ಡೆಲ್ಲಿ ಕ್ಯಾಪಿಟಲ್ಸ್ ಯಶಸ್ಸಿಗೆ ಆತ ಮತ್ತೆ 'ಲಾರ್ಡ್' ಎನಿಸಿಕೊಳ್ಳಬೇಕು: ಆಕಾಶ್ ಚೋಪ್ರ

ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಗೆಲುವಿನ ರುಚಿ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ. ಗುರುವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸಲಿದೆ ರಿಷಬ್ ಪಂತ್ ಪಡೆ. ಈ ಹಿಂದಿನ ಎರಡು ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಆರಂಭದಲ್ಲಿ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ವಿಫಲವಾಗಿದೆ.
ಈ ಹಿನ್ನೆಲೆಯಲ್ಲಿ ಆಕಾಶ್ ಚೋಪ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಕಾಶ್ ಚೋಪ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಓರ್ವ ಆಟಗಾರ ತಿರುಗಿ ಬೀಳಬೇಕು ಎಂದಿದ್ದಾರೆ. ಹಾಗಾದಲ್ಲಿ ಡೆಲ್ಲಿ ತಂಡ ಈ ಬಾರಿ ಮತ್ತೆ ಅದ್ಭುತ ಪ್ರದರ್ಶನ ನೀಡಲಿದೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ.

ಶಾರ್ದೂಲ್ ಠಾಕೂರ್ ಮೇಲೆ ಚೋಪ್ರ ವಿಶ್ವಾಸ
ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡಿದ್ದ ಶಾರ್ದೂಲ್ ಠಾಕೂರ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಭಾರತ ರಾಷ್ಟ್ರೀಯ ತಂಡದ ಪರವಾಗಿಯೂ ಸತತವಾಗಿ ಮಿಂಚುತ್ತಿರುವ ಠಾಕೂರ್ ಡಿಸಿ ತಂಡದ ಪರವಾಗಿ ಮೊದಲ ಎರಡು ಪಂದ್ಯಗಳಲ್ಲಿ ಮಿಂಚಲು ಸಾಧ್ಯವಾಗಿಲ್ಲ. ಆದರೆ ಮುಂದಿನ ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುವುದಾಗಿ ಚೋಪ್ರ ಹೇಳಿದ್ದಾರೆ. ಶಾರ್ದೂಲ್ ಠಾಕೂರ್ ತಮ್ಮ ಲಯಕ್ಕೆ ಮರಳಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ಸುಲಭವಾಗಲಿದೆ ಎಂದಿದ್ದಾರೆ ಆಕಾಶ್ ಚೋಪ್ರ.

ಲಾರ್ಡ್ ಹೆಸರಿಗೆ ತಕ್ಕಂತೆ ಆಡಿದರೆ ಸಾಕು
ಆಕಾಶ್ ಚೋಪ್ರ ಶಾರ್ದೂಲ್ ಠಾಕೂರ್ ಬಗ್ಗೆ ಮಾತನಾಡುತ್ತಾ "ಶಾರ್ದೂಲ್ ಠಾಕೂರ್ ತಮ್ಮ ಹೆಸರಿನೊಂದಿಗೆ ಸೇರ್ಪಡೆಯಾಗಿರುವ ಲಾರ್ಡ್ ಪದಕ್ಕೆ ತಕ್ಕನಾದ ಪ್ರದರ್ಶನವನ್ನು ನೀಡಬೇಕಿದೆ. ಹಾಗಾದಲ್ಲಿ ಡೆಲ್ಲಿ ಫ್ರಾಂಚೈಸಿ ಐಪಿಎಲ್ 2022ರ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಲಿದೆ ಎಂದಿದ್ದಾರೆ.

ವಾರ್ನರ್ ಲಭ್ಯತೆ ಡೆಲ್ಲಿಗೆ ಪ್ಲಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಹರಾಜಿನಲ್ಲಿ ಸೇರ್ಪಡೆಗೊಳಿಸಿರುವ ಡೇವಿಡ್ ವಾರ್ನರ್ ಟೂರ್ನಿಯ ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯವಾಗಿದ್ದರು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡದ ಪರವಾಗಿ ಕಣಕ್ಕಿಳಿಯಲು ವಾರ್ನರ್ ಸಜ್ಜಾಗಿದ್ದಾರೆ. ಈ ಸೇರ್ಪಡೆ ಡೆಲ್ಲಿ ತಂಡಕ್ಕೆ ಹೆಚ್ಚಿನ ಬಲ ನೀಡಲಿದೆ ಎಂದಿದ್ದಾರೆ ಆಕಾಶ್ ಚೋಪ್ರ.

ಡಿಸಿ ಗೆಲ್ಲಬೇಕಾದರೆ ಮಾಡಬೇಕಿರುವುದಿಷ್ಟು
ಇನ್ನು ಈ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂದಿನ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾದರೆ ಯಾವೆಲ್ಲಾ ಆಟಗಾರರಿಂದ ಹೆಚ್ಚಿನ ಪ್ರದರ್ಶನ ಬರಬೇಕೆಂದು ಆಕಾಶ್ ಚೋಪ್ರ ಹೇಳಿದ್ದಾರೆ. "ಪ್ರಸ್ತುತ ಡಿಸಿ ತಂಡ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದಾಗ ಈ ತಂಡ ಗೆಲುವು ಸಾಧಿಸಲೇ ಬೇಕಿದ್ದರೆ ಆರಂಭಿಕರಾದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಸಾಕಷ್ಟು ರನ್‌ಗಳನ್ನು ಗಳಿಸಬೇಕು. ಪಂತ್ ಅವರಿಂದ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬರಬೇಕು. ಶಾರ್ದೂಲ್ ಠಾಕೂರ್ ಮತ್ತೊಮ್ಮೆ ಲಾರ್ಡ್ ಎನಿಸಿಕೊಳ್ಳಬೇಕು. ಇಲ್ಲವಾದಲ್ಲಿ ಬೌಲಿಂಗ್ ವಿಭಾಗ ಬಗಳ ದುರ್ಬಲ ಎನಿಸಿಕೊಳ್ಳುವುದರಲ್ಲಿ ಅನುಮಾನವಿಲ್ಲ" ಎಂದಿದ್ದಾರೆ ಆಕಾಶ್ ಚೋಪ್ರ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications