ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ತಂಡವನ್ನು ಪ್ರತಿನಿಧಿಸಲು ಆತ ಇನ್ನೂ ಸಿದ್ಧವಾಗಿಲ್ಲ: ಗವಾಸ್ಕರ್ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ ಚೋಪ್ರ

IPL 2022: Aakash Chopra said Umran Malik not ready to play for India

ಐಪಿಎಲ್‌ನಲ್ಲಿ ನೀಡುತ್ತಿರುವ ಪ್ರದರ್ಶನವನ್ನು ಗಮನಿಸಿ ಇತ್ತೀಚೆಗೆ ಭಾರತೀಯ ಕ್ರಿಕೆಟ್‌ನ ದಿಗ್ಗಜ ಆಟಗಾರ ಪ್ರತಿಕ್ರಿಯೆ ನೀಡಿದ್ದರು. ಯುವ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಸಾಧ್ಯವಾಷ್ಟು ಶೀಘ್ರವಾಗಿ ಭಾರತೀಯ ತಂಡದಲ್ಲಿ ಅವಕಾಶವನ್ನು ನೀಡಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಆದರೆ ಗವಾಸ್ಕರ್ ಅವರ ಈ ಹೇಳಿಕೆಗೆ ವ್ಯತಿರಿಕ್ತವಾದ ಅಭಿಪ್ರಾಯವನ್ನು ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಆವೃತ್ತಿಯಲ್ಲಿ ತಮ್ಮ ವೇಗದ ಬೌಲಿಂಗ್ ಮೂಲಕ ಮಿಂಚುಹರಿಸಿರುವ ಉಮ್ರಾಮ್ ಮಲಿಕ್ ವೇಗದ ಜೊತೆಗೆ ವಿಕೆಟ್ ಕೀಳುವ ಮೂಲಕವೂ ಗಮನಸೆಳೆದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದಲ್ಲಿ ಉಮ್ರಾನ್ ಮಲಿಕ್‌ಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯಗಳು ಹಲವು ಕ್ರಿಕೆಟ್ ಪಂಡಿತರಿಂದ ವ್ಯಕ್ತವಾಗಿದೆ. ಸುನಿಲ್ ಗವಾಸ್ಕರ್ ಕೂಡ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಬೇಕಿದೆ. ಅವರ ಬೌಲಿಂಗ್‌ನಲ್ಲಿರುವ ವೇಗ ಇಂಗ್ಲೆಂಡ್ ಪಿಚ್‌ನಲ್ಲಿ ತಂಡಕ್ಕೆ ನೆರವಾಗಬಹುದು ಎಂದಿದ್ದರು.

ಸಾಧನೆಯ ಸಂಕಲ್ಪ: 9 ವರ್ಷಗಳ ನಂತರ ತವರಿಗೆ ಮರಳುತ್ತಿರುವ MI ಆಟಗಾರನ ರೋಚಕ ಕಥೆಸಾಧನೆಯ ಸಂಕಲ್ಪ: 9 ವರ್ಷಗಳ ನಂತರ ತವರಿಗೆ ಮರಳುತ್ತಿರುವ MI ಆಟಗಾರನ ರೋಚಕ ಕಥೆ

ಆದರೆ ಕ್ರಿಕ್ ಇನ್ಫೋ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಆಕಾಶ್ ಚೋಪ್ರ ಉಮ್ರಾನ್ ಮಲಿಕ್ ಬಗ್ಗೆ ಮಾತನಾಡಿದ್ದಾರೆ. "ಉಮ್ರಾನ್ ಮಲಿಕ್ ಇನ್ನು ಕೂಡ ಕಲಿಕಾ ಹಂತದಲ್ಲಿದ್ದಾರೆ. ಅವರು ಭಾರತ ತಂಡವನ್ನು ಪ್ರತಿನಿಧಿಸಲು ಇನ್ನೂ ಸಿದ್ಧವಾಗಿಲ್ಲ. ಖಂಡಿತವಾಗಿಯೂ ನಾವು ಆತ ಗಂಟೆಗೆ 150 ಕಿ.ಮೀ ಗಿಂತ ವೇಗವಾಗಿ ಬೌಲಿಂಗ್ ನಡೆಸುವುದನ್ನು ನೋಡಲು ಉತ್ಸುಕರಾಗಿದ್ದೇವೆ. ನಮಗೆ ಈ ಸಂಗತಿ ಬಹಳಷ್ಟು ಖುಷಿ ನೀಡಿದೆ. ಆದರೆ ಆ ಹುಡುಗ ಇನ್ನೂ ಕೂಡ ಸಾಕಷ್ಟು ಕಲಿತುಕೊಳ್ಳಬೇಕಿದೆ. ಆತ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಂದರ್ಭ ಬರಲಿದೆ. ಆದರೆ ಈ ಕ್ಷಣಕ್ಕೆ ಆತ ಸದಕ್ಕೆ ಸಿದ್ಧವಾಗಿಲ್ಲ ಎನಿಸುತ್ತದೆ ಎಂದಿದ್ದಾರೆ ಆಕಾಶ್ ಚೋಪ್ರ.

ಆರಂಭಿಕ 8 ಪಂದ್ಯಗಳಲ್ಲಿ 15 ವಿಕೆಟ್ ಸಂಪಾದಿಸುವ ಮೂಲಕ ಉಮ್ರಾನ್ ಮಲಿಕ್ ಎಲ್ಲರ ಚರ್ಚೆಗೆ ಕಾರಣವಾಗಿದ್ದರು. ಇದರಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಡೆದ ಐದು ವಿಕೆಟ್‌ಗಳ ಗೊಂಚಲು ಕೂಡ ಸೇರಿತ್ತು. ಆದರೆ ಅದಾದ ಬಳಿಕ ಉಮ್ರಾನ್ ಮಲಿಕ್ ಸ್ಥಿರ ಪ್ರದರ್ಶನ ನೀಡಲು ವಿಫಲವಾದರು. ಮುಂದಿನ ಮೂರು ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆಯಲೂ ವಿಫಲವಾದರು.

ಗುರುತು ಸಿಗದಂತೆ ಮಾಸ್ಕ್ ಧರಿಸಿ ಬೆಂಗಳೂರಿನ ಬೇಕರಿಯಲ್ಲಿ ತಿಂಡಿ ತಿನ್ನಲು ಹೊರಟ ಕೊಹ್ಲಿ; ಆಗಿದ್ದೇನು?ಗುರುತು ಸಿಗದಂತೆ ಮಾಸ್ಕ್ ಧರಿಸಿ ಬೆಂಗಳೂರಿನ ಬೇಕರಿಯಲ್ಲಿ ತಿಂಡಿ ತಿನ್ನಲು ಹೊರಟ ಕೊಹ್ಲಿ; ಆಗಿದ್ದೇನು?

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಸತತ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ನಂತರದ ನಾಲ್ಕು ಪಂದ್ಯಗಳಲ್ಲಿ ಮತ್ತೆ ಸೋಲು ಅನುಭವಿಸಿದ್ದು ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. 11 ಪಂದ್ಯಗಳಲ್ಲಿ 5 ಗೆಲುವು ಹಾಗೂ 6 ಸೋಲು ಅನುಭವಿಸಿರುವ ಎಸ್‌ಆರ್‌ಹೆಚ್ 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಹೀಗಾಘಿ ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಉಳಿದುಕೊಳ್ಳಲು ಸರ್ವ ಪ್ರಯತ್ನವನ್ನು ಎಸ್‌ಆರ್‌ಹೆಚ್ ಪಡೆ ನಡೆಸಲಿದೆ.

Story first published: Friday, May 13, 2022, 16:30 [IST]
Other articles published on May 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X