕ ತಂಡಕ್ಕೆ ಪದಾರ್ಪಣೆ ಮಾಡಿದ್ದ ರವಿ ಬಿಷ್ನೋಯಿ ಬೌಲಿಂಗ್ ಅಂತರರಾಷ್ಟ್ರೀಯ ಬ್ಯಾಟ್ಸ್‌ಮನ್‌ಗಳಿಗೆ ಅಪರಿಚಿತವಾದ್ದರಿಂದ ಇವರು ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳು ತುಸು ಹೆಚ್ಚೇ ಇವೆ ಎಂದು ಹೇಳಬಹುದು. ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 11 ಪಂದ್ಯಗಳನ್ನಾಡಿರುವ ರವಿ ಬಿಷ್ಣೋಯಿ 9 ವಿಕೆಟ್ ಪಡೆದುಕೊಂಡಿದ್ದಾರೆ.

Story first published: Wednesday, May 11, 2022, 12:43 [IST]
Other articles published on May 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X