For Quick Alerts
ALLOW NOTIFICATIONS  
For Daily Alerts
 

ಆತನ ಬಗ್ಗೆ ಯಾರೂ ಮಾತನಾಡುತ್ತಿಲ್ಲ: ಭಾರತದ ಅನುಭವಿ ಆಟಗಾರನ ಬಗ್ಗೆ ಚೋಪ್ರ ಪ್ರಶಂಸೆ

IPL 2022: Aakash Chopra praises Shikhar Dhawans match-winning performence against CSK

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಸಾಧಾರಣ ಪ್ರದರ್ಶನ ನೀಡುತ್ತಿದೆ. ಆದರೆ ತಮಡದ ಅನುಭವಿ ಆಟಗಾರ ಶಿಖರ್ ಧವನ್ ಪ್ರದರ್ಶನ ಈ ಬಾರಿಯೂ ಅತ್ಯುತ್ತಮವಾಗಿದೆ. ತಂಡಕ್ಕೆ ಶಿಖರ್ ಧವನ್ ಸ್ಥಿರ ಪ್ರದರ್ಶನ ನೀಡುವ ಮೂಲಕ ನೆರವಾಗುತ್ತಿದ್ದಾರೆ. ಸುದೀರ್ಘ ಕಾಲದಿಂದ ಧವನ್ ಐಪಿಎಲ್‌ನಲ್ಲಿ ನೀಡಿಕೊಂಡು ಬರುತ್ತಿರುವ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಆಕಾಶ್ ಚೋಪ್ರ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. 59 ಎಸೆತಗಳನ್ನು ಎದುರಿಸಿದ ಅವರು 88 ರನ್ ಬಾರಿಸಿದರು. ಈ ಮೂಲಕ ತಂಡ ಸವಾಲಿನ ಮೊತ್ತ ಪೆರಿಸಲು ಕಾರಣವಾದರು. ಅಲ್ಲದೆ ಈ ಪಂದ್ಯದ ಮೂಲಕ ಧವನ್ ಐಪಿಎಲ್ ಟೂರ್ನಿಯಲ್ಲಿ 6000 ರನ್‌ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾದರು. ಈ ವಿಶೇಷ ಸಾಧನೆಯ ಬಳಿಕ ಚೋಪ್ರ ಶಿಖರ್ ಧವನ್ ಬ್ಯಾಟಿಂಗ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

"ಶಿಖರ್ ಧವನ್ ಓರ್ವ ಅದ್ಭುತ ಆಟಗಾರ. ಆತ 200ಕ್ಕೂ ಅಧಿಕ ಐಪಿಎಲ್ ಪಂದ್ಯಗಳನ್ನು ಆಡಿದ್ದು 6000ಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೇ ಅವರು 1000 ರನ್‌ಗಳಿಸಿದ್ದಾರೆ. ಇದಕ್ಕಿಂತ ಹೆಚ್ಚಿನದ್ದನ್ನು ಆತ ಏನು ಮಾಡಬಹುದು? ಹಾಗಿದ್ದರೂ ಕೂಡ ಆತನ ಸ್ಥಾನ ತೂಗುಯ್ಯಾಲೆಯಲ್ಲಿದೆ. ಯಾರೂ ಕೂಡ ಆತನ ಬಗ್ಗೆ ಮಾತನಾಡುತ್ತಿಲ್ಲ" ಎಂದಿದ್ದಾರೆ ಆಕಾಶ್ ಚೋಪ್ರ.

ಇನ್ನು ಇದೇ ಸಂದರ್ಭದಲ್ಲಿ ಧವನ್ ಅವರ ಸ್ಥಿರ ಪ್ರದರ್ಶನದ ಬಗ್ಗೆಯೂ ಆಕಾಶ್ ಚೋಪ್ರ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಧವನ್ ಅವರನ್ನು ರೀಟೈನ್ ಮಾಡಿಕೊಳ್ಳದೆ ತಪ್ಪೆಸಗಿದೆ ಎಂದಿದ್ದಾರೆ. "ಶಿಖರ್ ಧವನ್ ಪ್ರತಿ ಆವೃತ್ತಿಯಲ್ಲಿಯೂ 500-600 ರನ್‌ಗಳನ್ನು ಗಳಿಸುತ್ತಿದ್ದಾರೆ. ಈ ಮೂಲಕ ತಮ್ಮ ತಂಡಕ್ಕೆ ಅದ್ಭುತ ಕೊಡುಗೆ ನೀಡುತ್ತಿದ್ದಾರೆ. ಹಾಗಿದ್ದರು ಕೂಡ ಅವರ ತಂಡ ರೀಟೈನ್ ಮಾಡಿಕೊಳ್ಳಲಿಲ್ಲ. ನಾನು ಹೇಳುತ್ತಿದ್ದೇನೆ, ಡೆಲ್ಲಿ ಕಳೆದುಕೊಂಡಿದ್ದು ಪಂಜಾಬ್ ತಂಡ ಅದನ್ನು ಗಳಿಸಿದೆ" ಎಂದಿದ್ದಾರೆ ಆಕಾಶ್ ಚೋಪ್ರ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಾಯಕ ಮಯಾಂಕ್ ಅಗರ್ವಾಲ್ ವಿಕೆಟ್ ಕಳೆದುಕೊಂಡ ನಂತರ ಧವನ್ ಹಾಗೂ ಭಾನುಕಾ ರಾಜಪಕ್ಷ ಅದ್ಭುತ ಜೊತೆಯಾಟದಲ್ಲಿ ಭಾಗಿಯಾದರು. ಈ ಜೋಡಿ 110 ರನ್‌ಗಳ ಜೊತೆಯಾಟವನ್ನು ನೀಡಿತ್ತು. ನಂತರ ಲಿಯಾಮ್ ಲಿವಿಂಗ್‌ಸ್ಟನ್ ಕೂಡ ಕೆಲ ಅದ್ಭುತ ಹೊಡೆತಗಳನ್ನು ಬಾರಿಸುವ ಮೂಲಕ ತಂಡದ ಮೊತ್ತವನ್ನು 187/4ಗಳಿಗೆ ಹೆಚ್ಚಿಸಿದರು. ಈ ಮೊತ್ತವನ್ನು ಪಂಜಾಬ್ ಕಿಂಗ್ಸ್ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಪಂಜಾಬ್ ಕಿಂಗ್ಸ್ ಸಂಪೂರ್ಣ ಸ್ಕ್ವಾಡ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

Story first published: Wednesday, April 27, 2022, 9:42 [IST]
Other articles published on Apr 27, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+